ರಾಜ್ಯ

ಮೈಸೂರು ಜಿಲ್ಲಾಧಿಕಾರಿಯಾಗಿ ಬಿ.ಶರತ್ ರನ್ನು ಮರುನೇಮಿಸಿ: ಸಿಎಟಿ; ರೋಹಿಣಿ ಸಿಂಧೂರಿಗೆ ಹಿನ್ನಡೆ

ಮೈಸೂರು ಜಿಲ್ಲಾಧಿಕಾರಿಯಾಗಿ ಬಿ. ಶರತ್ ಅವರನ್ನು ಮರುನೇಮಕ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಕೇಂದ್ರೀಯ ಆಡಳಿತಾತ್ಮಕ ನ್ಯಾಯಾಧಿಕರಣ(ಸಿಎಟಿ) ಆದೇಶ ನೀಡಿದೆ.

ಮೈಸೂರು ಜಿಲ್ಲಾಧಿಕಾರಿಯಾಗಿ ಬಿ.ಶರತ್ ರನ್ನು ಮರುನೇಮಿಸಿ: ಸಿಎಟಿ; ರೋಹಿಣಿ ಸಿಂಧೂರಿಗೆ ಹಿನ್ನಡೆ
ಶರತ್ - ರೋಹಿಣಿ ಸಿಂಧೂರಿ
Published On :

ಬೆಂಗಳೂರು: ಮೈಸೂರು ಜಿಲ್ಲಾಧಿಕಾರಿಯಾಗಿ ಬಿ. ಶರತ್ ಅವರನ್ನು ಮರುನೇಮಕ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಕೇಂದ್ರೀಯ ಆಡಳಿತಾತ್ಮಕ ನ್ಯಾಯಾಧಿಕರಣ(ಸಿಎಟಿ) ಆದೇಶ ನೀಡಿದೆ. ಇದರಿಂದ ಹಾಲಿ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರಿಗೆ ತೀವ್ರ ಹಿನ್ನಡೆಯಾಗಿದೆ.

ಈ ಸಂಬಂಧ ಡಿ. 22ರೊಳಗೆ ಆದೇಶ ಹೊರಡಿಸಲು ರಾಜ್ಯ ಸರ್ಕಾರಕ್ಕೆ ಸೂಚಿಸಿ ಎಂದು ಅಡ್ವೊಕೇಟ್ ಜನರಲ್‌ಗೆ ನ್ಯಾಯಾಧಿಕರಣ ನಿರ್ದೇಶಿಸಿದೆ.

ಈ ಆದೇಶ ಪಾಲಿಸಲು ಸರ್ಕಾರ ವಿಫಲವಾದಲ್ಲಿ ಡಿ. 22 ರಂದು ಸಿಎಟಿ ಈ ಬಗ್ಗೆ ಆದೇಶ ಹೊರಡಿಸಲಿದೆ ಎಂದು ಹೇಳಿದೆ.

ಮೈಸೂರು ಜಿಲ್ಲಾಧಿಕಾರಿಯಾಗಿ ನೇಮಕವಾಗಿದ್ದ ಶರತ್ ಬಿ. ಅವರನ್ನು ಸರ್ಕಾರ ಏಕಾಏಕಿ ವರ್ಗಾವಣೆ ಮಾಡಿತ್ತು. ರೋಹಿಣಿ ಸಿಂಧೂರಿ ಅವರನ್ನು ಜಿಲ್ಲಾಧಿಕಾರಿಯಾಗಿ ನೇಮಕ ಮಾಡಿತ್ತು. ಇದನ್ನು ಶರತ್ ಸಿಎಟಿಯಲ್ಲಿ ಪ್ರಶ್ನೆ ಮಾಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.