ಕನ್ನಡವನ್ನು ಕಲಿಕಾ ಮಾಧ್ಯಮವನ್ನಾಗಿ ಮಾಡಿ: ಸಾಹಿತ್ಯ ಸಮ್ಮೇಳನದಲ್ಲಿ ಮೊಳಗಿದ ದನಿ
3 ದಿನಗಳ ಕಾಲ ಅದ್ದೂರಿಯಾಗಿ ನಡೆದ 845ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಶುಕ್ರವಾರ ಮುಕ್ತಾಯಗೊಂಡಿದ್ದು, ಸಮ್ಮೇಳನದಲ್ಲಿ ಎಲ್ಲಾ ಸರ್ಕಾರಿ ಹಾಗೂ ಖಾಸಗಿ ಶಾಲೆಗಳಲ್ಲಿ ಕನ್ನಡವನ್ನು ಕಲಿಕಾ ಮಾಧ್ಯಮವನ್ನಾಗಿ ಮಾಡುವಂತೆ ಒತ್ತಾಯಗಳು ಕೇಳಿ ಬಂದವು.

ಕಲಬುರಗಿ: 3 ದಿನಗಳ ಕಾಲ ಅದ್ದೂರಿಯಾಗಿ ನಡೆದ 845ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಶುಕ್ರವಾರ ಮುಕ್ತಾಯಗೊಂಡಿದ್ದು, ಸಮ್ಮೇಳನದಲ್ಲಿ ಎಲ್ಲಾ ಸರ್ಕಾರಿ ಹಾಗೂ ಖಾಸಗಿ ಶಾಲೆಗಳಲ್ಲಿ ಕನ್ನಡವನ್ನು ಕಲಿಕಾ ಮಾಧ್ಯಮವನ್ನಾಗಿ ಮಾಡುವಂತೆ ಒತ್ತಾಯಗಳು ಕೇಳಿ ಬಂದವು.
ಸಮ್ಮೇಳದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಸಿದ್ದರಾಮಯ್ಯ ಅವರು, ಪರೋಕ್ಷವಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.
ಇತ್ತೀಚೆಗೆ ನಡೆಯುತ್ತಿರುವ ಬೆಳವಣಿಗೆಯಿಂದ ನೋವಾಗುತ್ತಿದೆ. ಮೂಲಸಂವಿಧಾನ ಬಲಿಸುವ ಅಭಿವ್ಯಕ್ತಿ ಸ್ವಾತಂತ್ರ್ಯ ಹರಣ ಮಾಡುವ ಕೆಲಸವನ್ನು ಯಾರೂ ಮಾಡಬಾರದು ಎಂದು ಹೇಳಿದರು.
ಇದೇ ವೇಳೆ ಹಿಂದೆ ನಾನು ಮುಖ್ಯಮಂತ್ರಿಯಾಗಿದ್ದ ಮಾತೃಭಾಷೆಯಲ್ಲಿಯೇ ಪ್ರಾಥಮಿಕ ಶಿಕ್ಷಣವನ್ನು ನೀಡುವ ವಿಚಾರವಾಗಿ ಸಂವಿಧಾನದಲ್ಲಿ ತಿದ್ದುಪಡಿ ತರಬೇಕೆಂದು ಪ್ರಧಾನಿಗೆ ಮನವಿ ಮಾಡಲಾಗಿತ್ತು. ಆದರೆ, ಅದು ಕಾರ್ಯಸಾಧುಗೊಂಡಿಲ್ಲ. ಇದೀಗ ರಾಜ್ಯದ ಮುಖ್ಯಮಂತ್ರಿಗಳು ಪ್ರಧಾನಮಂತ್ರಿ ಮೇಲೆ ಒತ್ತಡ ಹೇರಿ ಆ ಬೇಡಿಕೆಯನ್ನು ಈಡೇರಿಸಬೇಕಂದು ಒತ್ತಾಯಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


