ಕೋವಿಡ್-19: ರಾಜ್ಯದಲ್ಲಿಂದು 1236 ಹೊಸ ಪ್ರಕರಣಗಳು ಪತ್ತೆ, 1497 ಸೋಂಕಿತರು ಗುಣಮುಖ, 10 ಸಾವು
ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆಯಾಗಿದ್ದು, ಇಂದು ಹೊಸದಾಗಿ 1236 ಪ್ರಕರಣಗಳು ದೃಢಪಟ್ಟಿವೆ. 1497 ಸೋಂಕಿತರು ಗುಣಮುಖರಾಗಿ ಕೋವಿಡ್ ಆಸ್ಪತ್ರೆ ಹಾಗೂ ಆರೈಕೆ ಕೇಂದ್ರಗಳಿಂದ ಬಿಡುಗಡೆಯಾಗಿದ್ದಾರೆ.

ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆಯಾಗಿದ್ದು, ಇಂದು ಹೊಸದಾಗಿ 1236 ಪ್ರಕರಣಗಳು ದೃಢಪಟ್ಟಿವೆ. 1497 ಸೋಂಕಿತರು ಗುಣಮುಖರಾಗಿ ಕೋವಿಡ್ ಆಸ್ಪತ್ರೆ ಹಾಗೂ ಆರೈಕೆ ಕೇಂದ್ರಗಳಿಂದ ಬಿಡುಗಡೆಯಾಗಿದ್ದಾರೆ.
ಇದರೊಂದಿಗೆ ಗುಣಮುಖರಾದ ಒಟ್ಟು ಸೋಂಕಿತರ ಸಂಖ್ಯೆ 878696ಕ್ಕೆ ಏರಿಕೆಯಾಗಿದ್ದು, ಒಟ್ಟು ಪ್ರಕರಣಗಳ ಸಂಖ್ಯೆ 905901 ಆಗಿದೆ. ಸದ್ಯ 229 ಸಕ್ರಿಯ ಪ್ರಕರಣಗಳಿವೆ.
ಸೋಂಕಿನಿಂದ ಇಂದು 10 ಮಂದಿ ಸಾವನ್ನಪ್ಪಿದ್ದಾರೆ. ಇದರೊಂದಿಗೆ ಒಟ್ಟಾರೇ ಮೃತರ ಸಂಖ್ಯೆ 11981ಕ್ಕೆ ಏರಿಕೆಯಾಗಿದೆ. ಸೋಂಕಿತರ ಶೇಕಡಾವಾರು ಪ್ರಮಾಣ ಶೇ. 1. 16 ಆಗಿದ್ದು, ಮೃತಪಟ್ಟವರ ಶೇಕಡಾವಾರು ಪ್ರಮಾಣ ಶೇ.0.80 ರಷ್ಟಿದೆ.
ಬಾಗಲಕೋಟೆಯಲ್ಲಿ 3, ಬಳ್ಳಾರಿ 21, ಬೆಳಗಾವಿ 26, ಬೆಂಗಳೂರು ಗ್ರಾಂ 17, ಬೆಂಗಳೂರು ನಗರ 689, ಬೀದರ್ 3, ಚಾಮರಾಜನಗರ 14, ಚಿಕ್ಕಬಳ್ಳಾಪುರ 16, ಚಿಕ್ಕಮಗಳೂರು 8, ಚಿತ್ರದುರ್ಗ27, ದಕ್ಷಿಣ ಕನ್ನಡ 40, ದಾವಣಗೆರೆ 16, ಧಾರವಾಡ 13, ಗದಗ 6, ಹಾಸನ 24, ಹಾವೇರಿ 7, ಕಲಬುರಗಿ 13, ಕೊಡಗು 17, ಕೋಲಾರ 29, ಕೊಪ್ಪಳ 12, ಮಂಡ್ಯ 31, ಮೈಸೂರು 54, ರಾಯಚೂರು 6, ರಾಮನಗರ 10, ಶಿವಮೊಗ್ಗ 32, ತುಮಕೂರು 57, ಉಡುಪಿ 12, ಉತ್ತರ ಕನ್ನಡ 14, ವಿಜಯಪುರ 14, ಯಾದಗಿರಿ 5 ಪ್ರಕರಣಗಳು ಕಂಡುಬಂದಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


