ಕೋವಿಡ್-19: ಹೊಸ ವರ್ಷಕ್ಕೆ ಹೊಸ ಮಾರ್ಗಸೂಚಿ ಪ್ರಕಟ
ಕೋವಿಡ್ ಸೋಂಕು ಪಸರಿಸುವ ಹಿನ್ನಲೆಯಲ್ಲಿ ಸರ್ಕಾರ ಕ್ರಿಸ್‌ಮಸ್ ಹಾಗೂ ಹೊಸ ವರ್ಷದ ಅದ್ಧೂರಿ ಆಚರಣೆಗೆ ತಡೆ ನೀಡಿದೆ.ಎಂದಿನಂತೆ ಕ್ಲಬ್ ಪಬ್‌ಗಳನ್ನು ತೆರೆಯಲು ಅವಕಾಶ ನೀಡಿದ್ದು, ಈ ಸಂಬಂಧ ಮಾರ್ಗಸೂಚಿಗಳನ್ನು ಹೊರಡಿಸಿದೆ.

ಬೆಂಗಳೂರು: ಕೋವಿಡ್ ಸೋಂಕು ಪಸರಿಸುವ ಹಿನ್ನಲೆಯಲ್ಲಿ ಸರ್ಕಾರ ಕ್ರಿಸ್‌ಮಸ್ ಹಾಗೂ ಹೊಸ ವರ್ಷದ ಅದ್ಧೂರಿ ಆಚರಣೆಗೆ ತಡೆ ನೀಡಿದೆ.ಎಂದಿನಂತೆ ಕ್ಲಬ್ ಪಬ್‌ಗಳನ್ನು ತೆರೆಯಲು ಅವಕಾಶ ನೀಡಿದ್ದು, ಈ ಸಂಬಂಧ ಮಾರ್ಗಸೂಚಿಗಳನ್ನು ಹೊರಡಿಸಿದೆ.
ಚರ್ಚ್‌ಗಳಲ್ಲಿ ಒಮ್ಮೆಲೆ ಹೆಚ್ಚು ಜನರು ಸೇರದಂತೆ ಸಾಮಾಜಿಕ ಅಂತ ಕಾಯುಕೊಳ್ಳಲು ಮೇಲ್ವಿಚಾರಕರು, ಆಯೋಜಕರು ಕಟ್ಟುನಿಟ್ಟಿನ ಕ್ರಮ ವಹಿಸಬೇಕು ಎಂದು ಸೂಚಿಸಲಾಗಿದೆ.
ಹಬ್ಬದ ಆಚರಣೆಯ ಸಂದರ್ಭದಲ್ಲಿ ಸಾಂಕ್ರಾಮಿಕ ಸೋಂಕು ತಡೆಗಟ್ಟಲು ಸಾರ್ವಜನಿಕರ ಹಸ್ತಲಾಘವ ಮತ್ತು ಆಲಿಂಗನವನ್ನು ನಿಷೇಧಿಸಲಾಗಿದೆ.
ಹೊಸ ವರ್ಷದ ಸಂದರ್ಭದಲ್ಲಿ ಕ್ಲಬ್, ಪಬ್, ರೆಸ್ಟೋರೆಂಟ್ ಗಳು ಸಾಮಾನ್ಯ ದಿನಗಳಂತೆ ವ್ಯವಹಾರ ನಡೆಸಲು ಅವಕಾಶವಿದೆ. ಮದ್ಯ ಮಾರಾಟದ ಮೇಲೆ ನಿರ್ಬಂಧವಿಲ್ಲ. ಆದರೆ, ವಿಶೇಷ ಪಾರ್ಟಿ ಹಾಗೂ ಕಾರ್ಯಕ್ರಮಗಳಿಗೆ ಅವಕಾಶವಿಲ್ಲ. ಜನರು ಒಂದೆಡೆ ಸೇರುವ ಹಾಗಿಲ್ಲ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ. ಆಚರಣೆ ಸಂದರ್ಭದಲ್ಲಿ ಹಸಿರು ಪಟಾಕಿಗಳನ್ನು ಮಾತ್ರ ಸಿಡಿಸಲು ಅವಕಾಶ ನೀಡಲಾಗಿದ್ದು, ಕೋವಿಡ್ ಹರಡುವಿಕೆ ತಡೆಯುವ ಸಂಬಂಧ ಕ್ರಿಸ್ ಮಸ್ ಹಾಗೂ ಹೊಸ ವರ್ಷದ ಸಂಭ್ರಮಾಚರಣೆಯನ್ನು ಸರಳ ಹಾಗೂ ಅರ್ಥಪೂರ್ಣವಾಗಿ ಆಚರಿಸುವಂತೆ ಸರ್ಕಾರ ಆದೇಶದಲ್ಲಿ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


