ರೂಪಾಂತರಿ ಕೊರೋನಾ ಹರಡಲು ಬಿಡುವುದಿಲ್ಲ, ರಾಜ್ಯದಲ್ಲಿ ನೈಟ್ ಕರ್ಫ್ಯೂ ಜಾರಿ ಇಲ್ಲ: ಮುಖ್ಯಮಂತ್ರಿ ಯಡಿಯೂರಪ್ಪ
ರಾಜ್ಯದಲ್ಲಿ ಹೊಸ ಕೊರೋನಾ ಸೋಂಕು ಹಬ್ಬಲು ಬಿಡುವುದಿಲ್ಲ. ಆದರೆ ಮಹಾರಾಷ್ಟ್ರ ಮಾದರಿಯಲ್ಲಿ ನೈಟ್ ಕರ್ಫ್ಯೂ ಜಾರಿ ಮಾಡುವ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರು: ಕೊರೋನಾದ ಹೊಸ ಮಾದರಿ ವೈರಸ್ ನಿಂದಾಗ ರಾಜ್ಯ,ದೇಶದಲ್ಲಿ ಆತಂಕ ಎದುರಾಗಿದ್ದು, ವಿದೇಶಗಳಿಂದ ಬರುವವರ ಮೇಲೆ ನಿಗಾ ಇಟ್ಟು ಪರಿಶೀಲನೆ ನಡೆಸಲಾಗುತ್ತಿದೆ. ರಾಜ್ಯದಲ್ಲಿ ಹೊಸ ಕೊರೋನಾ ಸೋಂಕು ಹಬ್ಬಲು ಬಿಡುವುದಿಲ್ಲ. ಆದರೆ ಮಹಾರಾಷ್ಟ್ರ ಮಾದರಿಯಲ್ಲಿ ನೈಟ್ ಕರ್ಫ್ಯೂ ಜಾರಿ ಮಾಡುವ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.
ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೋನಾ ರೂಪಾಂತರ ಇಡೀ ರಾಜ್ಯ ಮತ್ತು ದೇಶದ ಜನರನ್ನು ಆತಂಕಕ್ಕೀಡು ಮಾಡಿದೆ. ಈಗಾಗಲೇ ಚೆನ್ನೈಗೆ ಬಂದಿರುವ ವ್ಯಕ್ತಿಯಲ್ಲಿ ಕಾಣಿಸಿಕೊಂಡಿದೆ ಹಾಗಾಗಿ ಎಷ್ಟು ಕಟ್ಟೆಚ್ಚರ ವಹಿಸಿದರೂ ಕಡಿಮೆಯೇ. ಯಾರೇ ಹೊರಗಡೆಯಿಂದ ಬಂದರೂ ವಿಮಾನ ನಿಲ್ದಾಣದಲ್ಲಿ ನೋಡಿ ಪರಿಶೀಲಿಸಿ ತಪಾಸಣೆ ಮಾಡುತ್ತೇವೆ ಎಂದರು.
ದೇಶಾದ್ಯಂತ ಈಗಾಗಲೇ ಅಲರ್ಟ್ ಇದೆ. ಪ್ರಧಾನಿ ಕೂಡಾ ಆತಂಕಕ್ಕೊಳಗಾಗಿ ಎಚ್ಚರಿಕೆಯಿಂದ ಇರುವಂತೆ ಎಲ್ಲಾ ರಾಜ್ಯಗಳಿಗೂ, ದೇಶದ ಜನತೆಯಲ್ಲಿ ಮನವಿ ಮಾಡಿಕೊಂಡಿದ್ದಾರೆ. ಅದರಂತೆ ಕರ್ನಾಟಕದಲ್ಲಿ ಯಾವುದೇ ಕಾರಣಕ್ಕೂ ವೈರಸ್ ಹರಡದಂತೆ ಬೇಕಿರುವ ಎಚ್ಚರಿಕೆ ವಹಿಸುತ್ತೇವೆ. ಈ ವರ್ಷ ಹೊಸ ವರ್ಷ ಆಚರಣೆಯೇ ಇಲ್ಲ ಹೊಸ ವರ್ಷ ದೊಡ್ಡ ಪ್ರಮಾಣದಲ್ಲಿ ಆಚರಣೆ ಮಾಡಲು ಬಿಡಲ್ಲ ಎಂದು ಅವರು ತಿಳಿಸಿದರು.
ಮಹಾರಾಷ್ಟ್ರದಲ್ಲಿ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ. ಆದರೆ ಆ ಮಾದರಿ ಇಲ್ಲ ಅಗತ್ಯವಿಲ್ಲ. ನಮ್ಮ ರಾಜ್ಯದಲ್ಲಿ ಸದ್ಯಕ್ಕೆ ನೈಟ್ ಕರ್ಫ್ಯೂ ಅಗತ್ಯವಿಲ್ಲ ಎಂದು ಹೇಳುವ ಮೂಲಕ ಎಚ್ಚರಿಕೆ ವಹಿಸುವುದನ್ನು ಬಿಟ್ಟು ಮತ್ಯಾವುದೇ ದಾರಿ ಇಲ್ಲವೆಂದು ತಿಳಿಸಿದರು.
ರಾಜ್ಯದಲ್ಲಿ ನೈಟ್ ಕರ್ಫ್ಯೂ ಜಾರಿಗೆ ಸರ್ಕಾರ ಚಿಂತನೆ
ಈ ನಡುವೆ ಹೇಳಿಕೆ ನೀಡಿರುವ ಆರೋಗ್ಯ ಸಚಿವ ಸುಧಾಕರ್ ಅವರು, ಕೊರೋನಾ ಹೊಸ ಮಾದರಿಯ ಸೋಂಕು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ನೈಟ್ ಕರ್ಫ್ಯೂ ಜಾರಿಗೆ ಸರ್ಕಾರ ಚಿಂತನೆ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ.
ನಮ್ಮ ಸರ್ಕಾರಕ್ಕೆ ಜನರ ಆರೋಗ್ಯವೇ ಮುಖ್ಯ. ಅವರ ರಕ್ಷಣೆಗಾಗಿ ನೈಟ್ ಕರ್ಫ್ಯೂ ಜಾರಿಗೆ ತರುವ ಬಗ್ಗೆ ಸಿಎಂ ಜೊತೆ ಚರ್ಚೆ ಮಾಡಿ ತೀರ್ಮಾನ ಮಾಡುತ್ತೇವೆ. ಕೇಂದ್ರ ಆರೋಗ್ಯ ಸಚಿವಾಲಯ ನೈಟ್ ಕರ್ಫ್ಯೂ ವಿಧಿಸುವ ಅಧಿಕಾರ ರಾಜ್ಯಗಳಿಗೆ ನೀಡಿದೆ. ಈ ಬಗ್ಗೆ ಸಿಎಂ ಜೊತೆ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


