ಎರಡು ದಿನಗಳ ರಾಜ್ಯ ಭೇಟಿಗಾಗಿ ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಹುಬ್ಬಳ್ಳಿಗೆ ಆಗಮನ
ಎರಡು ದಿನಗಳ ರಾಜ್ಯ ಭೇಟಿಗಾಗಿ ಉಪರಾಷ್ಟ್ರಪತಿ ಎಂ. ವೆಂಕಯ್ಯನಾಯ್ಡು ಇಂದು ನಗರಕ್ಕೆ ಆಗಮಿಸಿದ್ದಾರೆ.

ಹುಬ್ಬಳ್ಳಿ: ಎರಡು ದಿನಗಳ ರಾಜ್ಯ ಭೇಟಿಗಾಗಿ ಉಪರಾಷ್ಟ್ರಪತಿ ಎಂ. ವೆಂಕಯ್ಯನಾಯ್ಡು ಇಂದು ನಗರಕ್ಕೆ ಆಗಮಿಸಿದ್ದಾರೆ.
ಹುಬ್ಬಳ್ಳಿ ನಗರದಲ್ಲಿ ಫೆ.2 ರಂದು ನಡೆಯಲಿರುವ ದೇಶಪಾಂಡೆ ಫೌಂಡೇಶನ್ ಕೌಶಲ್ಯ ಅಭಿವೃದ್ಧಿ ಕೇಂದ್ರ ಹಾಗೂ ಹೆಚ್ ಡಿ ಬಿ ಆರ್ ಟಿ ಎಸ್ ಯೋಜನೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಅವರು ಭಾರತೀಯ ವಾಯು ಸೇನೆಯ ವಿಶೇಷ ವಿಮಾನದ ಮೂಲಕ ಇಂದು ಸಂಜೆ 6.50 ಕ್ಕೆ ಹುಬ್ಬಳ್ಳಿಗೆ ಆಗಮಿಸಿದರು.
ವಿಮಾನ ನಿಲ್ದಾಣದಲ್ಲಿ ಕೇಂದ್ರ ಸಂಸದೀಯ ವ್ಯವಹಾರಗಳು, ಕಲ್ಲಿದ್ದಲು ಹಾಗೂ ಗಣಿ ಸಚಿವರಾದ ಪ್ರಲ್ಹಾದ ಜೋಶಿ, ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್, ಜಿಪಂ ಅಧ್ಯಕ್ಷೆ ವಿಜಯಲಕ್ಷ್ಮಿ ಕೆಂಪೇಗೌಡ ಪಾಟೀಲ,ಶಾಸಕ ಅರವಿಂದ ಬೆಲ್ಲದ, ಬೆಳಗಾವಿ ಪ್ರಾದೇಶಿಕ ಆಯುಕ್ತರಾದ ಆಮ್ಲನ್ ಆದಿತ್ಯ ಬಿಸ್ವಾಸ್, ಜಿಲ್ಲಾಧಿಕಾರಿ ದೀಪಾ ಚೋಳನ್, ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತ ಆರ್. ದಿಲೀಪ್ ಮತ್ತಿತರ ಗಣ್ಯರು ಪುಸ್ತಕಗಳು, ಶಾಲು, ಹೂ ಮಾಲೆ ನೀಡಿ ಬರಮಾಡಿಕೊಂಡರು. ಉಪರಾಷ್ಟ್ರಪತಿಗಳು ಸರ್ಕ್ಯೂಟ್ ಹೌಸ್ ನಲ್ಲಿ ವಾಸ್ತವ್ಯ ಹೂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


