ರಾಜ್ಯ

ಜನ್ಮ ದಿನ ಆಚರಿಸದಿರಲು ಎಚ್.ಡಿ. ಕುಮಾರಸ್ವಾಮಿ ನಿರ್ಧಾರ

ನಾಡಿದ್ದು ಬುಧವಾರ ಮಾಜಿ ಮುಖ್ಯಮಂತ್ರಿ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್.ಡಿ.ಕುಮಾರಸ್ವಾಮಿ ಅವರ 62 ನೇ ಹುಟ್ಟುಹಬ್ಬ. ಈ ಬಾರಿ ತಮ್ಮ ಜನ್ಮದಿನಾಚರಣೆಯನ್ನು ಆಚರಿಸದಿರಲು ಎಚ್.ಡಿ. ಕುಮಾರಸ್ವಾಮಿ ನಿರ್ಧರಿಸಿದ್ದಾರೆ.

ಜನ್ಮ ದಿನ ಆಚರಿಸದಿರಲು ಎಚ್.ಡಿ. ಕುಮಾರಸ್ವಾಮಿ ನಿರ್ಧಾರ
ಎಚ್. ಡಿ. ಕುಮಾರಸ್ವಾಮಿ
Published On :

ಬೆಂಗಳೂರು: ನಾಡಿದ್ದು ಬುಧವಾರ ಮಾಜಿ ಮುಖ್ಯಮಂತ್ರಿ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್.ಡಿ.ಕುಮಾರಸ್ವಾಮಿ ಅವರ 62 ನೇ ಹುಟ್ಟುಹಬ್ಬ. ಈ ಬಾರಿ ತಮ್ಮ ಜನ್ಮದಿನಾಚರಣೆಯನ್ನು ಆಚರಿಸದಿರಲು ಎಚ್.ಡಿ. ಕುಮಾರಸ್ವಾಮಿ ನಿರ್ಧರಿಸಿದ್ದಾರೆ.

 ಕೊರೋನಾ ಸಂಕಷ್ಟವು ಜನರನ್ನು ಬಾಧಿಸುತ್ತಿರುವ ಪ್ರಸಕ್ತ ಸನ್ನಿವೇಶದಲ್ಲಿ ಹುಟ್ಟುಹಬ್ಬ ಆಚರಿಸದಿರಲು ನಿರ್ಧರಿಸಿದ್ದು, ಜನ್ಮದಿನದಂದು ಬೆಂಗಳೂರಿನಲ್ಲಿ ಇರುವುದಿಲ್ಲ. ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು, ಹಿತೈಷಿಗಳು  ತಾವಿರುವ ಕಡೆಯಿಂದಲೇ ಹಾರೈಸಿ, ಅಭಿಮಾನ ತೋರಬೇಕೆಂದು ಎಚ್  ಡಿಕೆ ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ.

ಪ್ರತಿ ಜನ್ಮದಿನಗಳು ನಮ್ಮ ಇರುವಿಕೆಯನ್ನು ನೆನಪಿಸುತ್ತವೆ ನಿಜ, ಆದರೆ ಬದುಕಿದ್ದಷ್ಟು ದಿನ ಕಷ್ಟದಲ್ಲಿರುವ ಜನರ ಒಳಿತಿಗೆ ನಿಸ್ವಾರ್ಥವಾಗಿ, ಕಾರುಣ್ಯಭರಿತವಾಗಿ ದುಡಿದಾಗ ನಮ್ಮ‌ಹುಟ್ಟು ಸಾರ್ಥಕವಾಗುತ್ತದೆ ಎಂಬುದು ತಮ್ಮ ನಂಬಿಕೆ ಮತ್ತು ನಡೆಯಾಗಿರುವುದಾಗಿ ಕುಮಾರಸ್ವಾಮಿ ಹೇಳಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.