ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿರುವವರು ರೈತರಲ್ಲ, ಕಾಂಗ್ರೆಸ್ ಕಾರ್ಯಕರ್ತರು: ಪ್ರಭು ಚವಾಣ್
ದೆಹಲಿ ಹೊರವಲಯದಲ್ಲಿ ನಡೆಯುತ್ತಿರುವ ಹೋರಾಟದಲ್ಲಿ ಪಾಲ್ಗೊಂಡವರು ರೈತರಲ್ಲ, ಬದಲಾಗಿ ಅವರು ಕಾಂಗ್ರೆಸ್ ಕಾರ್ಯಕರ್ತರು, ಕಾಂಗ್ರೆಸ್‌ನವರು, ಇನ್ನಿತರ ಪ್ರತಿಪಕ್ಷದವರು ರೈತರನ್ನು ಎತ್ತಿಕಟ್ಟಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ

ಯಾದಗಿರಿ: ದೆಹಲಿ ಹೊರವಲಯದಲ್ಲಿ ನಡೆಯುತ್ತಿರುವ ಹೋರಾಟದಲ್ಲಿ ಪಾಲ್ಗೊಂಡವರು ರೈತರಲ್ಲ, ಬದಲಾಗಿ ಅವರು ಕಾಂಗ್ರೆಸ್ ಕಾರ್ಯಕರ್ತರು, ಕಾಂಗ್ರೆಸ್‌ನವರು, ಇನ್ನಿತರ ಪ್ರತಿಪಕ್ಷದವರು ರೈತರನ್ನು ಎತ್ತಿಕಟ್ಟಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ಸಚಿವ ಪ್ರಭು ಚವಾಣ್ ಆರೋಪಿಸಿದ್ದಾರೆ.
ಯಾದಗಿರಿಯಲ್ಲಿ ಮಾತನಾಡಿದ ಅವರು ದೆಹಲಿಯಲ್ಲಿ ಹೋರಾಟ ಮಾಡುವವರು ರೈತರಾಗಿದ್ದರೆ ಹೊಲಗಳಲ್ಲಿ ಈಗ ಕೆಲಸ ಮಾಡುತ್ತಿದ್ದರು. ಆದರೆ, ಅಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಇರುವುದರಿಂದ ಅಲ್ಲಿರುವವರು ರೈತರಲ್ಲ. ಹಸಿರು ಶಾಲು ಹಾಕಿಕೊಂಡವರೆಲ್ಲ ರೈತರಲ್ಲ’ ಎಂದು ಹೇಳಿದರು. ‘ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗಾಗಿ ಉತ್ತಮ
ಕೃಷಿ ಕಾಯ್ದೆಗಳನ್ನು ಜಾರಿಗೆ ತಂದಿದ್ದಾರೆ. ಇವುಗಳ ಬಗ್ಗೆ ಸಚಿವರೊಂದಿಗೆ ಮಾತುಕತೆಯಾಡುವುದು ಬಿಟ್ಟು ಪ್ರತಿಭಟನೆಯಲ್ಲಿ ತೊಡಗಿಸಿಕೊಂಡಿದ್ದಾರೆ ಎಂದರು.
ಪರಿಷತ್‌ನಲ್ಲಿ ಗದ್ದಲ, ಎಳೆದಾಟ ಮಾಡಿ ಕಾಂಗ್ರೆಸ್ ಸದಸ್ಯರು ತಮ್ಮ ಸಂಸ್ಕೃತಿ ತೋರಿಸಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ್ ಹರಿಹಾಯ್ದರು. ಕಾಂಗ್ರೆಸ್‌ನವರು ಪವಿತ್ರವಾಗಿರುವ ವಿಧಾನ ಪರಿಷತ್ ಸಭೆಯ ಬಾಗಿಲನ್ನು ಕಾಲಿನಿಂದ ಒದ್ದು ಅಪವಿತ್ರ ಮಾಡಿದ್ದಾರೆ. ಕುರ್ಚಿ ಮೇಲೆ ಕುಳಿತವರನ್ನು ಎಳೆದಾಡಿದ್ದಾರೆ ಎಂದು ದೂರಿದರು.
‘ದೇಶದ ಸಂಸ್ಕೃತಿ, ಪರಂಪರೆ ಧರ್ಮ ನಂಬಿಕೆಗಳ ವಿರುದ್ಧ ಅಮಾನವೀಯವಾಗಿ ವರ್ತಿಸಿದ ಕಾಂಗ್ರೆಸ್ ಪಕ್ಷವನ್ನು ಎತ್ತಿ ಮೂಲೆಗೆ ಬಿಸಾಕಿದ್ದರೂ ಇನ್ನು ಬುದ್ಧಿ ಕಲಿತುಕೊಂಡಿಲ್ಲ’ಎಂದು ಟೀಕಿಸಿದರು. ‘ಈ ವಿಧೇಯಕವನ್ನು ಯಾರೇ ಅಡ್ಡಿ ಮಾಡಿದರೂ ನಾವು ಪಾಸ್ ಮಾಡಿ ಗೋಮಾತೆಯ ಋಣ ತೀರಿಸುತ್ತೇವೆ’ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


