ಹಿರಿಯ ಪತ್ರಕರ್ತ ವೈ.ರವಿ ನಿಧನ; ಸಿಎಂ ಯಡಿಯೂರಪ್ಪ ಶೋಕ ಸಂದೇಶ
ಹಿರಿಯ ಪತ್ರಕರ್ತ ವೈ.ರವಿ(58) ಇಹಲೋಕ ತ್ಯಜಿಸಿದ್ದಾರೆ. ಅವರ ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿದ್ದ ಪರಿಣಾಮ ಮಂಗಳೂರು ಆಸ್ಪತ್ರೆಗೆ ದಾಖಲಾಗಿದ್ದರು.

ಮಂಗಳೂರು: ಹಿರಿಯ ಪತ್ರಕರ್ತ ವೈ.ರವಿ(58) ಇಹಲೋಕ ತ್ಯಜಿಸಿದ್ದಾರೆ. ಅವರ ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿದ್ದ ಪರಿಣಾಮ ಮಂಗಳೂರು ಆಸ್ಪತ್ರೆಗೆ ದಾಖಲಾಗಿದ್ದರು.
ಕಾಸರಗೋಡು ಮೂಲದ ರವಿ ಶಿವಮೊಗ್ಗ, ಮಂಡ್ಯ, ಗದಗ ಜಿಲ್ಲಾ ವರದಿಗಾರ, ಮಂಗಳೂರು ಪ್ರಜಾವಾಣಿ ಬ್ಯುರೊ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ್ದರು. ಇವರು ಜಮ್ಮು ಕಾಶ್ಮೀರದ ಶ್ರೀನಗರ ಹಾಗೂ ಕಲಬುರಗಿಯಲ್ಲಿ ಸಹ ಕರ್ತವ್ಯ ನಿರ್ವಹಿಸಿದ್ದರು.
ಪತ್ರಕರ್ತ ರವಿ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಶೋಕ ಸಂದೇಶ ನೀಡಿದ್ದಾರೆ.
"ಮೃದು ಮಾತಿನ, ಸ್ನೇಹ ಜೀವಿಯಾಗಿದ್ದ ವೈ.ರವಿ ಅವರು ಪ್ರಜಾವಾಣಿಯಲ್ಲಿ ವಿವಿಧ ಜಿಲ್ಲೆಗಳಲ್ಲಿ ವರದಿಗಾರರಾಗಿ, ಬ್ಯೂರೋ ಮುಖ್ಯಸ್ಥರಾಗಿ ಸಲ್ಲಿಸಿದ ಸೇವೆ ಅನನ್ಯ. ಅವರ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಕುಟುಂಬಕ್ಕೆ ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ" ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


