ಹೊಸ ವರ್ಷಾಚರಣೆ ನಿಯಮ ಉಲ್ಲಂಘಿಸಿದ್ದಲ್ಲಿ ದಂಡ ಸೇರಿ ಕೇಸ್ ದಾಖಲು: ಕಮಲ್ ಪಂತ್ ಎಚ್ಚರಿಕೆ
ಚಾಲ್ತಿಯಲ್ಲಿರುವ ಕೋವಿಡ್ -19 ಪರಿಸ್ಥಿತಿ ಮತ್ತು ರೂಪಾಂತರಗೊಂಡಿರುವ ಹೊಸ ವೈರಸ್ ವ್ಯಾಪಕವಾಗಿ ಹರಡುತ್ತಿರುವುದನ್ನು ಗಮನಿಸಿ, ಮುಂಬರುವ ಹೊಸ ವರ್ಷದ ಸಂಭ್ರಮಾಚರಣೆಯಲ್ಲಿ ಕೆಲವು ನಿರ್ಬಂಧಗಳನ್ನು ವಿಧಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ತಿಳಿಸಿದ್ದಾರೆ.

ಬೆಂಗಳೂರು: ಚಾಲ್ತಿಯಲ್ಲಿರುವ ಕೋವಿಡ್ -19 ಪರಿಸ್ಥಿತಿ ಮತ್ತು ರೂಪಾಂತರಗೊಂಡಿರುವ ಹೊಸ ವೈರಸ್ ವ್ಯಾಪಕವಾಗಿ ಹರಡುತ್ತಿರುವುದನ್ನು ಗಮನಿಸಿ, ಮುಂಬರುವ ಹೊಸ ವರ್ಷದ ಸಂಭ್ರಮಾಚರಣೆಯಲ್ಲಿ ಕೆಲವು ನಿರ್ಬಂಧಗಳನ್ನು ವಿಧಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ತಿಳಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಆಯುಕ್ತರು, ಬೆಂಗಳೂರಿನಲ್ಲಿ ಡಿ. 31 ಸಂಜೆ 6 ರಿಂದ ಜ. 1 ಬೆಳಿಗ್ಗೆ 6 ರವರೆಗೆ ಸೆಕ್ಷನ್ 144 ಜಾರಿಯಲ್ಲಿರುತ್ತದೆ. ಮುಖ್ಯರಸ್ತೆ, ಪಾರ್ಕ್, ಪ್ಲೇಗ್ರೌಂಡ್ ಸೇರಿ ಯಾವುದೇ ಸಾರ್ವಜನಿಕ ಸ್ಥಳಗಳಲ್ಲಿ ಹೊಸ ವರ್ಷಾಚರಣೆಗೆಂದು ಯಾವುದೇ ರೀತಿಯ ಗುಂಪುಗೂಡುವಿಕೆಯನ್ನು ನಿಷೇಧಿಸಲಾಗಿದೆ. ಆದರೆ, ಮನೆಗಳಲ್ಲಿ, ಪ್ರೈವೇಟ್ ಕ್ಲಬ್, ರೆಸಿಡೆನ್ಶಿಯಲ್ ಕಾಂಪ್ಲೆಕ್ಸ್ ಗಳಲ್ಲಿ ಸದಸ್ಯರು ಮಾತ್ರ ಆಚರಿಸಿಕೊಳ್ಳಬಹುದು ಎಂದು ಅವರು ಸೂಚಿಸಿದ್ದಾರೆ.
'ಚಾಲ್ತಿಯಲ್ಲಿರುವ ಕೋವಿಡ್-19 ಪರಿಸ್ಥಿತಿ ಮತ್ತು ರೂಪಾಂತರಗೊಂಡಿರುವ ಹೊಸ ವೈರಸ್ ವ್ಯಾಪಕವಾಗಿ ಹರಡುತ್ತಿರುವುದನ್ನು ಗಮನಿಸಿ, ಮುಂಬರುವ ಹೊಸ ವರ್ಷದ ಸಂಭ್ರಮಾಚರಣೆಯಲ್ಲಿ ಕೆಲವು ನಿರ್ಬಂಧಗಳನ್ನು ವಿಧಿಸಲಾಗಿದೆ. ಆದೇಶವನ್ನು ಉಲ್ಲಂಘಿಸುವವರಿಗೆ ದಂಡ ವಿಧಿಸುವುದಲ್ಲದೆ, ಐಪಿಸಿ ಸೆಕ್ಷನ್ 188, ಹಾಗೂ ಎನ್ ಡಿಎಂಎ ಕಾಯಿದೆಯಡಿ ಪ್ರಕರಣ ದಾಖಲಿಸಲಾಗುವುದು. ಈ ಮೂಲಕ ಸಾರ್ವಜನಿಕರಲ್ಲಿ ಮಾರ್ಗಸೂಚಿಯನ್ನು ಪಾಲಿಸಬೇಕಾಗಿ ವಿನಂತಿ. ಎಂ.ಜಿ ರಸ್ತೆ, ಬ್ರಿಗೇಡ್ ರಸ್ತೆ, ಚರ್ಚ್ ಸ್ಟ್ರೀಟ್, ಕೋರಮಂಗಲ, ಇಂದಿರಾ ನಗರದಲ್ಲಿ 'ಸಂಚಾರ ನಿಷೇಧ' ವಲಯಗಳನ್ನು ಮಾಡಲಾಗುತ್ತದೆ. ಮುಂಚಿತವಾಗಿ ಬುಕ್ ಮಾಡಿರುವ ಸದಸ್ಯರಿಗೆ ಮಾತ್ರ ಕ್ಲಬ್ , ರೆಸ್ಟಾರೆಂಟ್ ಗಳಿಗೆ ಪ್ರವೇಶವಿರುತ್ತದೆ. ಮುಂಚಿತವಾಗಿ ಬುಕ್ ಮಾಡಿರುವ ಸದಸ್ಯರಿಗೆ ಮಾತ್ರ ಕ್ಲಬ್, ರೆಸ್ಟಾರೆಂಟ್ ಗಳಿಗೆ ಪ್ರವೇಶವಿರುತ್ತದೆ. ಅನವಶ್ಯಕ ಸಂಚಾರ, ಬೈಕ್ ಸುತ್ತಾಟ, ವ್ಹಿಲಿಂಗ್, ನಿಷೇಧಿಸಲಾಗಿದೆ. ನಗರದ ಎಲ್ಲಾ ಫ್ಲೈ ಓವರ್ ಗಳನ್ನು ಮುಚ್ಚಲಾಗಿರುತ್ತದೆ. ಹಾಗೂ ಕೆಲವೆಡೆ ಸಂಚಾರ ನಿಯಂತ್ರಣ ಜಾರಿಯಲ್ಲಿರುತ್ತದೆ ಎಂದು ಟ್ವೀಟ್ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


