ಗ್ರಾಮ ಪಂಚಾಯಿತಿ ಎರಡನೇ ಹಂತದ ಚುನಾವಣೆ: 37 ಸದಸ್ಯರ ಸ್ಥಾನಗಳಿಗೆ ಅವಿರೋಧ ಆಯ್ಕೆ
ಗ್ರಾಮ ಪಂಚಾಯಿತಿ ಸಾರ್ವತ್ರಿಕ ಚುನಾವಣೆ ಹಿನ್ನೆಲೆ, ಎರಡನೇ ಹಂತದ ಗ್ರಾಮ ಪಂಚಾಯಿತಿಯ ಚುನಾವಣೆಯ ನಾಮಪತ್ರ ಸಲ್ಲಿಕೆಯು ಕೊನೆಯಾಗಿದ್ದು(ದಿನಾಂಕ: 11.12.2020 ರಿಂದ 16.12.2020 ರವರೆಗೆ) ದೊಡ್ಡಬಳ್ಳಾಪುರ ಹಾಗೂ ದೇವನಹಳ್ಳಿ ತಾಲ್ಲೂಕಿನ ಒಟ್ಟು 45 ಗ್ರಾಮ ಪಂಚಾಯತಿಯ 770 ಸ್ಥಾನಗಳಲ್ಲಿ ಯಾವುದೇ ಸ್ಥಾನಗಳಿಗೆ ನಾಮಪತ್ರ ಸಲ್ಲಿಕೆಯಾಗದೆ ಖಾಲಿ ಉಳಿದಿಲ್ಲ.

ಬೆಂಗಳೂರು: ಗ್ರಾಮ ಪಂಚಾಯಿತಿ ಸಾರ್ವತ್ರಿಕ ಚುನಾವಣೆ ಹಿನ್ನೆಲೆ, ಎರಡನೇ ಹಂತದ ಗ್ರಾಮ ಪಂಚಾಯಿತಿಯ ಚುನಾವಣೆಯ ನಾಮಪತ್ರ ಸಲ್ಲಿಕೆಯು ಕೊನೆಯಾಗಿದ್ದು (ದಿನಾಂಕ: 11.12.2020 ರಿಂದ 16.12.2020 ರವರೆಗೆ) ದೊಡ್ಡಬಳ್ಳಾಪುರ ಹಾಗೂ ದೇವನಹಳ್ಳಿ ತಾಲ್ಲೂಕಿನ ಒಟ್ಟು 45 ಗ್ರಾಮ ಪಂಚಾಯತಿಯ 770 ಸ್ಥಾನಗಳಲ್ಲಿ ಯಾವುದೇ ಸ್ಥಾನಗಳಿಗೆ ನಾಮಪತ್ರ ಸಲ್ಲಿಕೆಯಾಗದೆ ಖಾಲಿ ಉಳಿದಿಲ್ಲ.
ಸಲ್ಲಿಕೆಯಾಗಿರುವ ಒಟ್ಟು 3482 ನಾಮಪತ್ರಗಳ ಪೈಕಿ 44 ನಾಮಪತ್ರಗಳು ತಿರಸ್ಕೃತಗೊಂಡಿದ್ದು, 37 ಸದಸ್ಯರ ಸ್ಥಾನಗಳಿಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಹಾಗೂ 733 ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, ಒಟ್ಟು 1934 ಅಭ್ಯರ್ಥಿಗಳು ಅಂತಿಮವಾಗಿ ಕಣದಲ್ಲಿದ್ದಾರೆ.
ದೊಡ್ಡಬಳ್ಳಾಪುರ ತಾಲ್ಲೂಕಿನ 25 ಗ್ರಾಮ ಪಂಚಾಯಿತಿಗಳ 443 ಸ್ಥಾನಗಳಿಗೆ ಸಲ್ಲಿಕೆಯಾಗಿರುವ ಒಟ್ಟು 1952 ನಾಮಪತ್ರಗಳ ಪೈಕಿ 22 ನಾಮಪತ್ರಗಳು ತಿರಸ್ಕೃತಗೊಂಡಿದ್ದು, 15 ಸದಸ್ಯರ ಸ್ಥಾನಗಳಿಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಹಾಗೂ 1133 ಅಭ್ಯರ್ಥಿಗಳು ಅಂತಿಮವಾಗಿ ಕಣದಲ್ಲಿದ್ದು, 428 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


