ಬಿಲ್ಡರ್ ಆತ್ಮಹತ್ಯೆಗೆ ಶರಣು; ಕಿರುಕುಳ ಆರೋಪ
ಮನೆಯಲ್ಲೇ ಬಿಲ್ಡರ್ ಒಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಗರದ ಬಿಟಿಎಂ ಲೇಔಟ್ ನಲ್ಲಿ ನಡೆದಿದೆ. ವಿವೇಕ್ (50) ಆತ್ಮಹತ್ಯೆಗೆ ಶರಣಾದ ಬಿಲ್ಡರ್.

ಬೆಂಗಳೂರು: ಮನೆಯಲ್ಲೇ ಬಿಲ್ಡರ್ ಒಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಗರದ ಬಿಟಿಎಂ ಲೇಔಟ್ ನಲ್ಲಿ ನಡೆದಿದೆ. ವಿವೇಕ್ (50) ಆತ್ಮಹತ್ಯೆಗೆ ಶರಣಾದ ಬಿಲ್ಡರ್.
ಉಪಮುಖ್ಯಮಂತ್ರಿ ಅಶ್ವತ್ಥ್ ನಾರಾಯಣ ಅವರ ಬಳಿ ಕಾರ್ಯನಿರ್ವಹಿಸುತ್ತಿದ್ದ ಸಿಬ್ಬಂದಿಯ ಸಂಬಂಧಿ ಬಿಲ್ಡರ್ ರಹೀಂ ಹಾಗೂ ಅವರ ಪುತ್ರನ ಕಿರುಕುಳದಿಂದ ಬೇಸತ್ತು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
ಜಾಯಿಂಟ್ ವೆಂಚರ್ಸ್ ನಲ್ಲಿ ರಹೀಂ ಹಾಗೂ ವಿವೇಕ್ ಸೇರಿ ಅಪಾರ್ಟ್ ಮೆಂಟ್ ವೊಂದು ನಿರ್ಮಿಸುತ್ತಿದ್ದರು. ಆದರೆ, ಶೇ. 90ರಷ್ಟು ಕಾಮಗಾರಿ ಪೂರ್ಣಗೊಂಡಿದ ಬಳಿಕ ಅಪಾರ್ಟ್ ಮೆಂಟ್ ನಿರ್ಮಾಣಕ್ಕೆ ರಹೀಂ ಅಡ್ಡಗಾಲು ಹಾಕಿದರು. ಅಲ್ಲದೇ, ಒಪ್ಪಂದದಂತೆ ವಿವೇಕಗೆ ಹಣ ನೀಡದೆ ಕಿರುಕುಳ ನೀಡಲು ಆರಂಭಿಸಿದರು. ನಿನ್ನೆ ಬೆಳಿಗ್ಗೆ ರಹೀಂ ಅವರ ಬೆಂಬಲಿಗರು ಅಪಾರ್ಟ್ ಮೆಂಟ್ ಕಟ್ಟಡದ ಹತ್ತಿರ ಬಂದು ದಾಂಧಲೆ ನಡೆಸಿದ್ದರು ಎಂಬ ಆರೋಪ ಕೇಳಿ ಬಂದಿದೆ.
ಹೀಗಾಗಿಯೇ ಮನನೊಂದು ವಿವೇಕ್ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಮೈಕೋಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


