ರಾಜ್ಯ

ಗೋಹತ್ಯಾ ನಿಷೇಧವನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೆ ತರುತ್ತಿರುವುದು ಹೇಡಿತನದ ಲಕ್ಷಣ: ಸಿದ್ದರಾಮಯ್ಯ

ವಿಧಾನಮಂಡಲದಲ್ಲಿ ಗೋಹತ್ಯೆ ನಿಷೇಧ ಕಾಯ್ದೆಯ ಬಗ್ಗೆ ಚರ್ಚೆಯನ್ನೇ ಮಾಡದೆ ಸುಗ್ರೀವಾಜ್ಞೆ ಮೂಲಕ ಜಾರಿಗೆ ತಂದಿರುವುದು ಸರ್ಕಾರದ ಹೇಡಿತನವನ್ನು ತೋರಿಸುತ್ತದೆ. ಚರ್ಚೆ ಮಾಡಿದರೆ ಈ ಮಸೂದೆಯ ಹಿಂದಿನ ದುರುದ್ದೇಶಗಳು ಅನಾವರಣಗೊಂಡು ತಮ್ಮ ಬಣ್ಣ ಬಯಲಾಗುತ್ತದೆ ಎಂಬ ಭಯ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಗೋಹತ್ಯಾ ನಿಷೇಧವನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೆ ತರುತ್ತಿರುವುದು ಹೇಡಿತನದ ಲಕ್ಷಣ: ಸಿದ್ದರಾಮಯ್ಯ
ಸಿದ್ದರಾಮಯ್ಯ
Published On :

ಬೆಂಗಳೂರು: ವಿಧಾನಮಂಡಲದಲ್ಲಿ ಗೋಹತ್ಯೆ ನಿಷೇಧ ಕಾಯ್ದೆಯ ಬಗ್ಗೆ ಚರ್ಚೆಯನ್ನೇ ಮಾಡದೆ ಸುಗ್ರೀವಾಜ್ಞೆ ಮೂಲಕ ಜಾರಿಗೆ ತಂದಿರುವುದು ಸರ್ಕಾರದ ಹೇಡಿತನವನ್ನು ತೋರಿಸುತ್ತದೆ. ಚರ್ಚೆ ಮಾಡಿದರೆ ಈ ಮಸೂದೆಯ ಹಿಂದಿನ ದುರುದ್ದೇಶಗಳು ಅನಾವರಣಗೊಂಡು ತಮ್ಮ ಬಣ್ಣ ಬಯಲಾಗುತ್ತದೆ ಎಂಬ ಭಯ  ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಸಚಿವ ಸಂಪುಟದಲ್ಲಿ ಜಾನುವಾರು ಸಂರಕ್ಷಣೆ ಮತ್ತು ಹತ್ಯೆ ಪ್ರತಿಬಂಧಕ ಸುಗ್ರೀವಾಜ್ಞೆಗೆ ರಾಜ್ಯಪಾಲರಿಗೆ ಶಿಫಾರಸ್ಸು ಮಾಡಿರುವುದನ್ನು ಖಂಡಿಸಿರುವ ಅವರು, ಮತೀಯ ಭಾವನೆಗಳನ್ನು ಕೆರಳಿಸಿ ರಾಜಕೀಯ ಲಾಭ ಪಡೆಯಬೇಕು ಮತ್ತು ಗೋರಕ್ಷಣೆಯ ಹೆಸರಲ್ಲಿ ಪುಂಡಾಟಿಕೆ ನಡೆಸುವವರಿಗೆ ರಕ್ಷಣೆ ಕೊಡಬೇಕು ಎಂಬ  ಎರಡು ದುರುದ್ದೇಶಗಳನ್ನು ಬಿಟ್ಟರೆ ಗೋಹತ್ಯೆ ನಿಷೇಧ ಮಸೂದೆಗೆ ಗೋವಿನ ಬಗ್ಗೆ ಭಕ್ತಿಯಾಗಲಿ, ಕಾಳಜಿಯಾಗಲಿ ಸರ್ಕಾರಕ್ಕೆ ಇಲ್ಲವೆಂದು ಗುಡುಗಿದ್ದಾರೆ.

ಗೋಹತ್ಯೆಗೆ ನಿಷೇಧವಂತೆ, ಗೋಮಾಂಸ ಮಾರಾಟ ಮತ್ತು ಸೇವನೆಗೆ ನಿರ್ಬಂಧ ಇಲ್ಲವಂತೆ. ಇಂತಹದ್ದೊಂದು ಎಡಬಿಡಂಗಿ ಕಾನೂನು ಮಾಡಲು ಇಷ್ಟೆಲ್ಲ ನಾಟಕ ಮಾಡಬೇಕೇ? ಮುಖ್ಯಮಂತ್ರಿ ಯಡಿಯೂರಪ್ಪ ಅವರೇ, ಮಾರಾಟ ಮಾಡಲು ಗೋಮಾಂಸವನ್ನು ಆಮದು ಮಾಡಿಕೊಳ್ತಿರಾ? ಎಂದು ಪ್ರಶ್ನಿಸಿದ್ದಾರೆ. ಗೋಹತ್ಯೆ ನಿಷೇಧ ಕಾಯ್ದೆ ಜಾರಿಯಿಂದಾಗಿ ರೈತರು ಮಾತ್ರ ಅಲ್ಲ,ಚರ್ಮದ ಉತ್ಪನ್ನಗಳ ತಯಾರಿಕೆಗೆ ಚರ್ಮ ದ ಕೊರತೆ ಎದುರಾಗಲಿದ್ದು,ಉತ್ಪಾದನೆ ಕುಂಠಿತಗೊಳ್ಳಲಿದೆ.ಇದರಿಂದ ನೇರವಾಗಿ ಮತ್ತು ಪರೋಕ್ಷವಾಗಿ ಈ ಕಸುಬನ್ನು ನಂಬಿ ಬದುಕುತ್ತಿರುವ ಸಾವಿರಾರು ಕುಟುಂಬಗಳು ಉದ್ಯೋಗ ಕಳೆದುಕೊಂಡು  ಬೀದಿಪಾಲಾಗಲಿವೆ. ಒಂದು ದೇಶ, ಒಂದು ಧರ್ಮ, ಒಂದು ಭಾಷೆ ಎಂದೆಲ್ಲ ಹೇಳುವವರು ಕನಿಷ್ಠ ದೇಶಕ್ಕೆಲ್ಲ ಅನ್ವಯವಾಗುವಂತಹ ಸಮಾನ ಗೋಹತ್ಯೆ ನಿಷೇಧ ಕಾನೂನು ತರಬಾರದೇಕೆ? ನಿಮಗೆ ತಾಕತ್ತಿದ್ದರೆ, ಬಿಜೆಪಿ ಆಡಳಿತ ಇರುವ ಗೋವಾ, ಈಶಾನ್ಯ ರಾಜ್ಯಗಳಲ್ಲಿ ಗೋಹತ್ಯೆ ನಿಷೇಧ ಕಾನೂನು ಜಾರಿಗೆ  ತನ್ನಿ. ಗೋಮಾಂಸ ರಫ್ತು ಮಾಡುವುದನ್ನು ಸಂ ಪೂರ್ಣ ನಿಷೇಧಿಸಿ ಎಂದು ಸರ್ಕಾರಕ್ಕೆ ಸವಾಲು ಹಾಕಿದ್ದಾರೆ.

ವಯಸ್ಸಾದ ಹಸುಗಳ ಪಾಲನೆಯ ಜವಾಬ್ದಾರಿಯನ್ನು ರಾಜ್ಯ ಸರ್ಕಾರವೇ ಹೊರಲಿದೆ ಎಂದು ಹೇಳಿದ್ದೀರಿ. ರಾಜ್ಯದಲ್ಲಿ ಎಷ್ಟು ಸರ್ಕಾರವೇ ನಡೆಸುತ್ತಿರುವ ಗೋಶಾಲೆಗಳಿವೆ? ಎಷ್ಟು ಹೊಸ ಗೋಶಾಲೆಗಳನ್ನು ತೆರೆಯಲಿದ್ದೀ ರಿ? ಇದಕ್ಕಾಗಿ ಎಷ್ಟು ಹಣ ಒದಗಿಸಿದ್ದೀರಿ? ಈ ವಿವರಗಳನ್ನು ಮೊದಲು ಬಹಿರಂಗಪಡಿಸಿ ಎಂದು  ಸಚಿವರಿಗೆ, ಸರ್ಕಾರವನ್ನು ಪ್ರಶ್ನಿಸಿದ್ದಾರೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.