ಚಿಕ್ಕಮಗಳೂರು: ಪ್ರೀತಿ ನಿರಾಕರಿಸಿದ್ದಕ್ಕೆ ಆಟೋದಿಂದ ತಳ್ಳಿ ಯುವತಿ ಕೊಲೆ!
ಪ್ರೀತಿಯನ್ನು ನಿರಾಕರಿಸಿದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬ ಯುವತಿಯನ್ನು ಆಟೋದಿಂದ ತಳ್ಳಿ ಕೊಲೆ ಮಾಡಿರುವ ಘಟನೆ ನಡೆದಿದೆ.ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಬಸವನಹಳ್ಳಿ ಸಮೀಪ ಘಟನೆ ನಡೆದಿದೆ.

ಚಿಕ್ಕಮಗಳೂರು : ಪ್ರೀತಿಯನ್ನು ನಿರಾಕರಿಸಿದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬ ಯುವತಿಯನ್ನು ಆಟೋದಿಂದ ತಳ್ಳಿ ಕೊಲೆ ಮಾಡಿರುವ ಘಟನೆ ನಡೆದಿದೆ.ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಬಸವನಹಳ್ಳಿ ಸಮೀಪ ಘಟನೆ ನಡೆದಿದೆ.
ಬಾನಳ್ಳಿ ಗ್ರಾಮದ ಆಟೋ ಚಾಲಕ ಚೇತನ್ ಎಂಬಾತ ಈ ಕೊಲೆ ಮಾಡಿದ್ದಾನೆ. ಕೊಲೆಯಾದ ಯುವತಿ ಮೂಡಿಗೆರೆಯ ಕಾಲೇಜಿನಲ್ಲಿ ಅಭ್ಯಾಸ ಮಾಡುತ್ತಿದ್ದಳು.
ಚೇತನ್ ಯುವತಿ ಬಳಿ ಪ್ರೀತಿಸುವಂತೆ ಪೀಡಿಸುತ್ತಿದ್ದ. ಆದರೆ, ಆತನ ಪ್ರೇಮ ನಿವೇದನೆಯನ್ನು ಯುವತಿ ತಿರಸ್ಕರಿಸಿದ್ದಳು. ಹೀಗಾಗಿ, ಯುವತಿಯನ್ನು ಆಟೋದಿಂದ ಕೆಳಗೆ ತಳ್ಳಿ ಚೇತನ್ ಕೊಲೆ ಮಾಡಿದ್ದಾನೆ.
ಬಾನಳ್ಳಿ ಗ್ರಾಮದ ಆಟೋ ಚಾಲಕ ಚೇತನ್ ಎಂಬಾತ, ರಶ್ಮಿಯನ್ನು ಹಲವು ದಿನಗಳಿಂದ ಪ್ರೀತಿ ಮಾಡುವಂತೆ ಪೀಡಿಸುತ್ತಿದ್ದ. ಮೂಡಿಗೆರೆ ಸರ್ಕಾರಿ ಕಾಲೇಜಿನಲ್ಲಿ ದ್ವಿತೀಯ ಬಿ ಕಾಂ ಓದುತ್ತಿದ್ದ ರಶ್ಮಿಗೆ ಈ ಪಾಗಲ್ ಪ್ರೇಮಿ ಚೇತನ್ ಕಾಟ ದಿನೇ ದಿನೇ ಹೆಚ್ಚಾಗಿತ್ತು ಎಂದು ಹೇಳಲಾಗಿದೆ.
ಇದರ ಕುರಿತು ಈ ಹಿಂದೆ ರಶ್ಮಿಯ ಪೋಷಕರು ಬಣಕಲ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಈ ವೇಳೆ ಪೊಲೀಸರು ಬುದ್ದಿ ಹೇಳಿ ವಿದ್ಯಾರ್ಥಿನಿಯ ಸಹವಾಸಕ್ಕೆ ಬರದಂತೆ ತಾಕೀತು ಮಾಡಿದ್ದರು.
ಆದರೆ ನಿನ್ನೆ ಈತ ಬಲವಂತವಾಗಿ ರಶ್ಮಿಯನ್ನು ತನ್ನ ಆಟೋದಲ್ಲಿ ಕೂರಿಸಿಕೊಂಡು ಬಂದು ಮೂಡಿಗೆರೆ ಸಮೀಪದ ಬಸವನಹಳ್ಳಿ ಬಳಿ ಆಟೋದಿಂದ ರಶ್ಮಿಯನ್ನು ಕೆಳಗೆ ತಳ್ಳಿದ್ದಾನೆ.
ಅಲ್ಲದೇ ಈತನೇ ಆಸ್ಪತ್ರೆಗೆ ದಾಖಲು ಮಾಡಿ ರಶ್ಮಿ ತಂದೆಗೆ ಕರೆ ಮಾಡಿ ವಿಷಯ ತಿಳಿಸಿದ್ದಾನೆ, ಅಲ್ಲದೇ ತಾನೇ ಹಾಸನಕ್ಕೆ ಕರೆದುಕೊಂಡು ಹೋಗುತ್ತಿರುವುದಾಗಿಯೂ ಹೇಳಿದ್ದಾನೆ.
ಆದರೆ ಹೆಚ್ಚಿನ ಚಿಕಿತ್ಸೆಗೆ ರಶ್ಮಿಯನ್ನು ಹಾಸನಕ್ಕೆ ಕರೆದುಕೊಂಡು ಹೋಗಿದ್ದು ರಶ್ಮಿ ತಲೆಗೆ ಬಲವಾದ ಪೆಟ್ಟು ಬಿದ್ದ ಕಾರಣ ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ರಶ್ಮಿ ಸಾವನ್ನಪ್ಪಿದ್ದಾಳೆ.
ಇತ್ತ ರಶ್ಮಿ ತಂದೆ ಆಟೋ ಚಾಲಕ ಚೇತನ್ ವಿರುದ್ಧ ಮೂಡಿಗೆರೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಪೊಲೀಸರು ಈ ಬಗ್ಗೆ ತನಿಖೆ ಮುಂದುವರೆಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


