ಉಪ ಸಭಾಪತಿ ಎಸ್.ಎಲ್. ಧರ್ಮೇಗೌಡ ಹಠಾತ್ ನಿಧನ: ಮುಖ್ಯಮಂತ್ರಿ ಸೇರಿ ರಾಜಕೀಯ ನಾಯಕರ ಸಂತಾಪ
ವಿಧಾನಪರಿಷತ್ ಉಪ ಸಭಾಪತಿ ಎಸ್ ಎಲ್ ಧರ್ಮೇಗೌಡರ ಹಠಾತ್ ನಿಧನಕ್ಕೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸೇರಿದಂತೆ ಪಕ್ಷಾತೀತವಾಗಿ ರಾಜಕೀಯ ನಾಯಕರು ದಿಗ್ಭ್ರಮೆ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು: ವಿಧಾನಪರಿಷತ್ ಉಪ ಸಭಾಪತಿ ಎಸ್ ಎಲ್ ಧರ್ಮೇಗೌಡರ ಹಠಾತ್ ನಿಧನಕ್ಕೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸೇರಿದಂತೆ ಪಕ್ಷಾತೀತವಾಗಿ ರಾಜಕೀಯ ನಾಯಕರು ದಿಗ್ಭ್ರಮೆ ವ್ಯಕ್ತಪಡಿಸಿದ್ದಾರೆ.
ಎಸ್ ಎಲ್ ಧರ್ಮೇಗೌಡರ ನಿಧನ ಸುದ್ದಿಯನ್ನು ನಂಬಲೇ ಸಾಧ್ಯವಾಗುತ್ತಿಲ್ಲ. ಶಾಸಕರಾಗಿ, ಉಪಸಭಾಪತಿಗಳಾಗಿ ಜನಮನ್ನಣೆ ಗಳಿಸಿದ್ದ ಅವರ ದುರಂತ ಅಂತ್ಯ ಅತ್ಯಂತ ದುಃಖವನ್ನುಂಟು ಮಾಡಿದೆ. ಹಿರಿಯ ಅಧಿಕಾರಿಗಳಿಂದ ಘಟನೆಯ ವಿವರ ಪಡೆದುಕೊಳ್ಳುತ್ತಿದ್ದೇನೆ ಎಂದಿದ್ದಾರೆ.
ವಿಧಾನ ಪರಿಷತ್ ಉಪಸಭಾಪತಿ ಎಸ್.ಎಲ್. ಧರ್ಮೇಗೌಡ ಅವರ ಸಾವಿನಿಂದ ಆಘಾತಕ್ಕೀಡಾಗಿದ್ದೇನೆ. ಅವರ ಕುಟುಂಬದ ಸದಸ್ಯರು ಮತ್ತು ಅಭಿಮಾನಿಗಳ ದು:ಖದಲ್ಲಿ ನಾನೂ ಭಾಗಿಯಾಗಿದ್ದೇನೆ. ಶೋಕತಪ್ತ ಕುಟುಂಬಕ್ಕೆ ನನ್ನ ಸಂತಾಪಗಳು ಎಂದು ಮಾಜಿ ಸಿಎಂ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ನಿನ್ನೆಯಷ್ಟೇ ಸಮಾರಂಭದಲ್ಲಿ ಒಟ್ಟಿಗೆ ಭಾಗವಹಿಸಿದ್ದೆವು, ಸಾಕಷ್ಟು ಮಾತನಾಡಿದ್ದೆವು, ನಂತರ ರಾತ್ರಿ ಅವರಿಲ್ಲ, ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಸುದ್ದಿ ನಂಬಲೇ ಸಾಧ್ಯವಾಗುತ್ತಿಲ್ಲ ಎಂದು ಸಿ ಟಿ ರವಿ ಹೇಳಿದ್ದಾರೆ.
ಆತ್ಮೀಯರೂ,ವಿಧಾನಪರಿಷತ್ತಿನ ಮಾನ್ಯ ಉಪಸಭಾಪತಿಯವರಾಗಿದ್ದ ಶ್ರೀ ಎಸ್ ಎಲ್ ಧರ್ಮೇಗೌಡ ಅವರು ಅಕಾಲಿಕವಾಗಿ ನಮ್ಮನ್ನಗಲಿದ್ದಾರೆ. ಅಗಲಿದ ಅವರಾತ್ಮಕ್ಕೆ ಶಾಂತಿ ಪ್ರಾಪ್ತಿಯಾಗಲಿ, ಅವರ ಕುಟುಂಬಕ್ಕೆ, ಅಭಿಮಾನಿ ವರ್ಗಕ್ಕೆ ಅವರ ಅಗಲುವಿಕೆಯ ದುಃಖವನ್ನು ಸಹಿಸುವ ಶಕ್ತಿಯನ್ನು ಶ್ರೀದೇವರು ಕರುಣಿಸಲಿ ಎಂದು ಪ್ರಾರ್ಥಿಸೋಣ. #ಓಂಶಾಂತಿಃ #OmShanthi pic.twitter.com/mmbpwXFsEu
— C T Ravi
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


