ಜಮೀನು ವಿವಾದ: ಕೋಳಿ ಅಂಗಡಿ ಮಾಲೀಕನ ಬರ್ಬರ ಹತ್ಯೆ
ಕೋಳಿ ಅಂಗಡಿ ನಡೆಸುತ್ತಿದ್ದ ಯುವಕನೊಬ್ಬನನ್ನು ಚಾಕುವಿನಿಂದ ಇರಿದು ಭೀಕರವಾಗಿ ಕೊಲೆ ಮಾಡಿರುವ ದುರ್ಘಟನೆ ಕಾಡುಗೊಂಡನ ಹಳ್ಳಿಯಲ್ಲಿ ಕಳೆದ ರಾತ್ರಿ ನಡೆದಿದೆ.

ಬೆಂಗಳೂರು: ಕೋಳಿ ಅಂಗಡಿ ನಡೆಸುತ್ತಿದ್ದ ಯುವಕನೊಬ್ಬನನ್ನು ಚಾಕುವಿನಿಂದ ಇರಿದು ಭೀಕರವಾಗಿ ಕೊಲೆ ಮಾಡಿರುವ ದುರ್ಘಟನೆ ಕಾಡುಗೊಂಡನ ಹಳ್ಳಿಯಲ್ಲಿ ಕಳೆದ ರಾತ್ರಿ ನಡೆದಿದೆ.
ಕಾಡುಗೊಂಡನಹಳ್ಳಿಯ ಅನ್ವರ್ ಪಾಳ್ಯದ ಸುಲ್ತಾನ್ ಪಾಷ(27) ಕೊಲೆಯಾದವರು. ರಾತ್ರಿ 8ರ ವೇಳೆ ಮನೆಯ ಹತ್ತಿರದ ಅಂಗಡಿ ಬಳಿ ನಿಂತಿದ್ದ ಸುಲ್ತಾನ್ ಅವರನ್ನು ಮಾತನಾಡುವ ನೆಪದಲ್ಲಿ ಇಬ್ಬರು ಕರೆದುಕೊಂಡು ಸ್ವಲ್ಪ ದೂರ ಹೋಗಿದ್ದಾರೆ.
ಅಲ್ಲಿ ಯಾವುದೋ ವಿಷಯವನ್ನು ಪ್ರಸ್ತಾಪಿಸಿ ಜಗಳ ಮಾಡಿ ಸುಲ್ತಾನ್ ಕುತ್ತಿಗೆ ಬಳಿ ಚಾಕುವಿನಿಂದ ಇರಿದು ಪರಾರಿಯಾಗಿದ್ದಾರೆ. ಗಂಭೀರವಾಗಿ ಗಾಯಗೊಂಡ ಅವರನ್ನು ಸ್ಥಳೀಯರು ಕೂಡಲೇ ಆಸ್ಪತ್ರೆಗೆ ಕರೆದೊಯ್ದರಾದರೂ ಮಾರ್ಗ ಮಧ್ಯದಲ್ಲಿ ಮೃತಪಟ್ಟಿದ್ದಾರೆ. ಸುಲ್ತಾನ್ ಹಾಗೂ ಇಬ್ಬರ ನಡುವೆ ನಿವೇಶನ ಹಾಗೂ ಆಸ್ತಿಯ ವಿಚಾರವಾಗಿ ವಿವಾದವಿದ್ದು ಅದೇ ದ್ವೇಷದಿಂದ ಕೊಲೆ ನಡೆದಿರಬಹುದು ಎಂದು ಶಂಕಿಸಲಾಗಿದೆ.
ಸುದ್ದಿ ತಿಳಿದ ತಕ್ಷಣವೇ ಸ್ಥಳಕ್ಕೆ ಧಾವಿಸಿದ ಕಾಡುಗೊಂಡನಹಳ್ಳಿ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿ ಕೊಲೆ ಗೈದ ದುಷ್ಕರ್ಮಿಗಳಿಗಾಗಿ ತೀವ್ರ ಶೋಧ ನಡೆಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


