ರಾಜ್ಯ

ಎಪಿಎಂಸಿ ಕಾಯ್ದೆಗೆ ತಿದ್ದುಪಡಿ: ಇಂದು ರೈತರನ್ನು ಭೇಟಿ ಮಾಡಲಿರುವ ಸಿಎಂ ಯಡಿಯೂರಪ್ಪ 

ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ(ಎಪಿಎಂಸಿ) ಕಾಯ್ದೆ ತಿದ್ದುಪಡಿಯಿಂದ ರೈತರಲ್ಲಿ ಉಂಟಾಗಿರುವ ಗ್ರಹಿಕೆ ಬಗ್ಗೆ ಅರಿವು ಮೂಡಿಸಲು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಶುಕ್ರವಾರ ರೈತರನ್ನು ಭೇಟಿ ಮಾಡಿ ಅವರ ಸಮಸ್ಯೆಗಳನ್ನು ಆಲಿಸಲಿದ್ದಾರೆ.

ಎಪಿಎಂಸಿ ಕಾಯ್ದೆಗೆ ತಿದ್ದುಪಡಿ: ಇಂದು ರೈತರನ್ನು ಭೇಟಿ ಮಾಡಲಿರುವ ಸಿಎಂ ಯಡಿಯೂರಪ್ಪ 
ರೈತರ ಅಂತಿಮ ಕ್ರಿಯೆಯನ್ನು ಮಾಡುವ ರೀತಿಯಲ್ಲಿ ಕೇಂದ್ರ ಸರ್ಕಾರದ ಕೃಷಿ ಕಾಯ್ದೆ ವಿರುದ್ಧ ರೈತರ ಸಾಂಕೇತಿಕ ಪ್ರತಿಭಟನೆ
Published On :

ಬೆಂಗಳೂರು: ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ(ಎಪಿಎಂಸಿ) ಕಾಯ್ದೆ ತಿದ್ದುಪಡಿಯಿಂದ ರೈತರಲ್ಲಿ ಉಂಟಾಗಿರುವ ಗ್ರಹಿಕೆ ಬಗ್ಗೆ ಅರಿವು ಮೂಡಿಸಲು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಶುಕ್ರವಾರ ರೈತರನ್ನು ಭೇಟಿ ಮಾಡಿ ಅವರ ಸಮಸ್ಯೆಗಳನ್ನು ಆಲಿಸಲಿದ್ದಾರೆ.

ಇನ್ನೊಂದೆಡೆ ಕೇಂದ್ರ ಸರ್ಕಾರದ ನೂತನ ಕೃಷಿ ನೀತಿ ಬಗ್ಗೆ ರೈತರಲ್ಲಿ ಅಸಮಾಧಾನವಿದ್ದು ಪ್ರತಿಭಟನೆ 28ನೇ ದಿನಕ್ಕೆ ಕಾಲಿಟ್ಟಿದೆ.

ಇಂದು ಮಾಜಿ ಪ್ರಧಾನಿ ದಿವಂಗತ ಅಟಲ್ ಬಿಹಾರಿ ವಾಜಪೇಯಿಯವರ ಜಯಂತಿಯಾಗಿದ್ದು ಈ ಸಂದರ್ಭದಲ್ಲಿ ಕೃಷಿ ಸಮ್ಮಾನ್ ಯೋಜನೆ ದಿನವನ್ನು ಹಮ್ಮಿಕೊಳ್ಳಲಾಗಿದೆ. ಇದರ ಅಂಗವಾಗಿ ಇಂದು ರೈತರನ್ನು ಯಶವಂತಪುರದ ಎಪಿಎಂಪಿ ಮಾರುಕಟ್ಟೆಯಲ್ಲಿ ಭೇಟಿ ಮಾಡಲಿರುವ ಮುಖ್ಯಮಂತ್ರಿ ಯಡಿಯೂರಪ್ಪ, ಕಾಯ್ದೆಗೆ ತಂದಿರುವ ತಿದ್ದುಪಡಿ ಬಗ್ಗೆ ಜನರ ಮನವೊಲಿಸುವ ಪ್ರಯತ್ನ ಮಾಡಲಿದ್ದಾರೆ.

ತಿದ್ದುಪಡಿಯಿಂದ ರೈತರಿಗೆ ಯಾವ ರೀತಿ ಅನುಕೂಲವಾಗಲಿದೆ ಎಂದು ಮುಖ್ಯಮಂತ್ರಿಗಳು ವಿವರಿಸಲಿದ್ದಾರೆ. ತಿದ್ದುಪಡಿಯಿಂದ ಯಾವುದೇ ಸಮಸ್ಯೆಯುಂಟಾಗುವುದಿಲ್ಲ, ತಿದ್ದುಪಡಿಯ ಅವಶ್ಯಕತೆ ಏಕಿತ್ತು, ನನ್ನ ಇಳುವರಿ, ನನ್ನ ಹಕ್ಕು ಎಷ್ಟು ಅಗತ್ಯವಿದೆ ಎಂಬುದನ್ನು ಮುಖ್ಯಮಂತ್ರಿ ರೈತರಿಗೆ ಮನದಟ್ಟು ಮಾಡಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.