ರಾಜ್ಯ

ಇಬ್ಬರು ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಗುಂಡಿನ ದಾಳಿ: ಓರ್ವ ಗಂಭೀರ

ಇಬ್ಬರು ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಅಪರಿಚಿತರು ಗುಂಡಿನ ದಾಳಿ ನಡೆಸಿರುವ ಘಟನೆ ಜಿಲ್ಲೆಯ ಹುಕ್ಕೇರಿ ತಾಲೂಕಿನ ಯಮಕನಮರಡಿ ಗ್ರಾಮದಲ್ಲಿ ನಡೆದಿದೆ.

ಇಬ್ಬರು ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಗುಂಡಿನ ದಾಳಿ: ಓರ್ವ ಗಂಭೀರ
ಸಂಗ್ರಹ ಚಿತ್ರ
Published On :

ಬೆಳಗಾವಿ: ಇಬ್ಬರು ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಅಪರಿಚಿತರು ಗುಂಡಿನ ದಾಳಿ ನಡೆಸಿರುವ ಘಟನೆ ಜಿಲ್ಲೆಯ ಹುಕ್ಕೇರಿ ತಾಲೂಕಿನ ಯಮಕನಮರಡಿ ಗ್ರಾಮದಲ್ಲಿ ನಡೆದಿದೆ.

ಕಾಂಗ್ರೆಸ್ ಕಾರ್ಯಕರ್ತರಾದ ಕಿರಣ್ ರಜಪೂತ್ ಹಾಗೂ ಭರಮಾ ದೂಪದಾಳೆ ಮೇಲೆ ಫೈರಿಂಗ್ ಮಾಡಲಾಗಿದೆ. ಘಟನೆಯಲ್ಲಿ ಭರಮಾ ದೂಪದಾಳೆಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕಿರಣ್ ರಜಪೂತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಕೋವಿಡ್-19 ಭೀತಿ ಹಿನ್ನೆಲೆಯಲ್ಲಿ ಮಾಸ್ಕ್ ಧರಿಸಿಕೊಂಡು ಬಂದಿದ್ದ ದುಷ್ಕರ್ಮಿಗಳು ಸುಮಾರು 7 ಅಡಿ ದೂರದಿಂದ ಗುಂಡು ಹಾರಿಸಿದ್ದಾರೆ ಎನ್ನಲಾಗಿದೆ.

ಘಟನೆಯಲ್ಲಿ ಭರಮಾ ದೂಪದಾಳೆಗೆ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕಾಂಗ್ರೆಸ್​ ಕಾರ್ಯಕರ್ತ ಕಿರಣ್ ರಜಪೂತ ಪ್ರಾಣಾಪಾಯದಿಂದ ಪಾರಾಗಿದ್ದಾರೆ. 

ಗ್ರಾಮ ಪಂಚಾಯತಿ ಚುನಾವಣೆ ವೈಷಮ್ಯದ ಹಿನ್ನೆಲೆಯಲ್ಲಿ ಫೈರಿಂಗ್ ಮಾಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಘಟನೆಗೆ ಸಂಬಂಧಿಸಿದಂತೆ ಯಮಕನಮರಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.