ನೌಕರಿಗೆ ಚಕ್ಕರ್ ಹೊಡೆಯುವುದಕ್ಕೂ ಮುನ್ನ ಎಚ್ಚರ: ವಿಧಾನಸೌಧದಲ್ಲಿ ನೌಕರರ ಚಲನವಲನದ ಮೇಲೆ ಸರ್ಕಾರ ನಿಗಾ
ವಿಧಾನಸೌಧ, ವಿಕಾಸಸೌಧ ಹಾಗೂ ಬಹುಮಹಡಿ ಕಟ್ಟಡಗಳ ಕಚೇರಿಗಳಲ್ಲಿ ಕಾರ್ಯನಿರ್ವಹಿಸುವ ಸಚಿವಾಲಯದ ಅಧಿಕಾರಿಗಳು ಹಾಗೂ ನೌಕರರು ಕಚೇರಿ ವೇಳೆಯಲ್ಲಿ ಅನಗತ್ಯ ಹೊರಗಡೆ ಕಾಲಹರಣ ಮಾಡುವುದು, ವೈಯಕ್ತಿಕ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವುದನ್ನು ತಡೆಯಲು ಕಟ್ಟುನಿಟ್ಟಿನ ನಿರ್ಬಂಧ ವಿಧಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಬೆಂಗಳೂರು: ವಿಧಾನಸೌಧ, ವಿಕಾಸಸೌಧ ಹಾಗೂ ಬಹುಮಹಡಿ ಕಟ್ಟಡಗಳ ಕಚೇರಿಗಳಲ್ಲಿ ಕಾರ್ಯನಿರ್ವಹಿಸುವ ಸಚಿವಾಲಯದ ಅಧಿಕಾರಿಗಳು ಹಾಗೂ ನೌಕರರು ಕಚೇರಿ ವೇಳೆಯಲ್ಲಿ ಅನಗತ್ಯ ಹೊರಗಡೆ ಕಾಲಹರಣ ಮಾಡುವುದು, ವೈಯಕ್ತಿಕ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವುದನ್ನು ತಡೆಯಲು ಕಟ್ಟುನಿಟ್ಟಿನ ನಿರ್ಬಂಧ ವಿಧಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಸಚಿವಾಲಯದ ಸಿಬ್ಬಂದಿ ಕಚೇರಿ ಸಮಯದಲ್ಲಿ ಅನಗತ್ಯವಾಗಿ ಹೊರಗೆ ಹೋಗುವಂತಿಲ್ಲ. ಕಚೇರಿ ಸಮಯ ತಮ್ಮ ಸ್ಥಾನದಲ್ಲಿಯೇ ಕುಳಿತು ಕಾರ್ಯನಿರ್ವಹಿಸಬೇಕು. ಸಿಬ್ಬಂದಿಯಲ್ಲಿ ಶಿಸ್ತು ಹಾಗೂ ಸಮಯ ಪ್ರಜ್ಞೆ ಮೂಡಿಸಲು ಸಿಬ್ಬಂದಿಯ ಚಲನವಲನಗಳ ಬಗ್ಗೆ ನಿಗಾವಹಿಸಲು ಚಲನವಲನ ವಹಿ ನಿರ್ವಹಣೆ ಮಾಡಬೇಕು. ಒಂದು ವೇಳೆ ಹೊರಗಡೆ ಹೋಗಬೇಕಾದರೆ ಹಿರಿಯ ಅಧಿಕಾರಿಯ ಅನುಮತಿ ಪಡೆದು, ಹೊರಗೆ ಹೋಗುತ್ತಿರುವ ಕಾರಣ ಮತ್ತು ವಾಪಸು ಬಂದ ಸಮಯನ್ನು ಸಹಿಯ ಸಮೇತ ಬರೆಯಬೇಕು ಎಂದು ಸಿಬ್ಬಂದಿ-ಆಡಳಿತ ಸುಧಾರಣೆ ಇಲಾಖೆ ಆದೇಶ ಹೊರಡಿಸಿದೆ.
ಕಚೇರಿ ಅವಧಿಯಲ್ಲಿ ಅಧಿಕಾರಿಗಳು ಮತ್ತು ನೌಕರರು ವೈಯಕ್ತಿಕ ಕೆಲಸ, ಅನ್ಯ ಚಟುವಟಿಕೆಯಲ್ಲಿ ತೊಡಗಿರುವ ಬಗ್ಗೆ ದೂರುಗಳು ಬಂದಿವೆ. ಹೀಗಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿಎಂ. ವಿಜಯಭಾಸ್ಕರ್ ಇದಕ್ಕೆ ಕಡಿವಾಣ ಹಾಕುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಹೀಗಾಗಿ ವಿಧಾನಸೌಧ, ವಿಕಾಸಸೌಧ ಮತ್ತು ಬಹುಮಹಡಿ ಕಟ್ಟಡಗಳಲ್ಲಿ ಕರ್ತವ್ಯ ನಿರ್ವಹಿಸುವ ನೌಕರರು ಕಚೇರಿ ವೇಳೆಯಲ್ಲಿ ವೈಯಕ್ತಿಕ ಕೆಲಸ, ಕ್ಯಾಂಟೀನ್ ಇತ್ಯಾದಿ ಕಾರಣಗಳನ್ನು ನೀಡಿ ಹೊರಗೆ ಹೋಗುವಂತಿಲ್ಲ. ಈ ಬಗ್ಗೆ ನಿಗಾವಹಿಸಲು ಪ್ರತಿಯೊಂದು ಶಾಖೆಯಲ್ಲಿಯೂ ಒಂದು ಚಲನವಲನ ವಹಿ ನಿರ್ವಹಿಸಬೇಕು. ಹೊರಗೆ ಹೋಗುವವರು ಅನುಮತಿ ಪಡೆಯದೆ, ಕಾರಣ ನಮೂದಿಸದೆ ಹೋಗಿದ್ದರೆ ಅನಧಿಕೃತ ಗೈರು ಎಂದು ಪರಿಗಣಿಸಿ ಉನ್ನತ ಅಧಿಕಾರಿಗಳು ಕ್ರಮಕೈಗೊಳ್ಳಬಹುದು ಎಂದು ಆದೇಶದಲ್ಲಿ ಹೇಳಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


