ರಾಜ್ಯ

ಮಂಗಳೂರು: ದುಷ್ಕರ್ಮಿಗಳಿಂದ ಬಿಜೆಪಿ ಕಾರ್ಯಕರ್ತನ ಮೇಲೆ ಹಲ್ಲೆ

ರಾಜಕೀಯ ವೈಷಮ್ಯದ ಪ್ರಕರಣವೊಂದರಲ್ಲಿ, 28 ವರ್ಷದ ಬಿಜೆಪಿ ಕಾರ್ಯಕರ್ತನ ಮೇಲೆ ಮುಂಚೂರಿನಲ್ಲಿ ದುಷ್ಕರ್ಮಿಗಳ ಗುಂಪೊಂದು ಮಾರಣಾಂತಿಕ ಹಲ್ಲೆ ನಡೆಸಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.

ಮಂಗಳೂರು: ದುಷ್ಕರ್ಮಿಗಳಿಂದ ಬಿಜೆಪಿ ಕಾರ್ಯಕರ್ತನ ಮೇಲೆ ಹಲ್ಲೆ
ಸಾಂದರ್ಭಿಕ ಚಿತ್ರ
Published On :

ಮಂಗಳೂರು: ರಾಜಕೀಯ ವೈಷಮ್ಯದ ಪ್ರಕರಣವೊಂದರಲ್ಲಿ, 28 ವರ್ಷದ ಬಿಜೆಪಿ ಕಾರ್ಯಕರ್ತನ ಮೇಲೆ ಮುಂಚೂರಿನಲ್ಲಿ ದುಷ್ಕರ್ಮಿಗಳ ಗುಂಪೊಂದು ಮಾರಣಾಂತಿಕ ಹಲ್ಲೆ ನಡೆಸಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.
  
ಗಾಯಗೊಂಡ ಬಿಜೆಪಿ ಕಾರ್ಯಕರ್ತನನ್ನು ಯಶೋಧರ್ ಎಂದು ಗುರುತಿಸಲಾಗಿದ್ದು, ಇಲ್ಲಿನ ಪದ್ಮಾವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ದಿವಾಕರ್, ದಿನೇಶ್ ಶೆಟ್ಟಿ, ಅಶ್ವಿತ್ ಕುಲಾಲ್ ಮತ್ತು ಯಶೋಧರ ಅಗರಮೇಲು ಎಂಬ ನಾಲ್ಕು ಜನರು ಯಶೋಧರ್ ಮೇಲೆ ಹಲ್ಲೆ ನಡೆಸಿ ಕೊಲೆ ಬೆದರಿಕೆ ಹಾಕಿದ್ದಾರೆ. ಈ ಗ್ಯಾಂಗ್ ಕೆಲವು ಸಮಯದಿಂದ ಯಶೋಧರ್ ಅವರ ಚಲನವಲನಗಳ ಮೇಲೆ ನಿಗಾ ಇಟ್ಟಿತ್ತು ಎನ್ನಲಾಗಿದೆ. 
  
ಈ ಸಂಬಂಧ ಸೂರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪರಾರಿಯಾಗಿರುವ ಆರೋಪಿಗಳಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.