ರಾಜ್ಯ

ಬಾಗಲಕೋಟೆ: ನಾಮಪತ್ರ ಸಲ್ಲಿಸಲು ಬಂದಿದ್ದ ಅಭ್ಯರ್ಥಿ ಹೃದಯಾಘಾತದಿಂದ ಸಾವು

ಗ್ರಾಮ ಪಂಚಾಯಿತಿ ಚುನಾವಣೆಗೆ ನಾಮಪತ್ರ ಸಲ್ಲಿಸಲು ಬಂದಿದ್ದ ಅಭ್ಯರ್ಥಿಯೊಬ್ಬರು ಪಂಚಾಯತ್ ಆವರಣದಲ್ಲೇ ಹೃದಯಾಘಾತವಾಗಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಇಳಕಲ್ ತಾಲೂಕಿನಲ್ಲಿ ಬುಧವಾರ ಸಂಭವಿಸಿದೆ.

ಬಾಗಲಕೋಟೆ: ನಾಮಪತ್ರ ಸಲ್ಲಿಸಲು ಬಂದಿದ್ದ ಅಭ್ಯರ್ಥಿ ಹೃದಯಾಘಾತದಿಂದ ಸಾವು
ಸಾಂದರ್ಭಿಕ ಚಿತ್ರ
Published On :

ಬಾಗಲಕೋಟೆ: ಗ್ರಾಮ ಪಂಚಾಯಿತಿ ಚುನಾವಣೆಗೆ ನಾಮಪತ್ರ ಸಲ್ಲಿಸಲು ಬಂದಿದ್ದ ಅಭ್ಯರ್ಥಿಯೊಬ್ಬರು ಪಂಚಾಯತ್ ಆವರಣದಲ್ಲೇ ಹೃದಯಾಘಾತವಾಗಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಇಳಕಲ್ ತಾಲೂಕಿನಲ್ಲಿ ಬುಧವಾರ ಸಂಭವಿಸಿದೆ.

ಮೃತ ಅಭ್ಯರ್ಥಿ ಯಮನಪ್ಪ ದೋಟಿಹಾಳ(36) ಎಂದು ಗುರುತಿಸಲಾಗಿದೆ. ಮೃತರು ಗ್ರಾಮದ ವಾರ್ಡ್ ಸಂಖ್ಯೆ 2ರಿಂದ ಕಂದಗಲ್ ಗ್ರಾಮ ಪಂಚಾಯತ್ ಚುನಾವಣೆಗೆ ಸ್ಪರ್ಧಿಸಲು ನಾಮಪತ್ರ ಸಲ್ಲಿಸಲು ಆಗಮಿಸಿದ್ದರು. ಈ ವೇಳೆ ಪಂಚಾಯಿತಿ ಆವರಣಕ್ಕೆ ಪ್ರವೇಶಿಸುತ್ತಿದ್ದಂತೆ ಹೃದಯಾಘಾತವಾಗಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
 
ಮೃತರು ಎರಡನೇ ಹಂತದ ಗ್ರಾಪಂ ಚುನಾವಣೆಗೆ ಸ್ಪರ್ಧಿಸಲು ಬಂದಿದ್ದರು. ನಾಮಪತ್ರ ಸಲ್ಲಿಸುವ ಮುನ್ನವೇ ಅವರ ಪ್ರಾಣ ಪಕ್ಷಿ ಹಾರಿ ಹೋಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.