ಕೋವಿಡ್ ಕಡಿಮೆ ಇರುವ ತಾಲೂಕುಗಳಲ್ಲಿ ಶಾಲೆ ಆರಂಭಿಸುವ ಕುರಿತು ಚಿಂತಿಸಿ: ಸರ್ಕಾರಕ್ಕೆ ಹೈಕೋರ್ಟ್ ಸೂಚನೆ
ಕೋವಿಡ್ ಪ್ರಕರಣಗಳು ಕಡಿಮೆ ಇರುವ ತಾಲ್ಲೂಕುಗಳಲ್ಲಿ ಶಾಲೆಗಳನ್ನು ಪುನರಾರಂಭಿಸುವ ಕುರಿತು ಚಿಂತನೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ.

ಬೆಂಗಳೂರು: ಕೋವಿಡ್ ಪ್ರಕರಣಗಳು ಕಡಿಮೆ ಇರುವ ತಾಲ್ಲೂಕುಗಳಲ್ಲಿ ಶಾಲೆಗಳನ್ನು ಪುನರಾರಂಭಿಸುವ ಕುರಿತು ಚಿಂತನೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ.
ವಕೀಲ ಎ.ಎ. ಸಂಜೀವ್ ನರೇನ್ ಹಾಗೂ ಇತರರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿ.ವಿ. ನಾಗರತ್ನ ನೇತೃತ್ವದ ವಿಭಾಗೀಯ ಪೀಠ, ಶಾಲೆ ಪುನರಾರಂಭಿಸಲು ರಾಜ್ಯದಾದ್ಯಂತ ಏಕರೂಪ ನೀತಿ ಅನುಸರಿಸುವ ಬದಲು ಹಂತ–ಹಂತವಾಗಿ ತೆರೆಯಲು ಸಾಧ್ಯವೇ ಎಂಬುದರ ಬಗ್ಗೆ ನಿಲುವು ಸ್ಪಷ್ಟಪಡಿಸುವಂತೆ ನಿರ್ದೇಶಿಸಿತು.
ವಿಚಾರಣೆ ವೇಳೆ ಸರ್ಕಾರಿ ವಕೀಲರು, 2021ರ ಜನವರಿ 1ರಿಂದ ರಾಜ್ಯದ ಎಲ್ಲ ಶಾಲೆಗಳಲ್ಲೂ ಸುರಕ್ಷತಾ ಕ್ರಮಗಳೊಂದಿಗೆ ವಿದ್ಯಾಗಮ ಕಾರ್ಯಕ್ರಮ ಪುನರಾರಂಭಿಸಲು ತೀರ್ಮಾನಿಸಲಾಗಿದೆ ಎಂದು ಮಾಹಿತಿ ನೀಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


