ರಾಜ್ಯ

ಕುಂದಾಪುರ ಮೂಲದ ನವದಂಪತಿ ಅನುದೀಪ್ ಮತ್ತು ಮಿನುಷಾ ಹೆಗ್ಡೆಯವರನ್ನು ಮನಸಾರೆ ಹೊಗಳಿದ ಪ್ರಧಾನಿ ಮೋದಿ!

ಕುಂದಾಪುರದ ಬೈಂದೂರಿನ ನವದಂಪತಿ ಇಂದು ಪ್ರಧಾನಿ ಮೋದಿಯವರ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಅವರ ಪ್ರಶಂಸೆಗೆ ಪಾತ್ರವಾಗಿದ್ದಾರೆ.

ಕುಂದಾಪುರ ಮೂಲದ ನವದಂಪತಿ ಅನುದೀಪ್ ಮತ್ತು ಮಿನುಷಾ ಹೆಗ್ಡೆಯವರನ್ನು ಮನಸಾರೆ ಹೊಗಳಿದ ಪ್ರಧಾನಿ ಮೋದಿ!
ಅನುದೀಪ್ ಮತ್ತು ಮಿನುಷಾ ಹೆಗ್ಡೆ
Published On :

ಬೆಂಗಳೂರು: ಕುಂದಾಪುರದ ಬೈಂದೂರಿನ ನವದಂಪತಿ ಇಂದು ಪ್ರಧಾನಿ ಮೋದಿಯವರ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಅವರ ಪ್ರಶಂಸೆಗೆ ಪಾತ್ರವಾಗಿದ್ದಾರೆ.

ಕಳೆದ ತಿಂಗಳು ನವೆಂಬರ್ 18ರಂದು ಕುಂದಾಪುರದ ಬೈಂದೂರಿನ ಅನುದೀಪ್ ಹೆಗ್ಡೆ ಮತ್ತು ಮಿನುಷಾ ಕಾಂಚನ್ ಮದುವೆಯಾಗಿದ್ದರು. ಮದುವೆಯಾದ ನವದಂಪತಿ ಸಾಮಾನ್ಯವಾಗಿ ತಮ್ಮದೇ ಲೋಕದಲ್ಲಿ ವಿಹರಿಸುತ್ತಿರುತ್ತಾರೆ. ಹನಿಮೂನ್ ಹೋಗುತ್ತಾರೆ.

ಆದರೆ ಈ ದಂಪತಿ ಮಾಡಿದ ಕೆಲಸ ಸೋಮೇಶ್ವರ ಬೀಚ್ ನ್ನು ಸ್ವಚ್ಛಗೊಳಿಸಿದ್ದು. ಅನುದೀಪ್ ಗೆ ಹಿಂದಿನಿಂದಲೂ ತಮ್ಮ ಮನೆಯಿಂದ 3 ಕಿಲೋ ಮೀಟರ್ ದೂರದಲ್ಲಿರುವ ಸೋಮೇಶ್ವರ ಸಮುದ್ರ ತೀರವನ್ನು ಸ್ವಚ್ಛಗೊಳಿಸುವುದು ಅಭ್ಯಾಸ. ಅದಕ್ಕೀಗ ಅವರ ಪತ್ನಿ ಕೂಡ ಸಾಥ್ ನೀಡುತ್ತಿದ್ದಾರೆ.

ಲಕ್ಷದ್ವೀಪ ಅಥವಾ ಹಿಮಾಚಲ ಪ್ರದೇಶಕ್ಕೆ ಹೋಗಿ ಅಲ್ಲಿ ಸ್ವಚ್ಛ ಮಾಡಬೇಕೆಂದು ಅಂದುಕೊಂಡಿದ್ದರು ಇವರು, ಆದರೆ ಕೊರೋನಾದಿಂದಾಗಿ ಹೋಗದೆ ತಮ್ಮ ಮನೆ ಹತ್ತಿರವೇ ಸ್ವಚ್ಛ ಮಾಡಿದ್ದಾರೆ. ಸಮುದ್ರ ತೀರದಲ್ಲಿ ಚಪ್ಪಲ್ ಗಳು, ಆಲ್ಕೋಹಾಲ್ ಬಾಟಲ್ ಗಳು, ವೈದ್ಯಕೀಯ ಬಾಟಲ್ ಗಳು, ಕಸಗಳು, ಪ್ಲಾಸ್ಟಿಕ್ ಗಳು ಬಿದ್ದುಕೊಂಡಿರುತ್ತವೆ. ಅವುಗಳನ್ನೆಲ್ಲಾ ಸ್ವಚ್ಛಗೊಳಿಸಿದ್ದೇವೆ ಎನ್ನುತ್ತಾರೆ ಅನುದೀಪ್.

31 ವರ್ಷದ ಅನುದೀಪ್ ಡಿಜಿಟಲ್ ಮಾರ್ಕೆಟಿಂಗ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದಾರೆ. ಕಳೆದ ನವೆಂಬರ್ 27ರಿಂದ ಡಿಸೆಂಬರ್ 5ರವರೆಗೆ ಇವರು ಸುಮಾರು 600 ಕಿಲೋ ತ್ಯಾಜ್ಯಗಳನ್ನು ಈ ದಂಪತಿ ಸೋಮೇಶ್ವರ ಬೀಚ್ ತೀರದಿಂದ ಹೊರತೆಗೆದಿದ್ದಾರಂತೆ. ಇವರ ಕೆಲಸ ಹಲವರ ಪ್ರಶಂಸೆಗೆ ಪಾತ್ರವಾಗಿದೆ.ಇದೀಗ ಪ್ರಧಾನಿಯೇ ಗುರುತಿಸಿ ಮನ್ ಕಿ ಬಾತ್ ನಲ್ಲಿ ಇಂದಿನ ಯುವ ಪೀಳಿಗೆಗೆ ದಂಪತಿ ದಾರಿದೀಪ ಎಂದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.