ರಾಜ್ಯ

ರೆಸ್ಟೋರೆಂಟ್ ನಲ್ಲಿ ಬೆಂಕಿ ಅವಘಡ; ಅಪಾರ ಹಾನಿ

ರೆಸ್ಟೋರೆಂಟ್ ಒಂದಕ್ಕೆ ಆಕಸ್ಮಿಕ ಬೆಂಕಿ ತಗುಲಿದ ಪರಿಣಾಮ 25 ಲಕ್ಷಕ್ಕೂ ಹೆಚ್ಚು ನಷ್ಟ ಸಂಭವಿಸಿದ ಘಟನೆ ಜ್ಞಾನಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು ಮುಂಜಾನೆ ನಡೆದಿದೆ.

ರೆಸ್ಟೋರೆಂಟ್ ನಲ್ಲಿ ಬೆಂಕಿ ಅವಘಡ; ಅಪಾರ ಹಾನಿ
ಕಿಕ್ ಔಟ್ ರೆಸ್ಟೋರೆಂಟ್
Published On :

ಬೆಂಗಳೂರು: ರೆಸ್ಟೋರೆಂಟ್ ಒಂದಕ್ಕೆ ಆಕಸ್ಮಿಕ ಬೆಂಕಿ ತಗುಲಿದ ಪರಿಣಾಮ 25 ಲಕ್ಷಕ್ಕೂ ಹೆಚ್ಚು ನಷ್ಟ ಸಂಭವಿಸಿದ ಘಟನೆ ಜ್ಞಾನಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು ಮುಂಜಾನೆ ನಡೆದಿದೆ.

ಜ್ಞಾನಭಾರತಿಯ ಕಿಕ್ ಔಟ್ ರೆಸ್ಟೋರೆಂಟ್ ನಲ್ಲಿ ಈ ದುರಂತ ಸಂಭವಿಸಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಜ್ಞಾನಭಾರತಿಯ ಶಿರ್ಕೆ ಅಪಾರ್ಟ್ ಮೆಂಟ್ ಬಳಿಯ ಕಿಕ್ ಔಟ್ ರೆಸ್ಟೋರೆಂಟ್ ನಲ್ಲಿ ಮುಂಜಾನೆ 5.30ರ ವೇಳೆ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿದೆ ಎಂದು ಅಗ್ನಿಶಾಮಕ ಸಿಬ್ಬಂದಿ ತಿಳಿಸಿದ್ದಾರೆ.

ಬೆಂಕಿ ಕಟ್ಟಡದ ಎಲ್ಲಾ ಕಡೆ ಕ್ಷಣಾರ್ಧದಲ್ಲಿ ಆವರಿಸಿ‌ 25 ಲಕ್ಷಕ್ಕೂ ಅಧಿಕ ಮೌಲ್ಯದ ಪೀಠೋಪಕರಣಗಳು ಬೆಂಕಿಗಾಹುತಿಯಾಗಿವೆ. ಬೆಂಕಿ ನೋಡಿದ ಕಾರ್ಮಿಕರು ಹೊರಗೆ ಓಡಿ ಅಗ್ನಿಶಾಮಕದಳಕ್ಕೆ ಕರೆ ಮಾಡಿದ್ದಾರೆ. ಕೂಡಲೇ ಸ್ಥಳಕ್ಕೆ ಧಾವಿಸಿದ ಎರಡು ಅಗ್ನಿಶಾಮಕ ವಾಹನಗಳು ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಜ್ಞಾನಭಾರತಿ ಪೊಲೀಸರು ಪ್ರಕರಣ ದಾಖಲಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ ಎಂದು ಡಿಸಿಪಿ ಸಂಜೀವ್ ಪಾಟೀಲ್ ‌ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.