ಉದ್ಯಮಿ, ಸಮಾಜಸೇವಕ, ಶಿಕ್ಷಣ ತಜ್ಞ ಡಾ. ಆರ್.ಎನ್. ಶೆಟ್ಟಿ ನಿಧನ, ಮುಖ್ಯಮಂತ್ರಿ ಯಡಿಯೂರಪ್ಪ ಸಂತಾಪ
ನಾಡಿನ ಖ್ಯಾತ ಹಿರಿಯ ಉದ್ಯಮಿ, ಶಿಕ್ಷಣ ತಜ್ಞ, ಸಮಾಜ ಸೇವಕ, ಆರ್ ಎನ್ ಎಸ್ ಗ್ರೂಪ್ ಸಂಸ್ಥಾಪಕ ಡಾ. ಆರ್ ಎನ್ ಶೆಟ್ಟಿ ಗುರುವಾರ ನಸುಕಿನ ಜಾವ ನಿಧನರಾಗಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು.

ಬೆಂಗಳೂರು: ನಾಡಿನ ಖ್ಯಾತ ಹಿರಿಯ ಉದ್ಯಮಿ, ಶಿಕ್ಷಣ ತಜ್ಞ, ಸಮಾಜ ಸೇವಕ, ಆರ್ ಎನ್ ಎಸ್ ಗ್ರೂಪ್ ಸಂಸ್ಥಾಪಕ ಡಾ. ಆರ್ ಎನ್ ಶೆಟ್ಟಿ ಗುರುವಾರ ನಸುಕಿನ ಜಾವ ನಿಧನರಾಗಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು.
ಆರ್. ಎನ್. ಶೆಟ್ಟಿ ಎಂದೇ ಜನಪ್ರಿಯರಾಗಿದ್ದ ಡಾ. ರಾಮ ನಾಗಪ್ಪ ಶೆಟ್ಟಿ ಅವರು ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲ್ಲೂಕಿನ ಮುರುಡೇಶ್ವರದಲ್ಲಿ 1928ರ ಆಗಸ್ಟ್ 15ರಂದು ಜನಿಸಿದ್ದರು. ಮುರುಡೇಶ್ವರ ದೇವಸ್ಥಾನದ ಆನುವಂಶಿಕ ಆಡಳಿತಾಧಿಕಾರಿಯಾಗಿ ಈ ಮುರುಡೇಶ್ವರವನ್ನು ಪ್ರಮುಖ ಕ್ಷೇತ್ರವನ್ನಾಗಿ ಪರಿವರ್ತಿಸಿದ ಕೀರ್ತಿ ಅವರದು. ಮುರುಡೇಶ್ವರದ ಸಮುದ್ರ ತೀರದಲ್ಲಿ 123 ಅಡಿ ಎತ್ತರದ ಶಿವನ ಪ್ರತಿಮೆಯನ್ನು ಸ್ಥಾಪಿಸಿದ್ದರು.
ಆರ್ ಎನ್ ಶೆಟ್ಟಿ ನಿಧನಕ್ಕೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸೇರಿದಂತೆ ಹಲವರು ಸಂತಾಪ ಸೂಚಿಸಿದ್ದಾರೆ. ಕೃಷಿಕ ಮನೆತನದಲ್ಲಿ ಜನಿಸಿದ ಆರ್.ಎನ್. ಶೆಟ್ಟಿ ಅವರು ನಿರ್ಮಾಣ, ಮೂಲಸೌಕರ್ಯ ಅಭಿವೃದ್ಧಿ ಹಾಗೂ ಹೋಟೆಲ್ ಉದ್ಯಮ ಕ್ಷೇತ್ರಗಳಲ್ಲಿ ತಮ್ಮದೇ ಛಾಪು ಮೂಡಿಸಿದ್ದರು ಎಂದು ಮುಖ್ಯಮಂತ್ರಿ ಕಚೇರಿ ಟ್ವಿಟ್ಟರ್ ಖಾತೆಯಲ್ಲಿ ಸ್ಮರಿಸಿಕೊಂಡಿದ್ದಾರೆ.
ಪ್ರಾಥಮಿಕ ಶಿಕ್ಷಣವನ್ನು ಸಹ ಔಪಚಾರಿಕವಾಗಿ ಮುಗಿಸದ ಆರ್ ಎನ್ ಶೆಟ್ಟಿಯವರು ಉದ್ಯಮ, ಶಿಕ್ಷಣ, ಸಮಾಜಸೇವೆ ಕ್ಷೇತ್ರಗಳಲ್ಲಿ ಮಾಡಿದ ಕೆಲಸ, ಸಾಧನೆ ನಗಣ್ಯ. ಆರ್ ಎನ್ ಶೆಟ್ಟಿ ಸಾಮ್ರಾಜ್ಯ ಎಂದೇ ಜನಪ್ರಿಯವಾಗುವ ರೀತಿಯಲ್ಲಿ ಅವರು ಅನೇಕ ಕ್ಷೇತ್ರಗಳಿಗೆ ಕೊಡುಗೆ ನೀಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


