ರೈತರು ಮುಕ್ತ ಮನಸ್ಸಿನಿಂದ ನೂತನ ಕೃಷಿ ಕಾಯ್ದೆಯ ಪ್ರಯೋಗ ಮಾಡಿ ನೋಡಲಿ: ಹೆಚ್.ಡಿ. ಕುಮಾರಸ್ವಾಮಿ
ಕೇಂದ್ರ ಸರ್ಕಾರ ರೈತರಿಗೆ ಕಾರ್ಯಕ್ರಮಗಳ ಮೂಲಕ ಪರೋಕ್ಷ ಸಂದೇಶ ರವಾನಿಸುವ ಬದಲಿಗೆ ಪ್ರಧಾನಿ ನೇತೃತ್ವದಲ್ಲಿ ನಿರ್ಣಾಯಕ ಸಭೆ ನಡೆಸಿ, ಹೋರಾಟ ಅಂತ್ಯಗೊಳಿಸುವುದು ಸೂಕ್ತ. ಇದು ದೇಶದ ಘನತೆ ದೃಷ್ಟಿಯಿಂದ ಅತ್ಯಗತ್ಯವೂ ಹೌದು. ದೇಶದ ಘನತೆಯ ವಿಚಾರದಲ್ಲಿ ಮೋದಿಯವರೂ ಎಚ್ಚರಿಕೆಯಿಂದ ವರ್ತಿಸುತ್ತಾರೆ. ಆದ್ದರಿಂದ ಸಮಸ್ಯೆ ಕೂಡಲೇ ಇತ್ಯರ್ಥವಾಗಲಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್

ಬೆಂಗಳೂರು: ಕೇಂದ್ರ ಸರ್ಕಾರ ರೈತರಿಗೆ ಕಾರ್ಯಕ್ರಮಗಳ ಮೂಲಕ ಪರೋಕ್ಷ ಸಂದೇಶ ರವಾನಿಸುವ ಬದಲಿಗೆ ಪ್ರಧಾನಿ ನೇತೃತ್ವದಲ್ಲಿ ನಿರ್ಣಾಯಕ ಸಭೆ ನಡೆಸಿ, ಹೋರಾಟ ಅಂತ್ಯಗೊಳಿಸುವುದು ಸೂಕ್ತ. ಇದು ದೇಶದ ಘನತೆ ದೃಷ್ಟಿಯಿಂದ ಅತ್ಯಗತ್ಯವೂ ಹೌದು. ದೇಶದ ಘನತೆಯ ವಿಚಾರದಲ್ಲಿ ಮೋದಿಯವರೂ ಎಚ್ಚರಿಕೆಯಿಂದ ವರ್ತಿಸುತ್ತಾರೆ. ಆದ್ದರಿಂದ ಸಮಸ್ಯೆ ಕೂಡಲೇ ಇತ್ಯರ್ಥವಾಗಲಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.
ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ಭಾರತೀಯ ಕೃಷಿರಂಗ ವಿಷವರ್ತುಲದಲ್ಲಿದೆ ಎಂಬುದು ಸಾರ್ವತ್ರಿಕ ಆರೋಪ. ಕೃಷಿ ರಂಗದ ಕಲ್ಯಾಣವಾಗುತ್ತದೆ ಎಂದರೆ ಯಾವುದೇ ಪ್ರಯೋಗಕ್ಕೆ ನಾವೂ ಸಿದ್ಧರಿರುವುದು ಅಗತ್ಯ ಕೂಡ. ಹಾಗಾಗಿ ರೈತರು ಕಾಯ್ದೆಗೆ ಅವಕಾಶ ನೀಡುವ ಬಗ್ಗೆಯೂ ಒಮ್ಮೆ ಆಲೋಚಿಸುವುದು ಉಚಿತವೂ ಆಗಿದೆ ಎಂಬುದು ನನ್ನ ಅಭಿಪ್ರಾಯ. ಆದರೆ, ಸರ್ಕಾರ, ಹೋರಾಟಗಾರರ ನಡುವೆ ಸಮನ್ವಯವಿರಲಿ ಎಂದು ಸಲಹೆ ನೀಡಿದ್ದಾರೆ.
ಕಾಯ್ದೆ ಬಗ್ಗೆ ಕೇಂದ್ರ ಸಚಿವ ರಾಜನಾಥ್ ಸಿಂಗ್ ಅವರ ಮಾತುಗಳು ಭರವಸೆ ಮೂಡಿಸುವಂತಿವೆ. ಕಾಯ್ದೆಗಳ ಪ್ರಯೋಗಾತ್ಮಕ ಜಾರಿಗೆ ಅವಕಾಶ ನೀಡುವಂತೆ ಅವರು ಕೋರಿದ್ದಾರೆ. ಅಲ್ಲದೆ, ಕಾಯ್ದೆಗಳು ರೈತರಿಗೆ ಸಮಸ್ಯೆ ಸೃಷ್ಟಿಸುವಂತಿದ್ದರೆ ಸರ್ಕಾರ ಅವುಗಳನ್ನು ಹಿಂದಕ್ಕೆ ಪಡೆಯುವುದಾಗಿಯೂ ಅವರು ಆಶ್ವಾಸನೆ ನೀಡಿದ್ದಾರೆ. ರೈತರೂ ಈ ನಿಟ್ಟಿನಲ್ಲಿ ಯೋಚಿಸಬೇಕು ಎಂದು ಮನವಿ ಮಾಡಿದ್ದಾರೆ.
ಭಾರತ ಗಳಿಸಿಕೊಂಡ ಖ್ಯಾತಿ, ಸ್ಥಾನಮಾನಗಳಿಗೆ ಈ ಹೊಸ ಕಾಯ್ದೆಗಳು, ಅದರ ವಿರುದ್ಧ ನಡೆಯುತ್ತಿರುವ ಹೋರಾಟಗಳು ಚ್ಯುತಿಯುಂಟು ಮಾಡಬಾರದು ಎಂಬುದು ನನ್ನ ಅಭಿಲಾಷೆ. ಮೋದಿ ತಾವು ಪ್ರಧಾನಿಯಾದ ನಂತರ ಸ್ವತಃ ತಾವು ಗಳಿಸಿಕೊಂಡ ಹೆಸರಿಗೂ ಇದು ಕಪ್ಪುಚುಕ್ಕೆಯಾಗಬಹುದು ಎಂಬುದನ್ನು ಅವರು ಗಮನಿಸಬೇಕು. ಅದೇ ಹೊತ್ತಲ್ಲೇ ರೈತರಿಗೆ ಅನಾನುಕೂಲವೂ ಆಗಬಾರದು ಎಂದು ತಿಳಿಸಿದ್ದಾರೆ. ಕೇಂದ್ರದ ಮೂರು ಕೃಷಿ ಕಾಯ್ದೆಗಳ ವಿಚಾರವಾಗಿ ದೆಹಲಿ ಹೊರವಲಯದಲ್ಲಿ ನಡೆಯುತ್ತಿರುವ ಪ್ರತಿಭಟನೆ ಈಗ ದೇಶ ಮಾತ್ರವಲ್ಲದೇ, ವಿಶ್ವದ ಗಮನ ಸೆಳೆಯುತ್ತಿದೆ. ಕೆನಡಾ ಪ್ರಧಾನಿ ಕಳವಳದ ನಡುವೆಯೇ ಈಗ ಅಮೆರಿಕ, ಬ್ರಿಟನ್ ಸಂಸದರೂ ಕಳವಳ ವ್ಯಕ್ತಪಡಿಸಿದ್ದಾರೆ. ಭಾರತದಲ್ಲಿ ಏನೋ ಸಮಸ್ಯೆ ಸೃಷ್ಟಿಯಾಗಿದೆ ಎಂಬರ್ಥವನ್ನು ರೈತರ ಈ ಹೋರಾಟ ಹೊಮ್ಮಿಸುತ್ತಿದೆ ಎಂದು ಟ್ವೀಟ್ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


