ರಾಜ್ಯ

ಸಿಎಂ ಯಡಿಯೂರಪ್ಪ ವಿರುದ್ಧದ ಕೇಸ್ ರದ್ಧತಿಗೆ ಹೈಕೋರ್ಟ್ ನಕಾರ

ಬೆಳ್ಳಂದೂರು ಹಾಗೂ ದೇವರಬೀಸನಹಳ್ಳಿಯಲ್ಲಿ ಐಟಿ ಕಾರಿಡಾರ್ ಗಾಗಿ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ ವಶಪಡಿಸಿಕೊಂಡಿದ್ದ ಜಮೀನನ್ನು ಅಕ್ರಮವಾಗಿ ಡಿನೋಟಿಫಿಕೇಷನ್ ಮಾಡಿದ ಆರೋಪ ಸಂಬಂಧ ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ನಡೆದಿರುವ ಲೋಕಾಯುಕ್ತ ಕೋರ್ಟ್ ವಿಚಾರಣೆ ರದ್ದುಪಡಿಸಲು ಹೈಕೋರ್ಟ್ ನಿರಾಕರಿಸಿದೆ.

ಸಿಎಂ ಯಡಿಯೂರಪ್ಪ ವಿರುದ್ಧದ ಕೇಸ್ ರದ್ಧತಿಗೆ ಹೈಕೋರ್ಟ್ ನಕಾರ
ಯಡಿಯೂರಪ್ಪ
Published On :

ಬೆಂಗಳೂರು: ಬೆಳ್ಳಂದೂರು ಹಾಗೂ ದೇವರಬೀಸನಹಳ್ಳಿಯಲ್ಲಿ ಐಟಿ ಕಾರಿಡಾರ್ ಗಾಗಿ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ ವಶಪಡಿಸಿಕೊಂಡಿದ್ದ ಜಮೀನನ್ನು ಅಕ್ರಮವಾಗಿ ಡಿನೋಟಿಫಿಕೇಷನ್ ಮಾಡಿದ ಆರೋಪ ಸಂಬಂಧ ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ನಡೆದಿರುವ ಲೋಕಾಯುಕ್ತ ಕೋರ್ಟ್ ವಿಚಾರಣೆ ರದ್ದುಪಡಿಸಲು ಹೈಕೋರ್ಟ್ ನಿರಾಕರಿಸಿದೆ. 

ತಮ್ಮ ವಿರುದ್ಧದ ಲೋಕಾಯುಕ್ತ ಪೊಲೀಸರು ದಾಖಲಿಸಿರುವ ಎಫ್ಐಆರ್ ಮತ್ತು ಈ ಸಂಬಂಧ ನಡೆದಿರುವ ಲೋಕಾಯುಕ್ತ ಕೋರ್ಟ್ ವಿಚಾರಣೆ ರದ್ದುಪಡಿಸುವಂತೆ ಕೋರಿ ಯಡಿಯೂರಪ್ಪ ಅವರು 2019ರಲ್ಲಿ ಸಲ್ಲಿಸಿದ್ದ ತಕರಾರು ಅರ್ಜಿಯನ್ನು ನ್ಯಾಯಮೂರ್ತಿ ಜಾನ್ ಮೈಕೆಲ್ ಕುನ್ಹಾ ಅವರಿದ್ದ ಏಕ ಸದಸ್ಯ ನ್ಯಾಯಪೀಠ ಮಂಗಳವಾರ ವಜಾಗೊಳಿಸಿ, ತನಿಖೆ ಮುಂದುವರೆಸುವ ನಿರ್ದೇಶನವಿದ್ದರೂ ಈ ದಿಸೆಯಲ್ಲಿ ಕಾರ್ಯನಿರ್ವಹಿಸದ ಲೋಕಾಯುಕ್ತ ಪೊಲೀಸರ ಕಾರ್ಯವೈಖರಿಯನ್ನು ತರಾಟೆಗೆ ತೆಗೆದುಕೊಂಡಿತು. 

"4 ವರ್ಷದಲ್ಲಿ ಪ್ರಕರಣದ ತನಿಖೆ ನಡೆಸುವುದಕ್ಕೆ ಯಾವುದೇ ನ್ಯಾಯಾಲಯದಿಂದಲೂ ತಡೆಯಾಜ್ಞೆ ಇರಲಿಲ್ಲ. ಆದರೂ ಲೋಕಾಯುಕ್ತ ಪೊಲೀಸರು ಯಡಿಯೂರಪ್ಪ ವಿರುದ್ಧ ತನಿಖೆ ನಡೆಸಿಲ್ಲ. ತನಿಖೆ ನಡೆಸದಿರುವುದಕ್ಕೆ ಮತ್ತು ಅರ್ಜಿ ಕುರಿತು ಲೋಕಾಯುಕ್ತ ಪೊಲೀಸರು ಸಲ್ಲಿಸಿರುವ ಆಕ್ಷೇಪಣೆಯನ್ನು ಒಪ್ಪುವಂತಹದಲ್ಲ. ಉನ್ನತ ಹುದ್ದೆಯಲ್ಲಿರುವವರ ವಿರುದ್ಧದ ಪ್ರಕರಣಗಳ ತನಿಖೆ ಪ್ರಗತಿ ಕಾಣದಿದ್ದರೆ ಕಾನೂನು ಮತ್ತು ನ್ಯಾಯಾಂಗ ವ್ಯವಸ್ಥೆ ಮೇಲಿನ ನಂಬಿಕೆ-ವಿಶ್ವಾಸವನ್ನು ಸಾರ್ವಜನಿಕರು ಕಳೆದುಕೊಳ್ಳುವ ಪರಿಸ್ಥಿತಿ ಉದ್ಭವಿಸುತ್ತದೆ," ಎಂದು ನ್ಯಾಯಪೀಠ ಇದೇ ವೇಳೆ ಅಭಿಪ್ರಾಯಪಟ್ಟಿತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.