ರಾಜ್ಯ

ಹೊಸ ವರ್ಷಾಚರಣೆ ದಿನ ನೈಟ್ ಕರ್ಫ್ಯೂ ಇಲ್ಲ, ಬಹಿರಂಗ ಆಚರಣೆಗೆ ನಿಷೇಧ: ಬೊಮ್ಮಾಯಿ

ಹೊಸ ವರ್ಷಾಚರಣೆ ಹಿನ್ನೆಲೆ ಎರಡು ದಿನಗಳಿಗೆ ಸೀಮಿತವಾಗಿ ಯಾವುದೇ ನೈಟ್ ಕರ್ಫ್ಯೂ ಹೇರುವುದಿಲ್ಲ. ಆದರೆ ಬಹಿರಂಗ ಆಚರಣೆ ನಿಷೇಧಿಸಲಾಗುತ್ತದೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರು ಸೋಮವಾರ ಹೇಳಿದ್ದಾರೆ.

ಹೊಸ ವರ್ಷಾಚರಣೆ ದಿನ ನೈಟ್ ಕರ್ಫ್ಯೂ ಇಲ್ಲ, ಬಹಿರಂಗ ಆಚರಣೆಗೆ ನಿಷೇಧ: ಬೊಮ್ಮಾಯಿ
ಬಸವರಾಜ ಬೊಮ್ಮಾಯಿ
Published On :

ಬೆಂಗಳೂರು: ಹೊಸ ವರ್ಷಾಚರಣೆ ಹಿನ್ನೆಲೆ ಎರಡು ದಿನಗಳಿಗೆ ಸೀಮಿತವಾಗಿ ಯಾವುದೇ ನೈಟ್ ಕರ್ಫ್ಯೂ ಹೇರುವುದಿಲ್ಲ. ಆದರೆ ಬಹಿರಂಗ ಆಚರಣೆ ನಿಷೇಧಿಸಲಾಗುತ್ತದೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರು ಸೋಮವಾರ ಹೇಳಿದ್ದಾರೆ.

ವಿಧಾನಸೌಧದಲ್ಲಿ ಸಭೆ ಬಳಿಕ ಮಾತನಾಡಿದ ಅವರು, ಹೊಸ ಆಚರಣೆ ಸಂಬಂಧ ಆರೋಗ್ಯಾಧಿಕಾರಿ, ಪೊಲೀಸ್ ಅಧಿಕಾರಿ ಜೊತೆ ಸಭೆ ನಡೆಸಿದ್ದೇವೆ. ಡಿ.17ರಂದು ಹೊರಡಿಸಿರುವ ಮಾರ್ಗಸೂಚಿಗೆ ಕೆಲ ಮಾರ್ಪಾಡು‌ ಮಾಡಿ ಅಂತಿಮ ಮಾರ್ಗಸೂಚಿ ಹೊರಡಿಸುತ್ತೇವೆ. ನಗರ ಪೊಲೀಸ್ ಆಯುಕ್ತರು ಬೆಂಗಳೂರಿಗೆ ಸೀಮಿತವಾಗಿ ಮಾರ್ಗಸೂಚಿ ಹೊರಡಿಸಲಿದ್ದಾರೆ. ಪೊಲೀಸ್ ಮಹಾ ನಿರ್ದೇಶಕರು ಇತರ ಜಿಲ್ಲೆಯ ನಗರಗಳಿಗೆ ಅನ್ವಯವಾಗುವ ಮಾರ್ಗಸೂಚಿ ಹೊರಡಿಸುತ್ತಾರೆ ಎಂದರು.

ರೆಸಾರ್ಟ್ ಗಳಲ್ಲಿ ಹೊಸ ವರ್ಷಾಚರಣೆಗೆ ನಿಷೇಧ ಇರಲಿದೆ. ಮ್ಯೂಸಿಕ್, ಬ್ಯಾಂಡ್ ಬಳಕೆ ನಿಷೇಧಿಸಲಾಗಿದೆ. ಸಾರ್ವಜನಿಕ ಬಹಿರಂಗ ಆಚರಣೆಯನ್ನು ನಿಷೇಧಿಸಲಾಗುತ್ತದೆ. ಆಂತರಿಕವಾಗಿ ಆಚರಣೆಗೆ ನಿರ್ಬಂಧ ಇಲ್ಲ. ಪ್ರಮುಖ ರಸ್ತೆ, ಪ್ರದೇಶವಾರು ನಿರ್ಬಂಧ ಹಾಕಲಾಗುತ್ತದೆ ಎಂದು ಸ್ಪಷ್ಟಪಡಿಸಿದರು.

ರೂಪಾಂತರಿತ ವೈರಸ್ ಹರಡದಂತೆ ಕ್ರಮ ಕೈಗೊಳ್ಳುವ ಬಗ್ಗೆ ಚರ್ಚೆ ನಡೆದಿದೆ. 27 ಮಂದಿಗೆ ಕೋವಿಡ್ ಪಾಸಿಟಿವ್ ಬಂದಿದೆ. ಯುಕೆಯಿಂದ‌ ಬಂದವರು ಕಡ್ಡಾಯ ಟೆಸ್ಟ್ ಮಾಡಿಸಬೇಕು. ತಪ್ಪು ವಿಳಾಸ ಕೊಟ್ಟವರನ್ನು ಟ್ರ್ಯಾಕ್ ಮಾಡಿ ಟ್ರೇಸ್‌ ಮಾಡುವ ಬಗ್ಗೆ ಚರ್ಚೆ ನಡೆದಿದೆ. ಅವರನ್ನು ಆದಷ್ಟು ಬೇಗ ಟ್ರೇಸ್ ಮಾಡುತ್ತೇವೆ ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.