ತೊಗರಿಬೇಳೆ ಸಂಗ್ರಹಣ ಹೆಚ್ಚಳಕ್ಕೆ ಸರ್ಕಾರ ನಿರ್ಧಾರ: ಯಡಿಯೂರಪ್ಪ
ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಇತರೆ ರೈತರ ಪರ ಸಂಘಟನೆಗಳ ಆಗ್ರಹಂತೆ ಪ್ರತಿ ರೈತನಿಗೆ 10 ಕ್ವಿಂಟಾಲ್ ನಿಂದ 20 ಕ್ವಿಂಟಾಲ್'ವರೆಗೂ ತೊಗರಿಬೇಳೆ ಸಂಗ್ರಹವನ್ನು ಹೆಚ್ಚಿಸುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಆದೇಶಿಸಿದ್ದಾರೆ.

ಬೀದರ್: ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಇತರೆ ರೈತರ ಪರ ಸಂಘಟನೆಗಳ ಆಗ್ರಹಂತೆ ಪ್ರತಿ ರೈತನಿಗೆ 10 ಕ್ವಿಂಟಾಲ್ ನಿಂದ 20 ಕ್ವಿಂಟಾಲ್'ವರೆಗೂ ತೊಗರಿಬೇಳೆ ಸಂಗ್ರಹವನ್ನು ಹೆಚ್ಚಿಸುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಆದೇಶಿಸಿದ್ದಾರೆ.
ರೈತರು ಹಾಗೂ ಜಾನುವಾರಿ ಮಾಲೀಕರನ್ನು ಉತ್ತೇಜಿಸುವ ಉದ್ದೇಶದಿಂದ ರಾಜ್ಯ ಮಟ್ಟದಲ್ಲಿ ಪಶುಮೇಳವನ್ನು ಬೀದರ್ ನಲ್ಲಿ ನಡೆಸಲಾಗುತ್ತಿದ್ದು, ಮೇಳವನ್ನು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಶುಕ್ರವಾರ ಉದ್ಘಾಟನೆ ಮಾಡಿದ್ದಾರೆ.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಮುಂಬರುವ ರಾಜ್ಯ ಬಜೆಟ್ ನಲ್ಲಿ ರೈತರಿಗೆ ಸಂಬಂಧಿಸಿದ ಸಮಸ್ಯೆಗಳು ಹಾಗೂ ಸ್ಥಿರ ಆದಾಯಕ್ಕಾಗಿ ಡೈರಿ ಕೃಷಿಗಳ ಕುರಿತ ವಿಚಾರಗಳನ್ನು ಪರಿಗಣಿಸಲಾಗುತ್ತದೆ ಎಂದು ಹೇಳಿದ್ದಾರೆ.
ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕ ಬಂಡೆಪ್ಪ ಕಾಶೆಂಪುರ್ ಅವರು, ಯಡಿಯೂರಪ್ಪ ಅವರು ತೆಲಂಗಾಣ ಮಾದರಿಯನ್ನು ಅನುಸರಿಸಬೇಕಿದೆ. ತೆಲಂಗಾಣ ರಾಜ್ಯದಲ್ಲಿ ರೈತರಿಗೆ ಹಸು ಹಾಗೂ ಕಾರ್ಮಿಕರನ್ನು ನೀಡಲಾಗುತ್ತಿದೆ. ಈ ಬಾರಿ ಬೀದರ್ ನಲ್ಲಿ ಮಳೆಯ ಅಭಾವ ಹೆಚ್ಚಾಗಿದ್ದು, ಕುಡಿಯುವ ನೀರಿಗೆ ಆಹಾಕಾರ ಎದುರಾಗಿದೆ. ಹೀಗಾಗಿ ಕೃಷ್ಣ ಹಾಗೂ ಗೋದಾವರಿ ನಂದಿಗಳನ್ನು ಜೋಡಣೆ ಮಾಡಬೇಕು ಎಂದು ಆಗ್ರಹಿಸಿದರು.
ಇದಕ್ಕೆ ಪ್ರತಿಕ್ರಿಯೆ ನೀಡಿದ ಯಡಿಯೂರಪ್ಪ ಅವರು, ಜನರಿಗೆ ಸೂಕ್ತ ರೀತಿಯಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಅಲ್ಲದೆ, ಕಾಶೆಂಪು್ ಅವರ ಆಗ್ರಹಗಳ ಕುರಿತು ಪರಿಶೀಲನೆ ನಡೆಸುವುದಾಗಿ ಹಾಗೂ ಅಗತ್ಯ ಕ್ರಮಗಳನ್ನು ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


