ಬಾಬ್ರಿ ಮಸೀದಿ ಧ್ವಂಸ ಕುರಿತು ಶಾಲೆಯಲ್ಲಿ ಮಕ್ಕಳ ನಾಟಕ: ರಾಜ್ಯ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಕಿಡಿ
ಆರ್'ಎಸ್ಎಸ್ ಮುಖ್ಯಸ್ಥ ಕಲ್ಲಡ್ಕ ಪ್ರಭಾಕರ ಭಟ್ಟರ ಶ್ರೀರಾಮ ವಿದ್ಯಾಕೇಂದ್ರ ಶಾಲೆಯಲ್ಲಿ ಆಯೋಜಿಸಿದ್ದ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಬಾಬ್ರಿ ಮಸೀದಿ ಧ್ವಂಸ ಕುರಿತು ಮಕ್ಕಳು ಶಾಲೆಯಲ್ಲಿ ಪ್ರದರ್ಶಿಸಿದ್ದ ನಾಟಕ ಪ್ರಕರಣ ಕುರಿತು ಯಡಿಯೂರಪ್ಪ ವಿರುದ್ಧ ಸಿದ್ದರಾಮಯ್ಯ ಅವರು ತೀವ್ರವಾಗಿ ಕಿಡಿಕಾರಿದ್ದಾರೆ.

ಬೆಂಗಳೂರು: ಆರ್'ಎಸ್ಎಸ್ ಮುಖ್ಯಸ್ಥ ಕಲ್ಲಡ್ಕ ಪ್ರಭಾಕರ ಭಟ್ಟರ ಶ್ರೀರಾಮ ವಿದ್ಯಾಕೇಂದ್ರ ಶಾಲೆಯಲ್ಲಿ ಆಯೋಜಿಸಿದ್ದ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಬಾಬ್ರಿ ಮಸೀದಿ ಧ್ವಂಸ ಕುರಿತು ಮಕ್ಕಳು ಶಾಲೆಯಲ್ಲಿ ಪ್ರದರ್ಶಿಸಿದ್ದ ನಾಟಕ ಪ್ರಕರಣ ಕುರಿತು ಯಡಿಯೂರಪ್ಪ ವಿರುದ್ಧ ಸಿದ್ದರಾಮಯ್ಯ ಅವರು ತೀವ್ರವಾಗಿ ಕಿಡಿಕಾರಿದ್ದಾರೆ.
ರಾಜ್ಯ ಸರ್ಕಾರದ ವಿರುದ್ಧ ಸಾಮಾಜಿಕ ಜಾಲತಾಣ ಟ್ವಿಟರ್ ವಲ್ಲಿ ಸರಣಿ ಟ್ವೀಟ್ ಮಾಡುವ ಮೂಲಕ ಸಿದ್ದರಾಮಯ್ ಯ ಅವರು ತೀವ್ರವಾಗಿ ಕಿಡಿಕಾರಿದ್ದಾರೆ.
ಬೀದರ್ ಶಾಲೆಯ ಮಕ್ಕಳು ತನಗೆ ಇಷ್ಟವಾಗದ ನಾಟಕ ಪ್ರದರ್ಶಿಸಿದರು ಎನ್ನುವ ಕ್ಷುಲಕ ಕಾರಣಕ್ಕೆ ಮಕ್ಕಳು ಮತ್ತು ಹೆತ್ತವರ ಮೇಲೆ ಪೊಲೀಸರನ್ನು ಛೂ ಬಿಟ್ಟು ಹಿಂಸಿಸುತ್ತಿರುವ ರಾಜ್ಯ ಸರ್ಕಾರದ ನಡೆ ಖಂಡನೀಯ. ಪುಟ್ಟ ಮಕ್ಕಳ ಪ್ರತಿರೋಧವನ್ನು ಎದುರಿಸಲಾಗದಷ್ಟು ಬಿಜೆಪಿ ಸೈದ‍್ಧಾಂತಿಕವಾಗಿ ದಿವಾಳಿಯಾಗಿದೆ. ಬೀದರ್ ಶಾಲೆಯ ಮಕ್ಕಳ ನಾಟಕದಲ್ಲಿ ದೇಶದ್ರೋಹ ಕಂಡ ಕುರುಡು ಬಿಜೆಪಿಗೆ ಕಲ್ಲಡ್ಕದ ಶಾಲೆಯಲ್ಲಿ ಮಕ್ಕಳು ಬಾಬರಿ ಮಸೀದಿ ಧ್ವಂಸದ ಕಾರ್ಯಾಚರಣೆಯ ಪ್ರದರ್ಶನ ನೀಡಿ ನೆಲದ ಕಾನೂನನ್ನು ಉಲ್ಲಂಘಿಸಿದ ಮತ್ತು ನ್ಯಾಯಾಲಯವನ್ನು ಅಣಕ ಮಾಡಿದ ಕಿಡಿಗೇಡಿತನ ದೇಶದ್ರೋಹವಾಗಿ ಕಾಣುತ್ತಿಲ್ಲವೇ?
ಹೌದು, ಸರ್ವಾಧಿಕಾರಿ ದುರ್ಬಲನಾದಷ್ಟು ಕ್ರೂರಿಯಾಗುತ್ತಾನೆ. ದೆಹಲಿ ವಿಶ್ವವಿದ್ಯಾಲಯಗಳಿಗೆ ಪೊಲೀಸರನ್ನು ನುಗ್ಗಿಸಿದ, ಶಾಂತಿಯುತ ಪ್ರತಿಭಟನೆಕಾರರ ಮೇಲೆ ಗುಂಡು ಹಾರಿಸಲು ಪ್ರಚೋದನೆ ನೀಡಿದ ಸರ್ವಾಧಿಕಾರಿ ಮನಸ್ಸೇ ಬೀದರ್ ನಲ್ಲಿ ಪುಟ್ಟಮಕ್ಕಳ ಮೇಲೆ ಸೇಡು ತೀರಿಸಲು ಹೊರಟಿದೆ. ಬೀದರ್ ನ ಶಾಹಿನ್ ವಿದ್ಯಾಸಂಸ್ಥೆ,ವಿದ್ಯಾರ್ಥಿಗಳು ಮತ್ತು ಹೆತ್ತವರ ಮೇಲೆ ದಾಖಲಿಸಿರುವ ದೇಶದ್ರೋಹದ ಪ್ರಕರಣವನ್ನು ಪೊಲೀಸರು ತಕ್ಷಣ ವಾಪಸು ಪಡೆಯಲು ಆಗ್ರಹಿಸುತ್ತಿದ್ದೇನೆ. ಭ್ರಷ್ಟರನ್ನು ಖರೀದಿಸಿ ಅಧಿಕಾರದಲ್ಲಿರುವ ಸರ್ಕಾರ, ಜನವಿರೋಧಿ ಕೃತ್ಯಕ್ಕಿಳಿದರೆ ನಿರೀಕ್ಷೆಗಿಂತ ಮೊದಲೇ ನಾಶವಾಗಲಿದೆ.
ಕತೆ, ಕವನ, ನಾಟಕಗಳಂತಹ ಸೃಜನಶೀಲ ಅಭಿವ್ಯಕ್ತಿಯನ್ನು ದಮನಿಸುವ ರಾಜ್ಯ ಸರ್ಕಾರದ ಕ್ರಮವನ್ನು ಸಹಿಸಿಕೊಂಡಿರಲು ಸಾಧ್ಯವಿಲ್ಲ. ಈ ಹಿನ್ನೆಲೆಯಲ್ಲಿ ಬೀದರ್‌ನ ವಿದ್ಯಾರ್ಥಿಗಳು ಮತ್ತು ಹೆತ್ತವರ ಮೇಲಿನ ಪ್ರಕರಣ ಮಾತ್ರವಲ್ಲ, ಬಳ್ಳಾರಿಯ ಕವಿಯ ಮೇಲೆ ದಾಖಲಿಸಿರುವ ಪ್ರಕರಣವನ್ನು ವಾಪಾಸು ಪಡೆಯಬೇಕು ಎಂದು ಸರ್ಕಾರವನ್ನು ಆಗ್ರಹಿಸುತ್ತೇನೆಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


