ಮಂಗಳೂರು: ಮಗನಿಂದ ಹಲ್ಲೆಗೊಳಗಾದ ವೃದ್ದ ಆಸ್ಪತ್ರೆ ಕಟ್ಟಡದಿಂದ ಜಿಗಿದು ಆತ್ಮಹತ್ಯೆ
ವೃದ್ದನೊಬ್ಬ ಆಸ್ಪತ್ರೆಯ ಎರಡನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ದುರಂತ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಸುಳ್ಯದ ಕೆವಿಜಿ ಆಸ್ಪತ್ರೆಯಲ್ಲಿ ನಡೆದಿದೆ.

ಮಂಗಳೂರು: ವೃದ್ದನೊಬ್ಬ ಆಸ್ಪತ್ರೆಯ ಎರಡನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ದುರಂತ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಸುಳ್ಯದ ಕೆವಿಜಿ ಆಸ್ಪತ್ರೆಯಲ್ಲಿ ನಡೆದಿದೆ.
ಮಗನು ಹಲ್ಲೆ ಮಾಡಿದ್ದಾನೆಂಬ ಕಾರಣಕ್ಕೆ ಆಸ್ಪತ್ರೆಗೆ ದಾಖಲಾಗಿದ್ದ ಬಂದಡ್ಕದ ನಿವಾಸಿ ಲಕ್ಷ್ಮಣ ಗೌಡ (69) ಆತ್ಮಹತ್ಯೆ ಮಾಡಿಕೊಂಡ ವೃದ್ದ.
ಡಿಸೆಂಬರ್ 1 ರಂದು, ಲಕ್ಷ್ಮಣ ಮತ್ತು ಅವರ ಮಗನ ನಡುವೆ ನಿರ್ದಿಷ್ಟ ಕಾರಣಕ್ಕೆ ಜಗಳವಾಗಿದೆ. ಈ ಸಮಯದಲ್ಲಿ ಮಗನು ತನ್ನ ತಂದೆಯ ಮೇಲೆ ರಾಡ್‌ನಿಂದ ಹಲ್ಲೆ ಮಾಡಿದ್ದಾರೆಂದು ಆರೋಪಿಸಲಾಗಿದೆ. ಹಲ್ಲೆಯಿಂದ ಗಾಯಗೊಂಡ ಲಕ್ಷ್ಮಣ ಗೌಡನನ್ನು ಪಟ್ಟಣದ ಕೆವಿಜಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಡಿಸೆಂಬರ್ 19 ರಂದು, ಸೊಸೆ ಆಹಾರವನ್ನು ತರಲು ಹೊರಹೋದ ವೇಳೆ ಲಕ್ಷ್ಮಣ ಗೌಡ ತಾನು ಆಸ್ಪತ್ರೆಯ ಎರಡನೇ ಮಹಡಿಯಿಂದ ಹಾರಿ ಪ್ರಾಣ ಕಳೆದುಕೊಂಡಿದ್ದಾನೆ.
ಮೃತರ ಪತ್ನಿ ಲಲಿತಾ ಸಲ್ಲಿಸಿದ ದೂರಿನ ಪ್ರಕಾರ, ಲಕ್ಷ್ಮಣ ಗೌಡ ಆತ್ಮಹತ್ಯೆ ಮಾಡಿಕೊಂಡಿದ್ದು, ಅವರ ಮಾನಸಿಕ ಅಸ್ವಸ್ಥ ಮಗ ಮತ್ತು ಸೊಸೆ ನಿರಂತರವಾಗಿ ಜಗಳವಾಡುತ್ತಿದ್ದರು ಹಾಗೂ ಮನೆಯಲ್ಲಿ ಅಸಹನೀಯ ವಾತಾವರಣ ಸೃಷ್ಟಿಸುತ್ತಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


