ರಾಜ್ಯ

ಖ್ಯಾತ ವಿಜ್ಞಾನಿ ರೊದ್ದಂ ನರಸಿಂಹ ನಿಧನಕ್ಕೆ ಮುಖ್ಯಮಂತ್ರಿ ಸಂತಾಪ

ಜಗದ್ವಿಖ್ಯಾತ ವಿಜ್ಞಾನಿ, ಪದ್ಮವಿಭೂಷಣ ರೊದ್ದಂ ನರಸಿಂಹ ಅವರ ನಿಧನಕ್ಕೆಬ ಮುಖ್ಯಮಂತ್ರಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಖ್ಯಾತ ವಿಜ್ಞಾನಿ ರೊದ್ದಂ ನರಸಿಂಹ ನಿಧನಕ್ಕೆ ಮುಖ್ಯಮಂತ್ರಿ ಸಂತಾಪ
ಗದ್ವಿಖ್ಯಾತ ವಿಜ್ಞಾನಿ, ಪದ್ಮವಿಭೂಷಣ ರೊದ್ದಂ ನರಸಿಂಹ
Published On :

ಬೆಂಗಳೂರು: ಜಗದ್ವಿಖ್ಯಾತ ವಿಜ್ಞಾನಿ, ಪದ್ಮವಿಭೂಷಣ ರೊದ್ದಂ ನರಸಿಂಹ ಅವರ ನಿಧನಕ್ಕೆ ಮುಖ್ಯಮಂತ್ರಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಏರೋಸ್ಪೇಸ್ ಮತ್ತು ಬಾಹ್ಯಾಕಾಶ ವಿಜ್ಞಾನಕ್ಕೆ ರೊದ್ದಂ ನರಸಿಂಹ ಅವರ ಕೊಡುಗೆ ಮಹತ್ವಪೂರ್ಣವಾದುದು. ಇಂಗ್ಲಿಷ್, ಕನ್ನಡ ಮತ್ತು ಸಂಸ್ಕೃತ ಭಾಷಾ ಪ್ರವೀಣರಾಗಿದ್ದ ಅವರು ವಿಜ್ಞಾನ ಮತ್ತು ತತ್ವಜ್ಞಾನದ ನಡುವಿನ ಸಂಬಂಧದ ಕುರಿತಂತೆ ರಚಿಸಿದ ಕೃತಿಗಳೂ ಅಷ್ಟೇ ಮಹತ್ವ ಹೊಂದಿದ್ದವು ಎಂದು ಮುಖ್ಯಮಂತ್ರಿಗಳು ಬಣ್ಣಿಸಿದ್ದಾರೆ.

ಅವರ ನಿಧನದಿಂದ ದೇಶ ಶ್ರೇಷ್ಠ ವಿಜ್ಞಾನಿಯೊಬ್ಬರನ್ನು ಕಳೆದುಕೊಂಡಿದೆ. ಅವರ ಆತ್ಮಕ್ಕೆ ಭಗವಂತನು ಶಾಂತಿಯನ್ನು ಕರುಣಿಸಲಿ. ಅವರ ಕುಟುಂಬದವರು, ಅಭಿಮಾನಿ ಬಳಗದವರಿಗೆ ಈ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.