ರಾಜ್ಯ

ಮಾಜಿ ಸಚಿವೆ ರೇಣುಕಾ ರಾಜೇಂದ್ರನ್ ನಿಧನ

ಮಾಜಿ ಸಚಿವೆ ರೇಣುಕಾ ರಾಜೇಂದ್ರನ್ ಅವರು ಹೃದಯಾಘಾತದಿಂದ ಬೆಂಗಳೂರಿನಲ್ಲಿ ಮಂಗಳವಾರ ನಿಧನರಾಗಿದ್ದಾರೆ.

ಮಾಜಿ ಸಚಿವೆ ರೇಣುಕಾ ರಾಜೇಂದ್ರನ್ ನಿಧನ
ರೇಣುಕಾ ರಾಜೇಂದ್ರನ್
Published On :

ಬೆಂಗಳೂರು: ಮಾಜಿ ಸಚಿವೆ ರೇಣುಕಾ ರಾಜೇಂದ್ರನ್ ಅವರು ಹೃದಯಾಘಾತದಿಂದ ಬೆಂಗಳೂರಿನಲ್ಲಿ ಮಂಗಳವಾರ ನಿಧನರಾಗಿದ್ದಾರೆ. 

ನಗರದ ಕೋಟೆ ಪ್ರದೇಶದಲ್ಲಿ ವಾಸಿಸುತ್ತಿದ್ದ ರೇಣುಕಾ ಅವರಿಗೆ ನಿನ್ನೆ ಮಧ್ಯಾಹ್ನ ಹೃದಯಾಘಾತವಾಗಿದೆ. ಕೂಡಲೇ ಬೆಂಗಳೂರಿನ ಜಯದೇವ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ಕಳೆದ ರಾತ್ರಿ ನಿಧನರಾಗಿದ್ದಾರೆಂದು ತಿಳಿದುಬಂದಿದೆ. 

ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸಿದ್ದ ಅವರು, ೧೯೭೭ರಿಂದ ೧೯೮೨ರವರೆಗೆ ಅಂದಿನ ಮುಖ್ಯಮಂತ್ರಿ ಗುಂಡೂರಾವ್ ಸರ್ಕಾರದಲ್ಲಿ ರೇಷ್ಮೆ, ಕ್ರೀಡೆ ಮತ್ತು ಯುವಜನ ಸೇವೆ ಹಾಗೂ ಸಣ್ಣ ಕೈಗಾರಿಕಾ ಖಾತೆಯ ಸಚಿವರಾಗಿ ಸೇವೆ ಸಲ್ಲಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.