ಮೈಸೂರು: ಜಮೀನಿನಲ್ಲಿ ಪತ್ತೆಯಾದ ಚಿರತೆ ಮರಿ ರಕ್ಷಣೆ
ಹುಣಸೂರು ತಾಲೂಕಿನಲ್ಲಿ ರಾಮಪಟ್ಟಣ ಗ್ರಾಮದ ಮೂಕನಹಳ್ಳಿ ರವಿಪ್ರಸನ್ನರಿಗೆ ಸೇರಿದ ಜೋಳದ ಹೊಲದಲ್ಲಿ ರೈತರು ಕೆಲಸ ಮಾಡುತ್ತಿರುವಾಗ ಚಿರತೆ ಮರಿಯೊಂದು ಪ್ರತ್ಯಕ್ಷವಾಗಿತ್ತು.

ಮೈಸೂರು: ಹುಣಸೂರು ತಾಲೂಕಿನಲ್ಲಿ ರಾಮಪಟ್ಟಣ ಗ್ರಾಮದ ಮೂಕನಹಳ್ಳಿ ರವಿಪ್ರಸನ್ನರಿಗೆ ಸೇರಿದ ಜೋಳದ ಹೊಲದಲ್ಲಿ ರೈತರು ಕೆಲಸ ಮಾಡುತ್ತಿರುವಾಗ ಚಿರತೆ ಮರಿಯೊಂದು ಪ್ರತ್ಯಕ್ಷವಾಗಿತ್ತು.
ಚಿರತೆ ಮರಿಯನ್ನು ಕಂಡು ಭಯಭೀತರಾದ ರೈತರು ಗ್ರಾಮಸ್ಥರ ಸಹಾಯದಿಂದ ಚಿರತೆ ಮರಿಯನ್ನು ಹಗ್ಗದಿಂದ ಕಟ್ಟಿಹಾಕಿ ನಂತರ ಅರಣ್ಯಾಧಿಕಾರಿಗಳಿಗೆ ವಿಷಯ ಮುಟ್ಟಿಸಿದ್ದಾರೆ.
ನಂತರ ಸ್ಥಳಕ್ಕೆ ಬಂದ ಆರ್. ಎಫ್. ಓ ಸಂದಿಪ್, ಡಿ. ಆರ್. ಎಫ್. ಓ ರಿಜ್ವಾನ್ ಅಹಮ್ಮದ್, ಸೇರಿದಂತೆ ಅರಣ್ಯ ಇಲಾಖೆ ಸಿಬ್ಬಂದಿ ಮೂರು ತಿಂಗಳ ಚಿರತೆ ಮರಿಯನ್ನು ವಶಕ್ಕೆ ಪಡೆದು ಸೂಕ್ತ ಚಿಕಿತ್ಸೆ ನೀಡಿದರು.
ಗ್ರಾಮಸ್ಥರು ಇನ್ನೂ ಚಿರತೆಗಳು ಈ ಭಾಗದಲ್ಲಿ ಇರುವುದಾಗಿ ತಿಳಿಸಿದ್ದರಿಂದ ಮುನ್ನೆಚ್ಚರಿಕೆಯಾಗಿ ಅರಣ್ಯಾಧಿಕಾರಿಗಳು ಜಮೀನಿನಲ್ಲಿ ಬೋನು ಇರಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


