ಬೆಂಗಳೂರು: ನಿಂತಿದ್ದ ಲಾರಿಗೆ ದ್ವಿಚಕ್ರ ವಾಹನ ಡಿಕ್ಕಿ, ಜಾಲಿರೈಡ್ ಹೋಗಿದ್ದ ಮೂವರು ಯುವಕರು ಸಾವು
ನಿಂತಿದ್ದ ಲಾರಿಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದ ಪರಿಣಾಮ ಅದರಲ್ಲಿದ್ದ ಮೂವರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹೊಸಕೋಟೆ ಟೋಲ್ ಗೇಟ್ ಬಳಿ ನಡೆದಿದೆ.

ಬೆಂಗಳೂರು: ನಿಂತಿದ್ದ ಲಾರಿಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದ ಪರಿಣಾಮ ಅದರಲ್ಲಿದ್ದ ಮೂವರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹೊಸಕೋಟೆ ಟೋಲ್ ಗೇಟ್ ಬಳಿ ನಡೆದಿದೆ.
ಹೊಸಕೋಟೆಯ ನಿವಾಸಿಗಳಾದ ರಾಜೇಶ್(21), ಲವನಿತ್ (22) ಹಾಗೂ ಹರೀಶ್ (21) ಮೃತಪಟ್ಟ ಯುವಕರು.
ಸಣ್ಣ ಪುಟ್ಟ ಕೂಲಿ ಕೆಲಸ ಮಾಡಿಕೊಂಡಿದ್ದ ಈ ಮೂವರು ರಾತ್ರಿ 12.30ರವರೆಗೆ ಪಾರ್ಟಿ ಮಾಡಿ, ಕಂಠಪೂರ್ತಿ ಕುಡಿದು ಹೊಂಡಾ ಅಕ್ಟೀವಾ ಸ್ಕೂಟರ್ ನಲ್ಲಿ ಜಾಲಿರೈಡ್ ಹೋಗಿದ್ದರು.
ಅತಿ ವೇಗವಾಗಿ ಚಾಲನೆ ಮಾಡುತ್ತಿದ್ದ ಯುವಕರು ನಿಂತಿದ್ದ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದ್ದಾರೆ. ಪರಿಣಾಮ ತೀವ್ರ ರಕ್ತಸ್ರಾವವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಸ್ಥಳಕ್ಕೆ ಹೊಸಕೋಟೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು, ಪ್ರಕಣ ದಾಖಲಿಸಿಕೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


