ರಾಜ್ಯ

ಹಾವೇರಿಯಲ್ಲಿ ಮುಂದಿನ ಸಾಹಿತ್ಯ ಸಮ್ಮೇಳನ:ಕಸಾಪ ಅಧ್ಯಕ್ಷ ಮನು ಬಳಿಗಾರ್ ಘೋಷಣೆ

ಮುಂಬರುವ 86ನೇ ಅಖಿಲ‌ ಭಾರತ ಸಾಹಿತ್ಯ ಸಮ್ಮೇಳನದ ಪಟ್ಟ ಹಾವೇರಿ ಪಾಲಾಗಿದೆ.ಸಮ್ಮೇಳನದ ಹೊಣೆಗಾರಿಕೆ ಹೊತ್ತುಕೊಳ್ಳಲು ಕಾರ್ಯಕಾರಿ ಸಮಿತಿ ಸಭೆಯಲ್ಲಿ ಹಾವೇರಿ, ಚಿಕ್ಕಬಳ್ಳಾಪುರ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದರೆಯ ಮಧ್ಯೆ ತೀವ್ರ ಪೈಪೋಟಿ ಏರ್ಪಟ್ಟಿತ್ತು.

ಹಾವೇರಿಯಲ್ಲಿ ಮುಂದಿನ ಸಾಹಿತ್ಯ ಸಮ್ಮೇಳನ:ಕಸಾಪ ಅಧ್ಯಕ್ಷ ಮನು ಬಳಿಗಾರ್ ಘೋಷಣೆ
ಸಾಂದರ್ಭಿಕ ಚಿತ್ರ
Published On :

ಕಲಬುರಗಿ: ಮುಂಬರುವ 86ನೇ ಅಖಿಲ‌ ಭಾರತ ಸಾಹಿತ್ಯ ಸಮ್ಮೇಳನದ ಪಟ್ಟ ಹಾವೇರಿ ಪಾಲಾಗಿದೆ.ಸಮ್ಮೇಳನದ ಹೊಣೆಗಾರಿಕೆ ಹೊತ್ತುಕೊಳ್ಳಲು ಕಾರ್ಯಕಾರಿ ಸಮಿತಿ ಸಭೆಯಲ್ಲಿ ಹಾವೇರಿ,  ಚಿಕ್ಕಬಳ್ಳಾಪುರ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದರೆಯ ಮಧ್ಯೆ ತೀವ್ರ  ಪೈಪೋಟಿ ಏರ್ಪಟ್ಟಿತ್ತು.

ಕಲಬುರಗಿ ನಗರಾಭಿವೃದ್ಧಿ ಕಚೇರಿಯಲ್ಲಿ ಕನ್ನಡಸಾಹಿತ್ಯ ಪರಿಷತ್ತಿನ ಕೇಂದ್ರ ಸಮಿತಿ ಅಧ್ಯಕ್ಷ ನಾಡೋಜ ಡಾ. ಮನು ಬಳಿಗಾರ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಅಂತಿಮ ನಿರ್ಧಾರ ಕೈಗೊಳ್ಳುವ ಮೂಲ ಹಾವೇರಿ ಜಿಲ್ಲೆಗೆ ಸಮ್ಮೇಳನದ ‌ಪಟ್ಟ ಒಲಿದು ಬಂದಿದೆ. ಮುಂಬರುವ 86ನೇ  ಅಕ್ಷರ ಜಾತ್ರೆಗೆ ಹಾವೇರಿ ಜಿಲ್ಲೆ ಸಾಕ್ಷಿಯಾಗಲಿದೆ. 

86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಹಾವೇರಿಯಲು ನಡೆಸಲು ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಈ ವರ್ಷದ ಕೊನೆಯಲ್ಲಿ ಅಥವಾ ಮುಂದಿನ ವರ್ಷ ನಡೆಸುವುದರ ಬಗ್ಗೆ ಮುಂದಿನ ದಿನಗಳಲ್ಲಿ ನಿರ್ಣಯ ಕೈಗೊಳ್ಳಲಾಗುವುದು ಎಂದು ಮನು ಬಳಿಗಾರ್ ಮಾಹಿತಿ ನೀಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.