ರಾಜ್ಯ

ಫೆ.13ಕ್ಕೆ ಕರ್ನಾಟಕ ಬಂದ್: ಆಟೋ, ಕ್ಯಾಬ್ ಚಾಲಕರ ಬೆಂಬಲ

ಕರ್ನಾಟಕದಲ್ಲಿ ಕನ್ನಡಿಗರಿಗೆ ಉದ್ಯೋಗಕ್ಕಾಗಿ ಸರೋಜಿನಿ ಮಹಿಷಿ ವರದಿ ಜಾರಿಗೆ ಆಗ್ರಹಿಸಿ ಫೆ.13 ರಂದು ಕರ್ನಾಟಕ ಬಂದ್'ಗೆ ಕರೆ ನೀಡಿದ್ದು, ಕನ್ನಡಪರ ಸಂಘಟನೆಗಳು ಸೇರಿದಂತೆ ಹಲವು ಸಂಘಟನೆಗಳು ಈ ಬಂದ್'ಗೆ ಬೆಂಬಲ ನೀಡಿವೆ ಎಂದು ಕರ್ನಾಟಕ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ನಾಗೇಶ್ ಅವರು ಹೇಳಿದ್ದಾರೆ.

ಫೆ.13ಕ್ಕೆ ಕರ್ನಾಟಕ ಬಂದ್: ಆಟೋ, ಕ್ಯಾಬ್ ಚಾಲಕರ ಬೆಂಬಲ
ಸಂಗ್ರಹ ಚಿತ್ರ
Published On :

ಬೆಂಗಳೂರು: ಕರ್ನಾಟಕದಲ್ಲಿ ಕನ್ನಡಿಗರಿಗೆ ಉದ್ಯೋಗಕ್ಕಾಗಿ ಸರೋಜಿನಿ ಮಹಿಷಿ ವರದಿ ಜಾರಿಗೆ ಆಗ್ರಹಿಸಿ ಫೆ.13 ರಂದು ಕರ್ನಾಟಕ ಬಂದ್'ಗೆ ಕರೆ ನೀಡಿದ್ದು, ಕನ್ನಡಪರ ಸಂಘಟನೆಗಳು ಸೇರಿದಂತೆ ಹಲವು ಸಂಘಟನೆಗಳು ಈ ಬಂದ್'ಗೆ ಬೆಂಬಲ ನೀಡಿವೆ ಎಂದು ಕರ್ನಾಟಕ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ನಾಗೇಶ್ ಅವರು ಹೇಳಿದ್ದಾರೆ. 

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಿಗ್ಗೆ 10 ಗಂಟೆಗೆ ಬೆಂಗಳೂರಿನ ಪುರಭವನದಿಂದ ಸ್ವಾತಂತ್ರ್ಯ ಉದ್ಯಾನದವರೆಗೆ ಬೃಹತ್ ರ್ಯಾಲಿ ನಡೆಸಲಾಗುವುದು. ಸರೋಜಿ ಮಹಿಷಿ ವರದಿ ಜಾರಿಗೆ ಆಗ್ರಹಿಸಿ ಕಳೆದ 97 ದಿನಗಳಿಂದ ನಗರದ ಮೌರ್ಯ ವೃತ್ತದಲ್ಲಿ ಧರಣಿ ನಡೆಸುತ್ತಿದ್ದೇವೆ. ಈ ಧರಣಿಯಲ್ಲಿ ಈ ವರೆಗೆ 40ಕ್ಕೂ ಹೆಚ್ಚು ಮಠಾಧೀಶರು, ಜನಪ್ರತಿನಿಧಿಗಳು, ಕನ್ನಡಪರ ಸಂಘಟನೆಗಳ ಮುಖಂಡರು ಭಾಗವಹಿಸಿ ಬೆಂಬಲ ಸೂಚಿಸಿದ್ದಾರೆ. 

ಇಷ್ಟಾದರೂ ರಾಜ್ಯ ಸರ್ಕಾರ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಹೀಗಾಗಿ ಕರ್ನಾಟಕ ಬಂದ್'ಗೆ ಕರೆ ನೀಡುವುದು ಅನಿವಾರ್ಯವಾಗಿದೆ ಎಂದರು. ಕರ್ನಾಟಕ ಬಂದ್'ಗೆ ರಾಜ್ಯ ಮಹಿಳಾ ಒಕ್ಕೂಟ, ಕನ್ನಡಪರ ಸಂಘಗಳು, ಲಾರಿ ಹಾಗೂ ಮಾಲೀಕರ ಒಕ್ಕೂಟಗಳು, ಬಿಎಂಟಿಸಿ, ಆಟೋ, ಕಾರು ಚಾಲಕರು ಹಾಗೂ ಮೂರು ದಲಿತ ಸಂಘರ್ಷ ಸಮಿತಿಗಳು ಬೆಂಬಲ ವ್ಯಕ್ತಪಡಿಸಿವೆ. 

ಅಂದು ನಡೆಯುವ ಬೃಹತ್ ರ್ಯಾಲಿಯಲ್ಲಿ ಸುಮಾರು 50 ಸಾವಿರಕ್ಕೂ ಅಧಿಕ ಮಂದಿ ಪಾಲ್ಗೊಳ್ಲಲಿದ್ದಾರೆಂದು ಹೇಳಿದರು. ಮಾತೃಭಾಷೆ ಕನ್ನಡದಲ್ಲಿ ವಿದ್ಯಾಭ್ಯಾಸ ಮಾಡಿದ ಸ್ಥಳೀಯರಿಗೆ ಕರ್ನಾಟಕದಲ್ಲೇ ಉದ್ಯೋಗ ಸಿಗುತ್ತಿಲ್ಲ. ಲಕ್ಷಾಂತರ ಯುವಕರು ನಿರುದ್ಯೋಗಿಗಳಾಗಿದ್ದಾರೆ. ಇದನ್ನು ಗಂಭೀರವಾಗಿ ಪರಿಗಣಿಸಿ ಸರ್ಕಾರ ಸರೋಜಿನಿ ಮಹಿಷಿ ವರದಿ ಜಾರಿ ಮಾಡಬೇಕು. ಕನ್ನಡಿಗರಿಗೆ ಉದ್ಯೋಗ ಲಭ್ಯವಾಗುವಂತೆ ಮಾಡಬೇಕೆಂದು ಆಗ್ರಹಿಸಿದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.