ರಾಜ್ಯ

ಮದುವೆ ಒಲ್ಲೆ ಎಂದ ಯುವತಿ ಕಿಡ್ನಾಪ್ ಮಾಡಿ ಕಾರಲ್ಲೇ ತಾಳಿ ಕಟ್ಟಿದ ಯುವಕ!

ಮದುವೆಯಾಗಲು ನಿರಾಕರಿಸಿದ ಯುವತಿಯನ್ನು ಅಪಹರಿಸಿದ ಯುವಕನೊಬ್ಬ ಕಾರಿನಲ್ಲಿಯೇ ತಾಳಿ ಕಟ್ಟಿರುವ ಘಟನೆ ನಡೆದಿದೆ. ಮನು ಎಂಬ ಈ ಯುವಕ ಈ ಕೃತ್ಯವೆಸಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಈ ಸುದ್ದಿ ಸಖತ್ ವೈರಲ್ ಆಗಿದೆ.

ಮದುವೆ ಒಲ್ಲೆ ಎಂದ ಯುವತಿ ಕಿಡ್ನಾಪ್ ಮಾಡಿ ಕಾರಲ್ಲೇ ತಾಳಿ ಕಟ್ಟಿದ ಯುವಕ!
ಸಾಂದರ್ಭಿಕ ಚಿತ್ರ
Published On :

ಹಾಸನ: ಮದುವೆಯಾಗಲು ನಿರಾಕರಿಸಿದ ಯುವತಿಯನ್ನು ಅಪಹರಿಸಿದ ಯುವಕನೊಬ್ಬ ಕಾರಿನಲ್ಲಿಯೇ ತಾಳಿ ಕಟ್ಟಿರುವ ಘಟನೆ ನಡೆದಿದೆ. ಮನು ಎಂಬ ಈ ಯುವಕ ಈ ಕೃತ್ಯವೆಸಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಈ  ಸುದ್ದಿ ಸಖತ್ ವೈರಲ್ ಆಗಿದೆ.

ಅರಸೀಕೆರ ತಾಲೂಕ್ ಕುಡುಕುಂದಿ ಗ್ರಾಮದ ಮನು ತನ್ನ ಅತ್ತೆ ಮಗಳನ್ನು ಇಷ್ಟಪಡುತ್ತಿದ್ದ ಎನ್ನಲಾಗಿದೆ. ಆದರೆ, ಯುವತಿ ಮದುವೆಯಾಗಲು ನಿರಾಕರಿಸಿದ್ದಳು. ಇದರಿಂದಾಗಿ ಚಂಚಲಗೊಂಡ ಮನು, ತನ್ನ ಸ್ನೇಹಿತರ ನೆರವಿಂದ  ಬಲವಂತದಿಂದ ಯುವತಿಯನ್ನು ಅಪಹರಿಸಿದ್ದು, ಕಾರಿನಲ್ಲಿಯೇ ತಾಳಿ ಕಟ್ಟಿರುವುದು ತಿಳಿದುಬಂದಿದೆ.

ಘಟನೆ ನಂತರ ಆರೋಪಿ ಹಾಗೂ ಯುವತಿ ಎಲ್ಲಿದ್ದಾರೆ ಎಂಬುದು ತಿಳಿದುಬಂದಿಲ್ಲ. ಯುವತಿಯ ಪೋಷಕರು ದುದ್ದು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ನಾಪತ್ತೆ ಎಂದು ದೂರು ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.