ಶೀಘ್ರವೇ ತೊಗರಿ ಖರೀದಿ ಕೇಂದ್ರ ತೆರೆಯಿರಿ: ಸರ್ಕಾರಕ್ಕೆ ಅಜಯ್ ಸಿಂಗ್ ಆಗ್ರಹ
ಅಳಿದುಳಿದ ತೊಗರಿ ಬೆಳೆಯಿಂದ ಮಾತ್ರ ರೈತರು ತಮ್ಮ ಜೀವನವನ್ನು ಕಟ್ಟಿಕೊಳ್ಳಬೇಕಿದೆ. ಆದ್ದರಿಂದ ಪ್ರತಿ ಕ್ವಿಂಟಾಲ್‌ಗೆ 1500 ರು. ಪ್ರೋತ್ಸಾಹಧನ ನಿಗದಿ ಮಾಡಬೇಕು. ತಕ್ಷಣ ಖರೀದಿ ಪ್ರಕ್ರಿಯೆ ಆರಂಭಿಸಬೇಕು ಎಂದು ಅಜಯ್ ಸಿಂಗ್ ಒತ್ತಾಯಿಸಿದರು

ಕಲಬುರಗಿ: ರಾಜ್ಯ ಸರ್ಕಾರ ಶೀಘ್ರವೇ ತೊಗರಿ ಬೇಳೆ ಖರೀದಿ ಕೇಂದ್ರ ಸ್ಥಾಪಿಸಬೇಕು ಜೊತೆಗೆ ಕ್ವಿಂಟಾಲ್ ತೊಗರಿಗೆ ಕೇಂದ್ರದ ಬೆಂಬಲ ಬೆಲೆ 6 ಸಾ.ರೂ ಸೇರಿದಂತೆ ರಾಜ್ಯ ಸರ್ಕಾರ ತನ್ನ ಪಾಲಿನ 1,500 ರೂ. ಪ್ರೋತ್ಸಾಹ ಧನ ಸೇರಿಸಿ 7,500 ರೂ. ಬೆಲೆ ನಿಗದಿಪಡಿಸಿ ಖರೀದಿಗೆ ಮುಂದಾಗಬೇಕು ಎಂದು ವಿದಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕ ಹಾಗೂ ಜೇವರ್ಗಿ ಶಾಸಕ ಡಾ. ಅಜಯ್ ಸಿಂಗ್ ಆಗ್ರಹಿಸಿದ್ದಾರೆ.
ಕಲಬುರಗಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಪ್ರಸಕ್ತ ಹಂಗಾಮಿನಲ್ಲಿ ಮಳೆಯಿಂದಾಗಿ ಅತಿವೃಷ್ಟಿ ಸಂಭವಿಸಿದೆ. ಅಳಿದುಳಿದ ತೊಗರಿ ಬೆಳೆಯಿಂದ ಮಾತ್ರ ರೈತರು ತಮ್ಮ ಜೀವನವನ್ನು ಕಟ್ಟಿಕೊಳ್ಳಬೇಕಿದೆ. ಆದ್ದರಿಂದ ಪ್ರತಿ ಕ್ವಿಂಟಾಲ್‌ಗೆ 1500 ರು. ಪ್ರೋತ್ಸಾಹಧನ ನಿಗದಿ ಮಾಡಬೇಕು. ತಕ್ಷಣ ಖರೀದಿ ಪ್ರಕ್ರಿಯೆ ಆರಂಭಿಸಬೇಕು ಎಂದು ಅಜಯ್ ಸಿಂಗ್ ಒತ್ತಾಯಿಸಿದರು.
ತೊಗರಿ ರೈತರಿಗೆ ಪ್ರೋತ್ಸಾಹ ಧನ ನೀಡುವ ವಿಚಾರದಲ್ಲಿ ರಾಜ್ಯ ಸರ್ಕಾರ ಈಗಲೇ ತನ್ನ ನಿಲುವು ಬಹಿರಂಗಪಡಿಸಲಿ. ರೈತರ ಪರ ಎಂದು ಹೇಳಿಕೊಳ್ಳುವ ಸಿಎಂ ಯಡಿಯೂರಪ್ಪನವರು ಎಂಎಸ್‍ಪಿ, ಪ್ರೋತ್ಸಾಹಕರ ಬೆಲೆ ಸೇರಿದಂತೆ ಕ್ವಿಂಟಾಲ್‍ಗೆ 7, 500 ರು ನಿಗದಿಪಡಿಸಿ ರೈತರಿಂದ ತೊಗರಿ ಖರೀದಿಗೆ ಮುಂದಾಗಲಿ ಎಂದು ಆಗ್ರಹಿಸಿದರು.
ಈ ವಿಚಾರದಲ್ಲಿ ಸರ್ಕಾರ ವಿನಾಕಾರಣ ವಿಳಂಬ ಮಾಡುವುದು ಸರಿಯಲ್ಲ. ಸಂಕಷ್ಟದಿಂದ ಮೊದಲೇ ರೈತರು ಕಣ್ಣೀರು ಹಾಕುತ್ತಿರುವಾಗ ಸರಕಾರ ತೊಗರಿ ಖರೀದಿಗೆ ಕ್ರಿಯಾ ಯೋಜನೆ ರೂಪಿಸಿ ಅಗತ್ಯ ಒಪ್ಪಿಗೆ, ಪರವಾನಿಗೆ ಎಲ್ಲವನ್ನು ಪಡೆದುಕೊಂಡು ಬೇಗ ತೊಗರಿ ಕಣಜದ ರೈತರ ಸಹಾಯಕ್ಕೆ ಧಾವಿಸಬೇಕು, ಇಲ್ಲದಿದ್ದರೇ ರಾಜ್ಯಾದ್ಯಂತ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


