ರಾಜ್ಯ

ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಹುಟ್ಟುಹಬ್ಬ: ಪ್ರಧಾನಿ ಮೋದಿ, ಸಿಎಂ ಯಡಿಯೂರಪ್ಪ ಸೇರಿ ಬಿಜೆಪಿ ನಾಯಕರಿಂದ ಶುಭಾಶಯ

ಮಾಜಿ ಮುಖ್ಯಮಂತ್ರಿ, ಜೆಡಿಎಸ್ ನಾಯಕ ಹೆಚ್ ಡಿ ಕುಮಾರಸ್ವಾಮಿ ಅವರ 61ನೇ ಹುಟ್ಟುಹಬ್ಬದ ಅಂಗವಾಗಿ ಪ್ರಧಾನಿ ಮೋದಿ ಸೇರಿದಂತೆ ಮುಖ್ಯಮಂತ್ರಿ ಬಿ ಎಸ್.ಯಡಿಯೂರಪ್ಪ, ಆಡಳಿತ, ಪ್ರತಿಪಕ್ಷಗಳ ನಾಯಕರು, ಗಣ್ಯರು, ಜೆಡಿಎಸ್ ಕಾರ್ಯಕರ್ತರು ಶುಭಾಶಯ ಕೋರಿದ್ದಾರೆ.

ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಹುಟ್ಟುಹಬ್ಬ: ಪ್ರಧಾನಿ ಮೋದಿ, ಸಿಎಂ ಯಡಿಯೂರಪ್ಪ ಸೇರಿ ಬಿಜೆಪಿ ನಾಯಕರಿಂದ ಶುಭಾಶಯ
ಹೆಚ್ ಡಿ ಕುಮಾರಸ್ವಾಮಿ
Published On :

ಬೆಂಗಳೂರು: ಮಾಜಿ ಮುಖ್ಯಮಂತ್ರಿ, ಜೆಡಿಎಸ್ ನಾಯಕ ಹೆಚ್ ಡಿ ಕುಮಾರಸ್ವಾಮಿ ಅವರ 61ನೇ ಹುಟ್ಟುಹಬ್ಬದ ಅಂಗವಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸೇರಿದಂತೆ ಮುಖ್ಯಮಂತ್ರಿ ಬಿ ಎಸ್.ಯಡಿಯೂರಪ್ಪ, ಆಡಳಿತ, ಪ್ರತಿಪಕ್ಷಗಳ ನಾಯಕರು, ಗಣ್ಯರು, ಜೆಡಿಎಸ್ ಕಾರ್ಯಕರ್ತರು ಶುಭಾಶಯ ಕೋರಿದ್ದಾರೆ.

ಕರ್ನಾಟಕದ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿಯವರಿಗೆ 61ನೇ ಹುಟ್ಟುಹಬ್ಬದ ಶುಭಾಶಯಗಳು. ದೇವರು ಅವರಿಗೆ ಆಯುರಾರೋಗ್ಯ, ಐಶ್ವರ್ಯ ನೀಡಿ ಕರುಣಿಸಲಿ ಎಂದು ಮೋದಿ ಟ್ವೀಟ್ ಮಾಡಿ ಹರಸಿದ್ದಾರೆ.

ಮಾಜಿ ಪ್ರಧಾನಿ ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡರ ಪುತ್ರ ಹೆಚ್ ಡಿ ಕುಮಾರಸ್ವಾಮಿ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರೂ ಹೌದು. 

ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಕೂಡ ಹೆಚ್ ಡಿ ಕುಮಾರಸ್ವಾಮಿಯವರಿಗೆ ಹುಟ್ಟುಹಬ್ಬದ ಶುಭಕೋರಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.