ರಾಜ್ಯ

ಕೊಡವರು ಬೀಫ್ ತಿನ್ನುತ್ತಾರೆ ಎಂದು ನಾನು ಹೇಳಿಯೇ ಇಲ್ಲ: ಸಿದ್ದರಾಮಯ್ಯ ಸ್ಪಷ್ಟನೆ

ಕೊಡವರು ಬೀಫ್ ತಿನ್ನುತ್ತಾರೆ ಎಂದು ನಾನು ಹೇಳಿಲ್ಲ, ಆಹಾರಕ್ಕೆ ಜಾತಿ-ಧರ್ಮಗಳನ್ನು ಗಂಟುಹಾಕುವುದು ತಪ್ಪುಎಂಬರ್ಥದಲ್ಲಿ ಬೀಫ್‌‌ ತಿನ್ನುವ ವಿಚಾರವನ್ನು ಹೇಳಿರುವುದಾಗಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ಕೊಡವರು ಬೀಫ್ ತಿನ್ನುತ್ತಾರೆ ಎಂದು ನಾನು ಹೇಳಿಯೇ ಇಲ್ಲ: ಸಿದ್ದರಾಮಯ್ಯ ಸ್ಪಷ್ಟನೆ
ಸಿದ್ದರಾಮಯ್ಯ
Published On :

ಬೆಂಗಳೂರು: ಕೊಡವರು ಬೀಫ್ ತಿನ್ನುತ್ತಾರೆ ಎಂದು ನಾನು ಹೇಳಿಲ್ಲ, ಆಹಾರಕ್ಕೆ ಜಾತಿ-ಧರ್ಮಗಳನ್ನು ಗಂಟುಹಾಕುವುದು ತಪ್ಪುಎಂಬರ್ಥದಲ್ಲಿ ಬೀಫ್‌‌ ತಿನ್ನುವ ವಿಚಾರವನ್ನು ಹೇಳಿರುವುದಾಗಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ಕೊಡವರು ಬೀಫ್‌‌ ತಿನ್ನುತ್ತಾರೆ ಎಂಬ ಹೇಳಿಕೆ ಸಂಬಂಧ ಕೊಡವ ಸಮುದಾಯದವರಿಂದ ಆಕ್ರೋಶ ವ್ಯಕ್ತವಾಗಿತ್ತು. ಈ ಸಂಬಂಧ ಅವರು ಟ್ವೀಟ್‌ ಮಾಡಿ, ಕೊಡವರು ಬೀಫ್‌ ತಿನ್ನುತ್ತಾರೆ ಎಂದು ನಾನು ಹೇಳಿಲ್ಲ ಎಂದು ಸಿದ್ದರಾಮಯ್ಯ ಟ್ವೀಟ್‌ ಮಾಡಿದ್ದು ಕೊಡವ ಸಂಸ್ಕೃತಿ ಬಗ್ಗೆ ನನಗೆ ಅಪಾರವಾದ ಗೌರವ ಇದೆ ಎಂದು ಹೇಳಿದ್ದಾರೆ.

ಆಡು,ಕುರಿ,ಕೋಳಿ, ಹಂದಿ, ದನ ಹೀಗೆ ನಮ್ಮಲ್ಲಿ ಭಿನ್ನ ಆಹಾರ ಸಂಸ್ಕೃತಿ ಇದೆ.‌ ಆಹಾರಕ್ಕೆ ಜಾತಿ-ಧರ್ಮಗಳನ್ನು ಗಂಟುಹಾಕುವುದು ತಪ್ಪು ಎಂಬರ್ಥದಲ್ಲಿ ನಾನು ಹೇಳಿದ್ದೇನೆಯೇ ಹೊರತು‌ ಕೊಡವರು ಬೀಫ್‌ ತಿನ್ನುತ್ತಾರೆ ಎಂದು ನಾನು ಹೇಳಿಲ್ಲ. ಕೊಡವ ಸಂಸ್ಕೃತಿ ಬಗ್ಗೆ ನನಗೆ ಅಪಾರವಾದ ಗೌರವ ಇದೆ ಎಂದು ಅವರು ಟ್ವೀಟ್ ಮಾಡಿದ್ದಾರೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.