ರಾಜ್ಯ

ಕೋರೋನಾ ವೈರಸ್: ಆತಂಕ‌ ಬೇಡ, ಜಾಗ್ರತೆ ಇರಲಿ; ಸಚಿವ ಕೋಟ ಶ್ರೀನಿವಾಸ ಪೂಜಾರಿ 

ಚೀನಾದಲ್ಲಿ ಹರಡಿರುವ ಮಾರಕ ಕೊರೋನಾ ವೈರಸ್ ರೋಗ ಹಬ್ಬಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಜನ ಯಾವುದೇ ಭಯ, ಆತಂಕಕ್ಕೊಳಗಾಗುವ ಅಗತ್ಯವಿ ಲ್ಲ. ಆದರೆ, ಜಿಲ್ಲಾಡಳಿತ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.

ಕೋರೋನಾ ವೈರಸ್: ಆತಂಕ‌ ಬೇಡ, ಜಾಗ್ರತೆ ಇರಲಿ; ಸಚಿವ ಕೋಟ ಶ್ರೀನಿವಾಸ ಪೂಜಾರಿ 
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ತುರ್ತು ಸಭೆ
Published On :

ಮಂಗಳೂರು: ಚೀನಾದಲ್ಲಿ ಹರಡಿರುವ ಮಾರಕ ಕೊರೋನಾ ವೈರಸ್ ರೋಗ ಹಬ್ಬಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಜನ ಯಾವುದೇ ಭಯ, ಆತಂಕಕ್ಕೊಳಗಾಗುವ ಅಗತ್ಯವಿ ಲ್ಲ. ಆದರೆ, ಜಿಲ್ಲಾಡಳಿತ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.

ಬುಧವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಈ ಸಂಬಂಧ ತುರ್ತು ಸಭೆ ನಡೆಸಿ, ರಾಜ್ಯದಲ್ಲಿ ಈ ರೋಗದಿಂದ ಬಾಧಿತರಾದ ಯಾವುದೇ ಮಾಹಿತಿ ಇದುವರೆಗೆ ಲಭ್ಯವಾಗಿಲ್ಲ. ಆದರೂ, ದ.ಕ. ಜಿಲ್ಲೆಯ ಪಕ್ಕದ ಕೇರಳದಲ್ಲಿ ಮಾರಣಾಂತಕ ಕೊರೋನಾ ವೈರಾಣು ಕಂಡು ಬಂದಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿಯೂ ಎಲ್ಲ ರೀತಿಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲಾಗಿದೆ ಎಂದರು.

ಸಾರ್ವಜನಿಕರು ಯಾವುದೇ ಸಂಶಯ,ಮಾಹಿತಿ‌ ಹಾಗೂ ನೆರವಿಗೆ ಆರೋಗ್ಯ ಇಲಾಖೆಯ ಸಹಾಯವಾಣಿ 104 ಕ್ಕೆ ಕರೆ ಮಾಡಬಹುದಾಗಿದ್ದು, ಜಿಲ್ಲಾಡಳಿತ ಪರಿಸ್ಥಿತಿ ಎದುರಿಸಲು ಸಂಪೂರ್ಣ ಸನ್ನದ್ಧವಾಗಿದೆ ಎಂದು ತಿಳಿಸಿದರು.

ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಮಾತನಾಡಿ, ಜಿಲ್ಲೆಗೆ ಪ್ರಮುಖ ಪ್ರವೇಶ ಸ್ಥಳವಾಗಿರುವ ವಿಮಾನ ನಿಲ್ದಾಣ, ರೈಲು ನಿಲ್ದಾಣಗಳಲ್ಲಿ ವಿಶೇಷವಾಗಿ ಅಂತಾರಾಷ್ಟ್ರೀಯ ಪ್ರಯಾಣಿಕರ ಆರೋಗ್ಯ ತಪಾಸಣೆಗೆ ವ್ಯವಸ್ಥೆ ಮಾಡಲಾಗಿದೆ. ಚೀನಾದಿಂದ ಮಂಗಳೂರಿಗೆ ನೇರ ವಿಮಾನ ಇಲ್ಲದೇ ಇರುವುದರಿಂದ ಕೊರೋನಾ ವೈರಸ್ ಹರಡುವ ಬಗ್ಗೆ ಆತಂಕವಿಲ್ಲ. ಆದಾಗ್ಯೂ ವಿಶೇಷವಾಗಿ ಕೆಲ ದಿನಗಳ ಹಿಂದೆ ಚೀನಾದಿಂದ ಜಿಲ್ಲೆಗೆ ಬಂದ ಇಬ್ಬರ ಆರೋಗ್ಯ ತಪಾಸಣೆ ಮಾಡಲಾಗಿದ್ದು, ಯಾವುದೇ ರೋಗ ಲಕ್ಷಣ ಅವರಲ್ಲಿ ಕಂಡುಬಂದಿರುವುದಿಲ್ಲ ಎಂದು ಅವರು ಹೇಳಿದರು.

ಫೆ. 4 ರಂದು ನವ ಮಂಗಳೂರು ಬಂದರಿಗೆ ವಿದೇಶಿ ಪ್ರವಾಸಿಗರ ಹಡಗು ಬಂದಿದ್ದು, ಇದರಲ್ಲಿ ಬಂದಿದ್ದ ಚೀನಾ ದೇಶದ ಮೂವರು ನಾಗರೀಕರಿಗೆ ಹಡಗಿನಿಂದ ಹೊರಗೆ ಬರಲು ಅವಕಾಶ ನೀಡಿಲ್ಲ ಎಂದು ಸಭೆಗೆ ಎನ್.ಎಂ.ಪಿ.ಟಿ. ಅಧಿಕಾರಿಗಳು ತಿಳಿಸಿದರು.

ಜಿಲ್ಲಾ ಆರೋಗ್ಯಾಧಿಕಾರಿ ಡಾ. ರಾಮಕೃಷ್ಣ ರಾವ್ ಮಾತನಾಡಿ, ವೆನ್ ಲಾಕ್ ಆಸ್ಪತ್ರೆಯಲ್ಲಿ ಕೊರೋನಾ ವೈರಸ್ ಚಿಕಿತ್ಸೆಗಾಗಿ 10 ವಿಶೇಷ ಹಾಸಿಗೆಯನ್ನು ಸಿದ್ಧ‌ತೆಯಲ್ಲಿಡಲಾಗಿದೆ. ದಿನದ 24 ಗಂಟೆಯೂ ಇದರ ನಿರ್ವಹಣೆಗಾಗಿ ವೈದ್ಯರು, ಸಿಬ್ಬಂದಿಗಳಿಗೆ ತರಬೇತಿ ನೀಡಲಾಗಿದೆ ಎಂದರು.

ವಿಶ್ವ ಆರೋಗ್ಯ ಸಂಸ್ಥೆಯ ಡಾ. ಸತೀಶ್ಚಂದ್ರ ಮಾತನಾಡಿ, ಕೈಗಳನ್ನು ಸ್ವಚ್ಛವಾಗಿಟ್ಟುಕೊಳ್ಳುವುದು ಹಾಗೂ ಸೀನುವಾಗ ಕರವಸ್ತ್ರ ಹಿಡಿದಿಕೊಳ್ಳುವುದು ಈ ರೋಗ ನಿಯಂತ್ರಣದಲ್ಲಿ ಪಮುಖ್ಯವಾಗಿದೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.