ರಾಜ್ಯ

ಕೊರೋನಾ ಸೋಂಕು: ತಪಾಸಣೆಗೆ ಚಾಮರಾಜನಗರದಲ್ಲಿ ಎರಡು ಹೆಚ್ಚುವರಿ ಚೆಕ್ ಪೋಸ್ಟ್ 

ಕೇರಳದಲ್ಲಿ ಕೊರೋನಾ ವೈರಸ್ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅಲ್ಲಿಂದ ಆಗಮಿಸುವ ಪ್ರಯಾಣಿಕರ ತಪಾಸಣೆ ನಡೆಸಲು ರಾಜ್ಯದ ಗಡಿ ಭಾಗದ ಚಾಮರಾಜನಗರದಲ್ಲಿ ಎರಡು ಹೆಚ್ಚುವರಿ ಚೆಕ್ ಪೋಸ್ಟ್ ಗಳನ್ನು ತೆರೆಯಲಾಗಿದೆ

ಕೊರೋನಾ ಸೋಂಕು: ತಪಾಸಣೆಗೆ ಚಾಮರಾಜನಗರದಲ್ಲಿ ಎರಡು ಹೆಚ್ಚುವರಿ ಚೆಕ್ ಪೋಸ್ಟ್ 
ಸಾಂದರ್ಭಿಕ ಚಿತ್ರ
Published On :

ಚಾಮರಾಜನಗರ: ಕೇರಳದಲ್ಲಿ ಕೊರೋನಾ ವೈರಸ್ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅಲ್ಲಿಂದ ಆಗಮಿಸುವ ಪ್ರಯಾಣಿಕರ ತಪಾಸಣೆ ನಡೆಸಲು ರಾಜ್ಯದ ಗಡಿ ಭಾಗದ ಚಾಮರಾಜನಗರದಲ್ಲಿ  ಎರಡು ಹೆಚ್ಚುವರಿ ಚೆಕ್ ಪೋಸ್ಟ್ ಗಳನ್ನು ತೆರೆಯಲಾಗಿದೆ

 ಈ ಚೆಕ್ ಪೋಸ್ಟ್ ನಲ್ಲಿ ವೈದ್ಯಕೀಯ ತಂಡ ನಿರಂತರವಾಗಿ ಕಾರ್ಯನಿರ್ವಹಿಸಲಿದೆ. ಜಿಲ್ಲೆಯಲ್ಲಿ ಯಾವುದೇ ಶಂಕಿತ ಪ್ರಕರಣಗಳು ವರದಿಯಾಗಿಲ್ಲ. ಆದರೂ ಅರೋಗ್ಯಾಧಿಕಾರಿಗಳು ಮುನ್ನೆಚ್ಚರಿಕಾ ಕ್ರಮವಾಗಿ ಜನರ ತಪಾಸಣೆಗೆ ಮುಂದಾಗಿದೆ

ಭಾನುವಾರದಿಂದ ಪ್ರಯಾಣಿಕರ ತಪಾಸಣೆ ನಡೆಸಲಾಗುತ್ತಿದೆ. ಜನರು ಆತಂಕಪಡುವ ಅಗತ್ಯವಿಲ್ಲ. ಸೋಂಕು ಹರಡದಂತೆ ತಡೆಯಲು ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಎಂ.ಸಿ.ರವಿ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.