ಕೋವಿಡ್-19: ಜೂನ್ 17 ಬಳಿಕ ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಅತಿ ಕಡಿಮೆ ಪ್ರಕರಣ
ರಾಜ್ಯದಲ್ಲಿ ಜೂನ್ 17ರ ಬಳಿಕ ಇದೇ ಮೊದಲ ಬಾರಿಗೆ ಅತ್ಯಂತ ಕನಿಷ್ಟ ಪ್ರಕರಣಗಳು ಪತ್ತೆಯಾಗಿವೆ.

ಬೆಂಗಳೂರು: ರಾಜ್ಯದಲ್ಲಿ ಜೂನ್ 17ರ ಬಳಿಕ ಇದೇ ಮೊದಲ ಬಾರಿಗೆ ಅತ್ಯಂತ ಕನಿಷ್ಟ ಪ್ರಕರಣಗಳು ಪತ್ತೆಯಾಗಿವೆ.
ರಾಜ್ಯದಲ್ಲಿ ನಿನ್ನೆ ಒಂದೇ ದಿನ 830 ಹೊಸ ಕೊರೋನಾ ಸೋಂಕಿನ ಪ್ರಕರಣಗಳು ದೃಢಪಟ್ಟಿದ್ದು, 10 ಮಂದಿ ಸಾವಿಗೀಡಾಗಿದ್ದಾರೆ.
ಇದೇ ವೇಳೆ 2,164 ಮಂದಿ ಗುಣಮುಖರಾಗಿದ್ದು, ಸಕ್ರಿಯ ಸೋಂಕಿತರ ಸಂಖಅಯೆ 16,065ಕ್ಕೆ ಇಳಿದಿದೆ. 10 ಮಂದಿ ಮೃತರಾಗಿದ್ದಾರೆ.
ಜೂನ್ 17ರಂದು 917 ಮಂದಿಯಲ್ಲಿ ಸೋಂಕು ಪತ್ತೆಯಾಗಿತ್ತು. ಆ ಬಳಿಕ ದಿನಗಳಲ್ಲಿ ಸೋಂಕಿನ ಪ್ರಮಾಣ ನಿರಂತರವಾಗಿ ಸಾವಿರ ಮೇಲೆಯೇ ಹೊಸ ಪ್ರಕರಣಗಳ ಪತ್ತೆಯಾಗುತ್ತಿತ್ತು. ಕೊರೋನಾ ಸೋಂಕಿನ ಎರಡನೇ ಅಲೆ ಅಪ್ಪಳಿಸಬಹುದು ಎಂಬ ಆತಂಕದ ನಡುವೆಯೂ ಕಲೆದ 15 ದಿನದಲ್ಲಿ ಮೂರನೇ ಬಾರಿ ಸಾವಿರಕ್ಕಿಂತ ಕಡಿಮೆ ಪ್ರಕರಣಗಳು ರಾಜ್ಯದಲ್ಲಿ ವರದಿಯಾಗಿದೆ.
ಸೋಮವಾರ ಕೇವಲ 64,855 ಕೊರೋನಾ ಪರೀಕ್ಷೆ ನಡೆದಿದ್ದು, ಇದು ಸೆಪ್ಟೆಂಬರ್ 28ರ (58,862) ಬಳಿಕದ ಅತ್ಯಂತ ಕಡಿಮೆ ಪರೀಕ್ಷೆಯಾಗಿದೆ.
ರಾಜ್ಯದಲ್ಲಿ ಈ ವರೆಗೆ ಒಟ್ಟು 9.02 ಲಕ್ಷ ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಇವರಲ್ಲಿ 8.74 ಲಕ್ಷ ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ.
ಸೋಂಕಿನ ಪ್ರಮಾಣ ಕಡಿಮೆಯಾಗುತ್ತಿದ್ದರೂ, ರಾಜ್ಯದಲ್ಲಿ ಎರಡನೇ ಅಲೆ ಶೀಘ್ರದಲ್ಲೇ ಆರಂಭವಾಗುವ ಸಾಧ್ಯತೆಗಳಿವೆ ಎಂದು ತಜ್ಞರು ಎಚ್ಚರಿಕೆ ನೀಡುತ್ತಿದ್ದಾರೆ. ಇದಕ್ಕೆ ಪ್ರತಿಕ್ರಿಯೆ ನೀಡಿರುವ ರಾಜ್ಯ ಸರ್ಕಾರ, ಪರಿಸ್ಥಿತಿ ಎದುರಿಸಲೂ ಪೂರ್ಣ ಪ್ರಮಾಣದಲ್ಲಿ ಸಿದ್ಧರಿದ್ದೇವೆಂದು ಹೇಳಿದೆ.
ಸಾಮಾಜಿಕ ಅಂತರ, ಮಾಸ್ಕ್ ಧಾರಣೆ, ಶುಚಿತ್ವ ಕಾಪಾಡುವುದರಿಂದ ಕೊರೋನಾದಿಂದ ದೂರ ಇರಬಹುದು. ಆರಂಭದಿಂದಲೂ ನಾವಿದನ್ನೂ ಹೇಳುತ್ತಲೇ ಇದ್ದೇವೆ. ಸಾಕಷ್ಟು ಜನರು ಈ ನಿಯಮವನ್ನು ಅನುಸರಿಸದೇ ಇರುವುದು ಕಂಡು ಬರುತ್ತಿದೆ. ಪ್ರಕರಣಗಳನ್ನು ಕಡಿಮೆ ಪ್ರಮಾಣದಲ್ಲಿರುವಂತೆ ನೋಡಿಕೊಳ್ಳಲು, ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲೇಬೇಕಿದೆ ಎಂದು ತಜ್ಞರು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


