ವರ್ತೂರು ಪ್ರಕಾಶ್ ಅಪಹರಣ ಪ್ರಕರಣದಲ್ಲಿ ರವಿ ಪೂಜಾರಿ ಪಾತ್ರ: ತನಿಖೆಗೆ ಮುಂದಾಗ ಪೊಲೀಸರು
ಮಾಜಿ ಸಚಿವ ವರ್ತೂರು ಪ್ರಕಾಶ್ ಅಪಹರಣ ಪ್ರಕರಣದಲ್ಲಿ ರವಿ ಪೂಜಾರಿ ಪಾತ್ರ ಇರುವ ಶಂಕೆಗಳು ವ್ಯಕ್ತವಾಗಿದ್ದು, ಈ ಆಯಾಮದಲ್ಲಿ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಬೆಂಗಳೂರು: ಮಾಜಿ ಸಚಿವ ವರ್ತೂರು ಪ್ರಕಾಶ್ ಅಪಹರಣ ಪ್ರಕರಣದಲ್ಲಿ ರವಿ ಪೂಜಾರಿ ಪಾತ್ರ ಇರುವ ಶಂಕೆಗಳು ವ್ಯಕ್ತವಾಗಿದ್ದು, ಈ ಆಯಾಮದಲ್ಲಿ ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಕೆಲ ದಿನಗಳ ಹಿಂದಷ್ಟೇ ಪೊಲೀಸರು ಕವಿರಾಜ್ ಎಂಬಾತನನ್ನು ಬಂಧನಕ್ಕೊಳಪಡಿಸಿದ್ದು. ಈತ ಭೂಗತ ಪಾತಕಿ ರವಿ ಪೂಜಾರಿ ಆಪ್ತನಾಗಿದ್ದಾನೆಂದು ಹೇಳಲಾಗುತ್ತಿದೆ. ಆರೋಪಿಯನ್ನು 5 ದಿನಗಳ ಕಾಲ ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
ವಿಚಾರಣೆ ವೇಳೆ ಕವಿರಾಜ್ ಕೆಲ ಮಾಹಿತಿಗಳನ್ನು ಬಾಯ್ಬಿಟ್ಟಿದ್ದು, ವರ್ತೂರು ಪ್ರಕಾಶ್ ಅಪಹರಣ ಪ್ರಕರಣದಲ್ಲಿ ರವಿ ಪೂಜಾರಿ ಪಾತ್ರ ಇರುವ ಶಂಕೆಗಳು ವ್ಯಕ್ತವಾಗಿದೆ. ಹೀಗಾಗಿ ಪೊಲೀಸರು ಈ ಆಯಾಮದಲ್ಲೂ ತನಿಖೆ ಆರಂಭಿಸಿದ್ದಾರೆ.
ಪ್ರಕರಣ ಸಂಬಂಧ ಈ ವರೆಗೂ 12ಕ್ಕೂ ಹೆಚ್ಚು ಆರೋಪಿಗಳನ್ನು ಗುರ್ತಿಸಿರುವ ಪೊಲೀಸರು, ಎಲ್ಲರೂ ಕರ್ನಾಟರ ಮೂಲದವರೇ ಆಗಿದ್ದಾರೆಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


