ರಾಜ್ಯ

ಪ್ರತ್ಯೇಕ ಅಪಘಾತ, ಐವರು ದುರ್ಮರಣ

ರಾಜ್ಯದ ಬೇರೆ ಬೇರೆ ಕಡೆ ನಡೆದ ಪ್ರತ್ಯೇಕ ರಸ್ತೆ ಅಪಘಾತದಲ್ಲಿ ಐವರು ಸಾವನ್ನಪ್ಪಿದ್ದಾರೆ. ವಿಜಯಪುರ ಹಾಗೂ ತುಮಕೂರುಗಳಲ್ಲಿ ಈ ಅವಘಡ ಸಮ್ಬವಿಸಿದೆ.

ಪ್ರತ್ಯೇಕ ಅಪಘಾತ, ಐವರು ದುರ್ಮರಣ
ಸಂಗ್ರಹ ಚಿತ್ರ
Published On :

ವಿಜಯಪುರ/ತುಮಕೂರು: ರಾಜ್ಯದ ಬೇರೆ ಬೇರೆ ಕಡೆ ನಡೆದ ಪ್ರತ್ಯೇಕ ರಸ್ತೆ ಅಪಘಾತದಲ್ಲಿ ಐವರು ಸಾವನ್ನಪ್ಪಿದ್ದಾರೆ. ವಿಜಯಪುರ ಹಾಗೂ ತುಮಕೂರುಗಳಲ್ಲಿ ಈ ಅವಘಡ ಸಮ್ಬವಿಸಿದೆ.

ಲಾರಿವೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ನಿಡಗುಂದಿ ತಾಲೂಕಿನ ಗೊಳಸಂಗಿ ಸಂಭವಿಸಿದೆ. ಗೊಳಸಂಗಿ ಬಳಿಯ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಈ ದುರ್ಘಟನೆ ಸಂಭವಿಸಿದೆ.

ಕಾರಿನಲ್ಲಿದ್ದ ಹೊಸಪೇಟೆ ಮೂಲದ ರಾಜೇಶ್ (32), ಯೇಸುವಾಸ್ (32), ಭುಜಂಗರಾವ್ (38) ಮೃತ ದುರ್ದೈವಿಗಳು. ಇವರು ಹೊಸಪೇಟೆಯಿಂದ ವಿಜಯಪುರಕ್ಕೆ ಆಗಮಿಸುತ್ತಿದ್ದರು.ಟನೆ ಬಳಿಕ ಲಾರಿ ಬಿಟ್ಟು ಚಾಲಕ ಹಾಗೂ ಕ್ಲೀನರ್ ಇಬ್ಬರೂ ನಾಪತ್ತೆಯಾಗಿದ್ದಾರೆ. ಎನ್‍ಟಿಪಿಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ

ಮರಕ್ಕೆ ಕಾರು ಡಿಕ್ಕಿ: ಇಬ್ಬರು ಸಾವು

ಮರವೊಂದಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟಿರುವ ಘಟನೆ ಜಿಲ್ಲೆಯ ಶಿರಾ ತಾಲೂಕಿನ ಕುರುಬ ರಾಮನಹಳ್ಳಿ ಗೇಟ್ ಬಳಿ ಸಂಭವಿಸಿದೆ.

ಕಾರಿನಲ್ಲಿದ್ದ ಹನುಮಂತರಾಯಪ್ಪ (38), ಪವನ್ (30) ಮೃತ ದುರ್ದೈವಿಗಳು. ಮೃತರು ಮೂಲತಃ ಆಂಧ್ರಪ್ರದೇಶದ ಮಡಕಶಿರಾದವರು ಎನ್ನಲಾಗಿದೆ. ಅಪಘಾತದಲ್ಲಿ ಓರ್ವನಿಗೆ ಗಾಯಗಳಾಗಿದ್ದು, ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.