ರಾಜ್ಯ

ಶಿವಮೊಗ್ಗ: ಇಬ್ಬರು ಮಕ್ಕಳ ಜೊತೆ ಕೆರೆಗೆ ಹಾರಿ ತಾಯಿ ಆತ್ಮಹತ್ಯೆ

ತನ್ನಿಬ್ಬರು ಮಕ್ಕಳನ್ನು ಕೆರೆಗೆ ಎಸೆದು ತಾಯಿಯೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿವಮೊಗ್ಗ ಜಿಲ್ಲೆಯ ಮೈದೊಳಲು ಮಲ್ಲಾಪುರ ಗ್ರಾಮದಲ್ಲಿ ನಡೆದಿದೆ.

ಶಿವಮೊಗ್ಗ: ಇಬ್ಬರು ಮಕ್ಕಳ ಜೊತೆ ಕೆರೆಗೆ ಹಾರಿ ತಾಯಿ ಆತ್ಮಹತ್ಯೆ
Published On :

ಶಿವಮೊಗ್ಗ: ತನ್ನಿಬ್ಬರು ಮಕ್ಕಳನ್ನು ಕೆರೆಗೆ ಎಸೆದು ತಾಯಿಯೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿವಮೊಗ್ಗ ಜಿಲ್ಲೆಯ ಮೈದೊಳಲು ಮಲ್ಲಾಪುರ ಗ್ರಾಮದಲ್ಲಿ ನಡೆದಿದೆ.

ಮೃತರನ್ನು ರಚನಾ(5), ಯಮುನಾ(7)  ಹಾಗೂ ತಾಯಿ ಮಂಜುಳಾ (35) ಎಂದು ಗುರುತಿಸಲಾಗಿದೆ.

ಡಿಸೆಂಬರ್ 18ರಿಂದ ಮಂಜುಳಾ ತನ್ನಿಬ್ಬರು ಮಕ್ಕಳೊಂದಿಗೆ ಮಲ್ಲಾಪುರ ಗ್ರಾಮದಿಂದ ನಾಪತ್ತೆಯಾಗಿದ್ದಳು. ಈ ಸಂಬಂಧ ಡಿಸೆಂಬರ್ 21ರಂದು ಆಕೆಯ ಕುಟುಂಬದವರು ಹೊಳೆಹಿನ್ನೂರು ಪೋಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಇಂದು ಕೆರೆಯಲ್ಲಿ ದುರ್ವಾಸನೆ ಬಂದದ್ದರಿಂದಾಗಿ ಘಟನೆ ಬೆಳಕಿಗೆ ಬಂದಿದೆ. ಕೌಟುಂಬಿಕ ಕಲಹವೇ ಈ ಘಟನೆಗೆ ಕಾರಣವೆಂದು ಶಂಕಿಸಲಾಗಿದೆ.

ಹೊಳೆಹೊನ್ನೂರು ಠಾಣೆ ಪೋಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು  ಶಿವಮೊಗ್ಗದ ಶವಾಗಾರಕ್ಕೆ ಕಳುಹಿಸಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.