ತಮಿಳುನಾಡಿನಲ್ಲಿ ಟ್ರ್ಯಾಕ್ಟರ್ ಮಗುಚಿ ರಾಮನಗರದ ಐವರು ಮಹಿಳೆಯರು ದುರ್ಮರಣ
ತಮಿಳುನಾಡಿನಲ್ಲಿ ಟ್ರ್ಯಾಕ್ಟರ್ ಒಂದು ಮಗುಚಿ ಬಿದ್ದು ಅದರಲ್ಲಿದ್ದ ರಾಜ್ಯದ ಐವರು ಮಹಿಳೆಯರು ಸ್ಥಳದಲ್ಲೇ ಸಾವನ್ನಪ್ಪಿ, ಇತರ 15 ಮಂದಿ ಗಾಯಗೊಂಡಿರುವ ಘಟನೆ ಸೋಮವಾರ ನಡೆದಿದೆ.

ರಾಮನಗರ: ತಮಿಳುನಾಡಿನಲ್ಲಿ ಟ್ರ್ಯಾಕ್ಟರ್ ಒಂದು ಮಗುಚಿ ಬಿದ್ದು ಅದರಲ್ಲಿದ್ದ ರಾಜ್ಯದ ಐವರು ಮಹಿಳೆಯರು ಸ್ಥಳದಲ್ಲೇ ಸಾವನ್ನಪ್ಪಿ, ಇತರ 15 ಮಂದಿ ಗಾಯಗೊಂಡಿರುವ ಘಟನೆ ಸೋಮವಾರ ನಡೆದಿದೆ.
ಕನಕಪುರ ತಾಲೂಕಿನ ಕಸಬಾ ಹೋಬಳಿ ಕೆರಳಾಳುಸಂದ್ರ ಗ್ರಾಮದ ನಿವಾಸಿಗಳಾದ ಮಲ್ಲಯ್ಯನವರ ಪತ್ನಿ ಈರಮ್ಮ(85), ಹಳೆಬೀದಿಯ ಹೊಸಬಮ್ಮ(75), ವೆಂಕಟೇಗೌಡರ ಪತ್ನಿ ಪುಟ್ಟನಿಂಗಮ್ಮ(60), ಜಗದೀಶ್ ಎಂಬವರ ಪತ್ನಿ ಗೌರಮ್ಮ(60), ಮಂಜುನಾಥ್ ಎಂಬವರ ಪತ್ನಿ ಮಂಗಳಾ(25) ಮೃತಪಟ್ಟವರು ಎಂದು ಗುರುತಿಸಲಾಗಿದೆ.
ಕೆರಳಾಳುಸಂದ್ರ ಗ್ರಾಮದ 15 ಮಂದಿ ಟ್ರ್ಯಾಕ್ಟರ್ ಮೂಲಕ ತಮಿಳುನಾಡಿನ ದಬ್ಬಗುಳೇಶ್ವರ ದೇವಾಲಯಕ್ಕೆ ಹೋಗಿದ್ದಾಗ ಈ ದುರ್ಘಟನೆ ಸಂಭವಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


