ರಾಜ್ಯ

ಶ್ರೀ ಶ್ರೀ ರವಿಶಂಕರ್ ಗೆ ‘ಕಾಯಕ ಶ್ರೀ’ ಪ್ರಶಸ್ತಿ

ಆರ್ಟ್‌ ಆಫ್ ಲಿವಿಂಗ್ ಸಂಸ್ಥೆಯ ಅಧ್ಯಕ್ಷ ಶ್ರೀ ಶ್ರೀ ರವಿಶಂಕರ್ ಗುರೂಜಿ ಅವರನ್ನು ಗೋಕಾಕದ ಶೂನ್ಯ ಸಂಪಾದನಾ ಮಠ ನೀಡಲಿರುವ ‘ಕಾಯಕ ಶ್ರೀ’ ಪ್ರಶಸ್ತಿ ಗೆ ಆಯ್ಕೆ ಮಾಡಲಾಗಿದೆ.

ಶ್ರೀ ಶ್ರೀ ರವಿಶಂಕರ್ ಗೆ ‘ಕಾಯಕ ಶ್ರೀ’ ಪ್ರಶಸ್ತಿ
ಶ್ರೀ ಶ್ರೀ ರವಿಶಂಕರ್
Published On :

ಗೋಕಾಕ: ಆರ್ಟ್‌ ಆಫ್ ಲಿವಿಂಗ್ ಸಂಸ್ಥೆಯ ಅಧ್ಯಕ್ಷ ಶ್ರೀ ಶ್ರೀ ರವಿಶಂಕರ್ ಗುರೂಜಿ ಅವರನ್ನು ಗೋಕಾಕದ  ಶೂನ್ಯ ಸಂಪಾದನಾ ಮಠ ನೀಡಲಿರುವ ‘ಕಾಯಕ ಶ್ರೀ’ ಪ್ರಶಸ್ತಿ ಗೆ ಆಯ್ಕೆ ಮಾಡಲಾಗಿದೆ.

ಲೈಂಗೈಕ್ಯ. ಬಸವ ಸ್ವಾಮೀಜಿ ಪುಣ್ಯಸ್ಮರಣೋತ್ಸವ ಅಂಗವಾಗಿ 16ನೇ ಶರಣ ಸಂಸ್ಕೃತಿ ಉತ್ಸವ ಫೆ.1ರಿಂದ 4 ರವರೆಗೆ ಚನ್ನಬಸವೇಶ್ವರ ವಿದ್ಯಾಪೀಠದ ಆವರಣದಲ್ಲಿ ನೆರವೇರಲಿದ್ದು ಈ ವೇಳೆ ಉತ್ಸವದ ಮೊದಲ ದಿನ ಪ್ರಶಸ್ತಿ ಪ್ರಧಾನ ಮಾಡಲಾಗುತ್ತದೆ ಎಂದು  ಪೀಠಾಧಿಪತಿ ಮುರುಘರಾಜೇಂದ್ರ ಸ್ವಾಮೀಜಿ ತಿಳಿಸಿದ್ದಾರೆ.

ಪ್ರಶಸ್ತಿಯು 1 ಲಕ್ಷ ರೂ. ನಗದು ಬಹುಮಾನ ಒಳಗೊಂಡಿದೆ.

ಕಳೆದ ವರ್ಷ ಖ್ಯಾತ ಹಿನ್ನೆಲೆ ಗಾಯಕ ಎಸ್.ಪಿ. ಬಾಲಸುಬ್ರಮಣ್ಯಂ ಹಾಗೂ ಭಾರತದ ಕ್ಷಿಪಣಿ ಮಹಿಳೆ ಡಾ. ತೆಸ್ಸಿ ಥಾಮಸ್ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.