ದಾವಣಗೆರೆ: ಇಬ್ಬರು ಹೆಂಡಿರ ಗಂಡ, 3 ಮಕ್ಕಳ ತಂದೆ ಲೈವ್ ಟಿಕ್‌ಟಾಕ್ ಮಾಡಿ ಆತ್ಮಹತ್ಯೆಗೆ ಶರಣು!
ವ್ಯಕ್ತಿಯೋರ್ವ ಲೈವ್ ಟಿಕ್‌ಟಾಕ್ ನಡೆಸಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಾವಣಗೆರೆಯ ಮಾಗನಹಳ್ಳಿ ಎಂಬಲ್ಲಿ ನಡೆದಿದೆ.

ದಾವಣಗೆರೆ: ವ್ಯಕ್ತಿಯೋರ್ವ ಲೈವ್ ಟಿಕ್‌ಟಾಕ್ ನಡೆಸಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಾವಣಗೆರೆಯ ಮಾಗನಹಳ್ಳಿ ಎಂಬಲ್ಲಿ ನಡೆದಿದೆ.
ಮಾಗನಹಳ್ಳಿ ನಿವಾಸಿ ನಾಗರಾಜ್ ಆತ್ಮಹತ್ಯೆ ಮಾಡಿಕೊಂಡವರು. ಮೂರು ಮಕ್ಕಳ ತಂದೆಯಾಗಿರುವ ಇವರು ನಿನ್ನೆ ರಾತ್ರಿ ಕೌಟುಂಬಿಕ ಕಲಹದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ
ದಾವಣಗೆರೆ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿ ಕುಟುಂಬಸ್ಥರಿಂದ ಮಾಹಿತಿ ಪಡೆದು ಮೃತದೇಹದ ಮರಣೋತ್ತರ ಪರೀಕ್ಷೆಗಾಗಿ ಶವವನ್ನು ಆಸ್ಪತ್ರೆಗೆ ರವಾನಿಸಿದ್ದಾರೆ.
ನಾಗರಾಜ್ ಅವರು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ದೃಶ್ಯವನ್ನು ಲೈವ್ ಮಾಡಿದ್ದು, ಅದನ್ನು ನೋಡಿದ ಗೆಳೆಯರು ಮನೆಯವರಿಗೆ ತಿಳಿಸಿದ್ದಾರೆ. ತಕ್ಷಣ ಮನೆಗೆ ಬಂದು ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


